ಜೋಯಿಡಾ | ಹಾವು ಕಡಿದು ಗೋವಾ ಕಾಂಗ್ರೆಸ್ ಉಪಚುನಾವಣಾ ಅಭ್ಯರ್ಥಿ ಡಾ. ಕೇತನ್ ಭಾಟಿಕರ್ ದುರ್ಮರಣ

Date:

ಜೋಯಿಡಾ: ಉತ್ತರ ಕನ್ನಡ ಜಿಲ್ಲೆಯ ಗಡಿ ಭಾಗವಾದ ಅನಮೋಡ್ ಸಮೀಪದ ಅರಣ್ಯ ಪ್ರದೇಶದಲ್ಲಿ ಗೋವಾ ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ, ಖ್ಯಾತ ವೈದ್ಯ ಡಾ. ಕೇತನ್ ಭಾಟಿಕರ್ (Dr. Ketan Bhatikar) ನಾಗರಹಾವು ಕಡಿತದಿಂದ ಮೃತಪಟ್ಟಿದ್ದಾರೆ.

- Advertisement -

ಘಟನೆಯ ವಿವರ: ಪಕ್ಷದ ಪ್ರಮುಖ ಸಭೆಯೊಂದರಲ್ಲಿ ಭಾಗವಹಿಸಲು ಡಾ. ಕೇತನ್ ಅವರು ಗೋವಾದಿಂದ ಜೋಯಿಡಾ ತಾಲೂಕಿನ ರಾಮನಗರ ವ್ಯಾಪ್ತಿಯ ಅನಮೋಡ್ ಘಟ್ಟ ಪ್ರದೇಶಕ್ಕೆ ಸ್ನೇಹಿತರೊಂದಿಗೆ ಆಗಮಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಈ ಸಂದರ್ಭದಲ್ಲಿ ಮೂತ್ರ ವಿಸರ್ಜನೆಗಾಗಿ ರಸ್ತೆ ಬದಿಯ ಕಾಡಿನ ಕಡೆಗೆ ತೆರಳಿದ್ದಾಗ, ಅನಿರೀಕ್ಷಿತವಾಗಿ ಅವರ ಕಾಲಿಗೆ ವಿಷಪೂರಿತ ನಾಗರಹಾವು ಕಚ್ಚಿದೆ. ತಕ್ಷಣವೇ ಅವರನ್ನು ಗೋವಾದ ಬಾಂಬೋಲಿನ್‌ನಲ್ಲಿರುವ ಜಿ.ಎಂ.ಸಿ (GMC) ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಅವರು ಕೊನೆಯುಸಿರೆಳೆದಿದ್ದಾರೆ.

ಈ ಸುದ್ದಿ ಓದಿದ್ದೀರಾ ? ಮುಂಡಗೋಡ | ನರೇಗಾ ಕೆಲಸಕ್ಕೆ ಕೊರತೆ ಇಲ್ಲ: ಅಗತ್ಯವಿರುವವರು ಮುಂದೆ ಬರಲಿ – ಇಒ ಟಿ. ವಾಯ್. ದಾಸನಕೊಪ್ಪ

ಗೋವಾದ ಕೃಷಿ ಸಚಿವರಾಗಿದ್ದ ಬಿಜೆಪಿಯ ರವಿ ನಾಯ್ಕ್ ಅವರ ನಿಧನದಿಂದ ತೆರವಾಗಿದ್ದ ಪೊಂಡಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಡಾ. ಕೇತನ್ ಭಾಟಿಕರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ವೃತ್ತಿಯಲ್ಲಿ ವೈದ್ಯರಾಗಿದ್ದ ಇವರು ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಅಪಾರ ಜನಮನ್ನಣೆ ಗಳಿಸಿದ್ದರು.

ಈ ಬಾರಿಯ ಚುನಾವಣೆಯಲ್ಲಿ ಅವರು ಪ್ರಬಲ ಪೈಪೋಟಿ ನೀಡಿ ಗೆಲುವಿನ ನಗೆ ಬೀರಲಿದ್ದಾರೆ ಎಂದೇ ವಿಶ್ಲೇಷಿಸಲಾಗಿತ್ತು. ಈ ಕುರಿತು ಗೋವಾದ ಕೋಲಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಾ. ಕೇತನ್ ಅವರ ಅಕಾಲಿಕ ನಿಧನಕ್ಕೆ ಗೋವಾ ಹಾಗೂ ಉತ್ತರ ಕನ್ನಡದ ಗಡಿ ಭಾಗದ ಜನತೆ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...

ಹುಬ್ಬಳ್ಳಿ | ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ: ಜಗದೀಶ ಶೆಟ್ಟರ್

ಸರ್ಕಾರದ ವಿವಿಧ ಇಲಾಖೆಗಳಲ್ಲಿ ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರಿಗೆ...

ಬರದಿಂದ ಕಂಗೆಟ್ಟ ರೈತರಿಗೆ ನೆರವಾಗಿ: ಕೇಂದ್ರಕ್ಕೆ ಕಾಶಪ್ಪನವರ ಒತ್ತಾಯ

ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಸಂದರ್ಭದಲ್ಲಿ ರೈತರಿಗೆ ಅಗತ್ಯ...

ಚಾಮರಾಜನಗರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಚಾಮರಾಜನಗರ ಜಿಲ್ಲೆಯ ಜನರಿಗೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಶಕ್ತಿ ತುಂಬುವ...