ಕರಾವಳಿ, ಮಲೆನಾಡಿನಲ್ಲಿ ಮಳೆ ಆರ್ಭಟ: ಹವಾಮಾನ ಇಲಾಖೆ ಹೈ ಅಲರ್ಟ್

Date:

ರಾಜ್ಯದ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆ ಬಿರುಸುಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ ಕುಸಿತದ ಭೀತಿ ಹೆಚ್ಚಾಗಿದೆ.

- Advertisement -

ಅಂಕೋಲಾ ತಾಲೂಕಿನಲ್ಲಿ 296 ಮಿ.ಮೀ. ಮಳೆಯಾಗಿದೆ. ಸಾಣಿಕಟ್ಟಾ ಬಳಿ ಗುಡ್ಡ ಕುಸಿತದಿಂದ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಕುಮಟಾದ ಕರ್ನಾಟಕ ಪಬ್ಲಿಕ್ ಶಾಲಾ ಕಟ್ಟಡಕ್ಕೆ ಬಂಡೆ ಅಪ್ಪಳಿಸಿದೆ. ಮುಂಚೆಯೇ ಅನಾಹುತದ ಸೂಚನೆ ಅರಿತಿದ್ದ ಶಾಲಾ ಆಡಳಿತ ವಿದ್ಯಾರ್ಥಿಗಳನ್ನು ಬೇರೆಡೆ ಸ್ಥಳಾಂತರಿಸಿದ್ದರಿಂದ ದುರಂತ ತಪ್ಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಮೂಡಂಗಿ ವಸತಿ ಪ್ರದೇಶದ ಬಳಿ ಗುಡ್ಡ ಕುಸಿತವಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಬೇಲೇಕೇರಿ ಮೀನುಗಾರಿಕಾ ಬಂದರಿನಲ್ಲಿ ಲಂಗರು ಹಾಕಿದ್ದ 3 ದೋಣಿಗಳು ಮಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ಗೋಕರ್ಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ತದಡಿ ಮಾರ್ಗದಲ್ಲಿ ಗುಡ್ಡ ಕುಸಿದಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ.

ಬೇಲೆಹಿತ್ತಲಿನ ಶಾಲೆಯ ಬಳಿ ಮಳೆ ನೀರು ಸಮುದ್ರ ಸೇರುವ ಹಳ್ಳದ ಕಟ್ಟೆ ಒಡೆದು 4 ಎಕರೆಗೂ ಹೆಚ್ಚಿನ ಭತ್ತದ ಗದ್ದೆ ನೀರು ಪಾಲಾಗಿದ್ದು, ಎಂಟಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ. ನಾಡುಮಾಸ್ಕೇರಿ, ತದಡಿ, ಗಂಗೆಕೊಳ್ಳ, ಹನೇಹಳ್ಳಿ, ಬಂಕಿಕೊಡ್ಲ, ಹೊಸ್ಕಟ್ಟಾ, ಗಂಗಾವಳಿ, ಮಾದನಗೇರಿ, ಹಿರೇಗುತ್ತಿ, ಬರ್ಗಿ ಭಾಗದಲ್ಲಿ ರಸ್ತೆ, ಕೃಷಿ ಭೂಮಿ ಮುಳುಗಡೆಯಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಪ್ರಮಾಣದ ಮಳೆ ದಾಖಲಾಗಿದ್ದು, ಕಾರವಾರ 170 ಮಿ.ಮೀ, ಅಂಕೋಲಾ 160 ಮಿ.ಮೀ, ಭಟ್ಕಳ ಮಿ.ಮೀ, ಕುಮಟಾ 141 ಮಿ.ಮೀ, ಹೊನ್ನವಾರದಲ್ಲಿ 133 ಮಿ.ಮೀ ದಾಖಲೆಯ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿಯೂ ಭಾರೀ ಮಳೆ ದಾಖಲಾಗಿದ್ದು, ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ. ಸಾರ್ವಜನಿಕರು ಮತ್ತು ಮೀನುಗಾರರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಸೂಚಿಸಿದೆ.

ಹವಾಮಾನ ಇಲಾಖೆ ಹೈ ಅಲರ್ಟ್‌: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಧೃಢಪಡಿಸಿರುವ ಹವಾಮಾನ ಇಲಾಖೆ ಸಾರ್ವಜನಿಕರು ಮತ್ತು ವಾಹನ ಸಂಚಾರಿಗಳು ಮುಂಜಾಗ್ರತೆಯಿಂದಿರುವಂತೆ ಸೂಚನೆ ನೀಡಿದೆ.

ಇತ್ತ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಪ್ರದೇಶಗಳಲ್ಲೂ ಗುಡುಗು ಸಮೇತ ಮಳೆಯಾಗುವ ಸಂಭವವಿದ್ದು, ಘಟ್ಟ ಪ್ರದೇಶದಲ್ಲಿ ಭೂಕುಸಿತದ ಸಾಧ್ಯತೆಯಿದೆ. ಮಳೆಯಾಗುವ ವೇಳೆ ಸಾಧ್ಯವಾದಷ್ಟು ವಾಹನ ಸಂಚಾರ ಕಡಿಮೆಗೊಳಿಸಿ ಮನೆಗಳಲ್ಲಿ ಸುರಕ್ಷಿತವಾಗಿರುವಂತೆ ಹವಾಮಾನ ಇಲಾಖೆ ತಿಳಿಸಿದೆ.

ಮರಗಳ ಕೆಳಗೆ ಆಶ್ರಯ ಪಡೆಯಬಾರದು ಹಾಗೂ ಸುರಕ್ಷಿತ ಸ್ಥಳಗಳಲ್ಲಿ ಉಳಿಯಲು, ವಿದ್ಯುತ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಸಂಪರ್ಕ ಕಡಿತಗೊಳಿಸುವಂತೆ ಹಾಗೂ ಕೆರೆ, ನದಿ ಹಾಗೂ ಇತರೆ ಜಲಮೂಲಗಳಿಂದ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನಕ್ಕಾಗಿ ಸಮತಾ ಸೈನಿಕ ದಳ ಆಗ್ರಹ

ಶಹಾಪುರ ತಾಲೂಕಿನ ವಿವಿಧ ಗ್ರಾಮಗಳ ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನ...

ವಿಜಯಪುರ | 22ನೇ ಶರಣ ತತ್ವ ಕಮ್ಮಟಕ್ಕೆ ಸಚಿವ ಎಂ.ಬಿ ಪಾಟೀಲರಿಗೆ ಆಹ್ವಾನ

ವಿಜಯಪುರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ...

ಬೀಳಗಿ | ಛಾಯಾಗ್ರಾಹಕರಿಗಾಗಿ ಆಕಾಡೆಮಿ ಸ್ಥಾಪಿಸಲು ವಿಠ್ಠಲ ಹಿರೇಮಠ ಆಗ್ರಹ

ಛಾಯಾಗ್ರಾಹಕರ ವೃತ್ತಿ ಭದ್ರತೆ, ಕುಟುಂಬದ ಕಲ್ಯಾಣ ಹಾಗೂ ಸರಕಾರದ ಸೌಲಭ್ಯಗಳನ್ನು ಒದಗಿಸಲು...

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...