ಹೊನ್ನಾವರ | 1200 ಅಡಿ ಆಳದ ಕಣಿವೆಗೆ ಇಳಿದು ವಿದ್ಯುತ್ ತಂತಿ ದುರಸ್ತಿ; ಸಿಬ್ಬಂದಿ ಸಾಹಸಕ್ಕೆ ವ್ಯಾಪಕ ಪ್ರಶಂಸೆ

Date:

ಶರಾವತಿ ಜಲವಿದ್ಯುತ್ ಉತ್ಪಾದನಾ ಘಟಕದಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ವಿದ್ಯುತ್ ಪೂರೈಕೆ ಮಾಡುವ 220, 400 ಕೆವಿ ವಿದ್ಯುತ್ ವಾಹಕ ತಂತಿ ತುಂಡಾಗಿ ಬಿದ್ದ ಕೆಲವೇ ಗಂಟೆಗಳಲ್ಲಿ ಸರಿಪಡಿಸುವ ಮೂಲಕ ಕೆಪಿಟಿಸಿಎಲ್ ಮತ್ತು ಹೊರಗುತ್ತಿಗೆ ಸಿಬ್ಬಂದಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.

- Advertisement -

ಗಾಳಿ ಮಳೆ ಅಬ್ಬರದಿಂದ ಶರಾವತಿ ಕಣಿವೆಯಲ್ಲಿರುವ 80 ಅಡಿ ಎತ್ತರದ ಗೋಪುರ ಸಂಖ್ಯೆ 3 ಮತ್ತು 4ರ ನಡುವಿನ 220/400 ಕೆವಿ ಎಸ್‌ಟಿ–2 ಮಾರ್ಗದ ವಿದ್ಯುತ್ ವಾಹಕ ತಂತಿ ತುಂಡಾಗಿ ಸುಮಾರು 1200 ಅಡಿ ಆಳದ ಕಣಿವೆಗೆ ಬಿದ್ದಿತ್ತು. ಇದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಕಣಿವೆಯ ದುರ್ಗಮ ಪ್ರದೇಶಕ್ಕೆ ಯಾವುದೇ ಯಂತ್ರೋಪಕರಣಗಳನ್ನು ಕೊಂಡೊಯ್ಯಲು ಸಾಧ್ಯವಾಗದ ಕಾರಣ, ಕೆಪಿಟಿಸಿಎಲ್ ಹಾಗೂ ಹೊರಗುತ್ತಿಗೆ ಸಿಬ್ಬಂದಿ ಹಗ್ಗದ ಸಹಾಯದಿಂದ ಸುಮಾರು 1200 ಅಡಿ ಆಳದ ಕಣಿವೆಗೆ ಇಳಿದು ತುಂಡಾಗಿ ಬಿದ್ದ ವಿದ್ಯುತ್ ವಾಹಕವನ್ನು ಪತ್ತೆಹಚ್ಚಿದರು. ಬಳಿಕ ಅದನ್ನು ಜೋಡಣೆ ಮಾಡಿ ವಿದ್ಯುತ್ ಸಂಚಾರವನ್ನು ಮರುಸ್ಥಾಪಿಸುವಲ್ಲಿ ಯಶಸ್ವಿಯಾದರು.

ಶರಾವತಿ ವಿದ್ಯುತ್ ಉತ್ಪಾದನಾ ಘಟಕದಿಂದ ಕಣಿವೆಯ ಮಾರ್ಗವಾಗಿ ಶಿವಮೊಗ್ಗ ಜಿಲ್ಲೆಯ ತಾಳಗುಪ್ಪ ಕೇಂದ್ರಕ್ಕೆ ವಿದ್ಯುತ್ ರವಾನೆಯಾಗುತ್ತಿದ್ದು, ಅಲ್ಲಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ವಿದ್ಯುತ್ ಸರಬರಾಜು ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೊನ್ನಾವರ ತಾಲೂಕಿನ ಕತ್ತಲಕಾನಿನ ಸಮೀಪದ ಈ ಕಣಿವೆ ದುರ್ಗಮ ಅರಣ್ಯ, ಬೃಹತ್ ಕಲ್ಲುಬಂಡೆಗಳು ಹಾಗೂ ನಿರಂತರ ಮಳೆಯಿಂದ ಜಲಪಾತಗಳಂತೆ ಹರಿಯುವ ನೀರಿನಿಂದ ಕೂಡಿದೆ. ಇಂತಹ ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಸಿಬ್ಬಂದಿ ಜೀವದ ಹಂಗು ತೊರೆದು ದುರಸ್ತಿ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ದುರಸ್ತಿ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿದ ಕೆಪಿಟಿಸಿಎಲ್ ಹಾಗೂ ಹೊರಗುತ್ತಿಗೆ ಸಿಬ್ಬಂದಿಯ ಕರ್ತವ್ಯನಿಷ್ಠೆ, ಧೈರ್ಯ ಮತ್ತು ಸಾಹಸವನ್ನು ಅಧಿಕಾರಿಗಳು ಶ್ಲಾಘಿಸಿದ್ದು, ಸಾರ್ವಜನಿಕರಿಂದಲೂ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆ ಕಾಮಗಾರಿ ಹಾಗೂ ರಾಜ್ಯ ಹೆದ್ದಾರಿ–122ರ...

ರಾಯಚೂರು | ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹಗಳು ಹೆಚ್ಚಾಗಲಿ: ಶಾಸಕಿ ಕರೆಮ್ಮ ಗೋಪಾಲಕೃಷ್ಣ

ರಾಜ್ಯದಲ್ಲಿ ಮಠಮಾನ್ಯಗಳ ಕೊಡುಗೆ ಅಪಾರವಾಗಿದ್ದು, ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಸಾಮೂಹಿಕ...

ಹುಬ್ಬಳ್ಳಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಪ್ರಗತಿಪರ ಒಕ್ಕೂಟದಿಂದ ಪ್ರತಿಭಟನೆ

"ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಉಡುಪಿ | ಮನೆ ಮಾಲೀಕನ ಮೇಲೆ ಆಸಿಡ್ ದಾಳಿ, ತಲವಾರಿನಿಂದ ಕೊ*ಲೆಗೆ ಯತ್ನ ; ಆರೋಪಿಯ ಬಂಧನ

ಮನೆ ಬಾಡಿಗೆಯ ಮುಂಗಡ ಹಣದ ವಿಚಾರದಲ್ಲಿ ಉಂಟಾದ ವಿವಾದ ವಿಕೋಪಕ್ಕೆ ತಿರುಗಿ,...