ಕಿತ್ತೂರು ಕರ್ನಾಟಕ, ಮಲೆನಾಡಿನಲ್ಲಿ ಧಾರಾಕಾರ ಮಳೆ: ಉಕ್ಕಿ ಹರಿದ ನದಿಗಳು

Date:

ಕಿತ್ತೂರು ಕರ್ನಾಟಕದ ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಕೃಷ್ಣ, ಘಟಪ್ರಭಾ, ಅಘನಾಶಿನಿ ನದಿಗಳು ಉಕ್ಕಿ ಹರಿದಿವೆ.

- Advertisement -

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಯಲ್ಲಾಪುರ ತಾಲೂಕಿನ ಕಳಚೆ ಬಳಿ ಸಣ್ಣ ಪ್ರಮಾಣದ ಭೂಕುಸಿತ ಸಂಭವಿಸಿದೆ. ದೊಡ್ಡ ಗಾತ್ರದ ಬಂಡೆಗಳು ರಸ್ತೆಗೆ ಉರುಳಿದ ಪರಿಣಾಮ ರಸ್ತೆ ಸಂಪರ್ಕಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿತ್ತು.

ಶಿರಸಿ ತಾಲೂಕಿನ ನೆಗ್ಗು ಗ್ರಾಮ ಪಂಚಾಯಿತಿಯ ತಟ್ಟಗುಣಿ ಸೇತುವೆ ಬಳಿ ಧರೆ ಕುಸಿದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದೆ. ಧರೆ ಕುಸಿತದ ಪ್ರದೇಶದಲ್ಲಿ ಮಣ್ಣು ಜಾರುವ ಸಾಧ್ಯತೆ ಇರುವುದರಿಂದ ಗ್ರಾಮಸ್ಥರು ಜಾಗ್ರತೆಯಿಂದ ಇರಲು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ನಿರಂತರ ಮಳೆಯಿಂದ ಅಘನಾಶಿನಿ ನದಿ ನೀರಿನ ಮಟ್ಟ ಹೆಚ್ಚಾಗಿದೆ. ಶಿರಸಿ-ಸಿದ್ದಾಪುರ ಭಾಗದಲ್ಲಿ ಜಡಿ ಮಳೆ ಸುರಿದ ಕಾರಣ ಸರಕುಳಿ ಗ್ರಾಮದ ಸೇತುವೆ ಮುಳುಗಡೆಯಾಗುವ ಸ್ಥಿತಿಯಲ್ಲಿದೆ.

ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ದಾಖಲೆಯ ಮಳೆ ಹೊಯ್ದಿದ್ದು, ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ವರದಿಯಂತೆ ಆಗುಂಬೆಯಲ್ಲಿ 155.8 ಮಿ.ಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮಾವಿನ್ಮನೆಯಲ್ಲಿ 123.5 ಮಿ.ಮೀ, ಕಾನಗೋಡದಲ್ಲಿ 119 ಮಿ.ಮೀ ಹಾಗೂ ನೆಗ್ಗುವಿನಲ್ಲಿ 118 ಮಿ.ಮೀ ಮಳೆಯಾಗಿದೆ.




eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...