ಉತ್ತರ ಕನ್ನಡ | ಸರ್ಕಾರಿ ಶಾಲೆ ಬಳಿ ದುರ್ವಾಸನೆ; ಹೊರಗೆ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

Date:

ಶಾಲೆಯ ಸಮೀಪದ ಪಾಳು ಭೂಮಿಯು ಬಯಲು ಬಹಿರ್ದೆಸೆ ಮತ್ತು ಕೊಳಚೆಯ ತಾಣವಾಗಿದೆ. ಪರಿಣಾಮ, ಶಾಲೆಯ ವಿದ್ಯಾರ್ಥಿಗಳು ದುರ್ವಾಸನೆಯ ನಡುವೆಯೇ ಪಾಠ ಕೇಳುವ ಪರಿಸ್ಥಿತಿ ಹಳ್ಳೂರು ಸರ್ಕಾರಿ ಶಾಲೆಯಲ್ಲಿದೆ.

- Advertisement -

ಉತ್ತರ ಕನ್ನಡ ಜಿಲ್ಲೆಯ ಮಂಡಗೋಡ ತಾಲೂಕಿನ ಹಳ್ಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕಳೆದ ಮೂರು ವರ್ಷಗಳಿಂದ ಇಂತಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ದುರ್ವಾಸನೆಯ ತಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ದುರ್ವಾಸನೆಯಿಂದಾಗಿನಮಗೆ ಸರಿಯಾಗಿ ಉಸಿರಾಡಲು ಸಹ ಸಾಧ್ಯವಾಗಲಿಲ್ಲ. ಸರಿಯಾದ ಚರಂಡಿ ನಿರ್ಮಾಣ ಮಾಡಿ ಕೊಳಚೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು. ಆದರೆ, ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ತರಗತಿಯಲ್ಲಿ ಕೂರಲಾಗದೆ, ಹೊರಗಡೆ ಪಾಠ ಮಾಡುವಂತೆ ನಾವು ಶಿಕ್ಷಕರಿಗೆ ಮನವಿ ಮಾಡಿದ್ದೇವೆ” ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

“ಶಾಲೆಯಲ್ಲಿ ನಾಲ್ವರು ಶಿಕ್ಷಕರು ಹಾಗೂ ಇಬ್ಬರು ಅತಿಥಿ ಶಿಕ್ಷಕರಿದ್ದಾರೆ. ಶಾಲೆಯ ಹಿಂದೆ ಒಬ್ಬರು ಮನೆ ನಿರ್ಮಾಣ ಮಾಡಿದ್ದಾರೆ. ಅವರ ಮನೆಯ ಶೌಚಾಲಯ ಮತ್ತು ತ್ಯಾಜ್ಯದ ನೀರು ಶಾಲೆಯ ಕಡೆಗೆ ಹರಿಯುತ್ತದೆ. ಆ ಬಗ್ಗೆ ಹಲವು ಬಾರಿ ಅವರಿಗೆ ತಿಳಿಸಿದ್ದೇವೆ. ಆದರೆ, ಏನೂ ಉಪಯೋಗವಾಗಿಲ್ಲ. ಸಮಸ್ಯೆ ಬಗ್ಗೆ ತಹಶೀಲ್ದಾರ್ ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳ ಗಮನಕ್ಕೂ ತಂದಿದ್ದೇವೆ. ಅವರು ಕೂಡ ಏನೂ ಮಾಡಿಲ್ಲ. ನಮಗೆ ಸಾಕಾಗಿಹೋಗಿದೆ” ಎಂದು ಶಾಲೆಯ ಮುಖ್ಯಶಿಕ್ಷಕ ನಾಗರಾಜ್ ಕ್ಯಾಲಕೊಂಡ್ ಹೇಳಿದ್ದಾರೆ.

“ದುರ್ವಾಸನೆಯಿಂದಾಗಿ ಅನೇಕ ವಿದ್ಯಾರ್ಥಿಗಳು ಶಾಲೆ ತೊರೆದಿದ್ದಾರೆ. ಈ ಹಿಂದೆ 200 ವಿದ್ಯಾರ್ಥಿಗಳು ಇದ್ದರು. ಈಗ ವಿದ್ಯಾರ್ಥಿಗಳ ಸಂಖ್ಯೆ 120ಕ್ಕೆ ಕುಸಿದಿದೆ” ಎಂದು ಅವರು ತಿಳಿಸಿದ್ದಾರೆ.

“ಶಾಲೆಯ ಹಿಂಭಾಗದಲ್ಲಿರುವ ಖಾಸಗಿ ಮನೆಗೆ ಚರಂಡಿ ಇಲ್ಲ. ಹೆಚ್ಚೆಂದರೆ, ನಾನು ಒಳಚರಂಡಿಯನ್ನು ನಿರ್ಮಾಣ ಮಾಡಬಹುದು. ನಾವು ಅದನ್ನು ಶೀಘ್ರದಲ್ಲೇ ಮಾಡುತ್ತೇವೆ” ಎಂದು ಮುಖ್ಯಾಧಿಕಾರಿ ಚಂದ್ರಶೇಖರ ಬಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...