ಚೀನಾದಲ್ಲಿ ಎರಡು ಬೆಳ್ಳಿ ಪದಕ ಗೆದ್ದ ಹಳಿಯಾಳದ ಕ್ರೀಡಾಪಟು ಶಿವಾಜಿ: ಜಿಲ್ಲಾಡಳಿತದಿಂದ ಸನ್ಮಾನ

Date:

ಚೀನಾದಲ್ಲಿ ಇತ್ತೀಚೆಗೆ ನಡೆದ 23 ವರ್ಷದೊಳಗಿನ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 5,000 ಮೀಟರ್ ಹಾಗೂ 10,000 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರ, ರಾಜ್ಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಅಥ್ಲೀಟ್ ಶಿವಾಜಿ ಪರಶುರಾಮ ಮಾದಪ್ಪ ಗೌಡ ಅವರನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಹಳಿಯಾಳದಂತಹ ಸಣ್ಣ ಪ್ರದೇಶದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಜಿಲ್ಲೆಯ ಹೆಸರನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಿರುವುದು ಹೆಮ್ಮೆಯ ವಿಷಯ. ಶಿಸ್ತು, ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮದಿಂದ ಶಿವಾಜಿ ಈ ಸಾಧನೆ ಮಾಡಿದ್ದಾರೆ. ಅವರ ಸಾಧನೆ ಜಿಲ್ಲೆಯ ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಲಿ ಎಂದು ಆಶಿಸಿದರು. ಮುಂದಿನ ಕ್ರೀಡಾ ಪಯಣಕ್ಕೂ ಜಿಲ್ಲಾಡಳಿತದಿಂದ ಅಗತ್ಯ ಬೆಂಬಲ ಮತ್ತು ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಈ ಸುದ್ದಿ ಓದಿದ್ದೀರಾ? ದಾಂಡೇಲಿ | ‘ಮೇವಾ ಮೋದಕ್’ ಹೆಸರಿನಲ್ಲಿ ಮಾದಕ ವಸ್ತು ಮಾರಾಟ ಆರೋಪ; ಪೊಲೀಸ್ ದಾಳಿ, 1.986 ಕೆ.ಜಿ. ವಸ್ತು ಜಪ್ತಿ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ಜಿಲ್ಲೆಯಲ್ಲಿ ಕ್ರೀಡೆಗೆ ಪೂರಕವಾದ ವಾತಾವರಣವಿದ್ದು, ಕಾರವಾರ ಜಿಲ್ಲಾ ಕ್ರೀಡಾಂಗಣವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದರು. ಪೋಷಕರು ಮಕ್ಕಳನ್ನು ಕ್ರೀಡೆಗೆ ಪ್ರೋತ್ಸಾಹಿಸಬೇಕು ಹಾಗೂ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿವಾಜಿ, ಉತ್ತರ ಕನ್ನಡ ಜಿಲ್ಲೆಯ ಯುವಕರಲ್ಲಿ ಉತ್ತಮ ಪ್ರತಿಭೆ ಇದ್ದು, ಅವರಿಗೆ ಕಾರವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದರು. ನಿರಂತರ ಪರಿಶ್ರಮ ಮತ್ತು ತಾಳ್ಮೆಯಿಂದ ಸಾಧನೆ ಸಾಧ್ಯವಾಗುತ್ತದೆ. ಮುಂದಿನ ದಿನಗಳಲ್ಲಿ ಕಾಮನ್‌ವೆಲ್ತ್, ಏಷ್ಯನ್ ಗೇಮ್ಸ್ ಹಾಗೂ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಗುರಿ ಹೊಂದಿದ್ದು, ಜಿಲ್ಲೆ ಹಾಗೂ ದೇಶಕ್ಕೆ ಇನ್ನಷ್ಟು ಕೀರ್ತಿ ತರುವ ಸಂಕಲ್ಪ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯ್ಕ ಉಪಸ್ಥಿತರಿದ್ದರು. ಶಿವಾಜಿಯ ಪ್ರತಿಭೆಯನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಬೆಳೆಸಿದ ಕೋಚ್ ಪ್ರಕಾಶ್ ಅವರನ್ನು ಇದೇ ವೇಳೆ ಅಭಿನಂದಿಸಲಾಯಿತು. ಕಾರವಾರ ರೋಟರಿ ಸೀಸೈಡ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಶಿವಾಜಿಗೆ ನಗದು ಬಹುಮಾನ ನೀಡಿ ಗೌರವ ಸಲ್ಲಿಸಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...