ಶೌಚಕ್ಕೆ ಬಾವಿ ನೀರು ಹೊರುವ ವಿದ್ಯಾರ್ಥಿಗಳು: ತಾತ್ಕಾಲಿಕವಷ್ಟೇ ಎಂದು ನುಣುಚಿದ ಆಡಳಿತ

Date:

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಹೊಡಿಕೆ ಶಿರೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ತೀವ್ರ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಶೌಚಕ್ಕೆ ಹೋಗಲು ದೂರದ ಬಾವಿಯಿಂದ ಬಕೆಟ್‌ನಲ್ಲಿ ನೀರು ಹೊತ್ತು ತರುವ ದಯನೀಯ ಸ್ಥಿತಿಯ ಕುರಿತು ಪೋಷಕರು, ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಶಾಲೆಯಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಕ್ಕೆ ನೀರು ಒದಗಿಸಲು ಯಾವುದೇ ನಿಯಮಿತ ವ್ಯವಸ್ಥೆ ಇಲ್ಲ. ಆದ್ದರಿಂದ ಮಕ್ಕಳು ಬಾವಿಯಿಂದ ನೀರು ಸೇದಿ ತಾವೇ ಶೌಚಾಲಯಕ್ಕೆ ಕೊಂಡೊಯ್ಯಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಕುಡಿಯುವ ನೀರಿಗೂ ಬಾವಿಯಿಂದ ನೀರು ಹೊತ್ತು ತರಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಮಕ್ಕಳು ಬಾವಿಯಿಂದ ನೀರು ಸೇದಿ ತರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರಿಂದ ಭಾರಿ ಆಕ್ಷೇಪ ವ್ಯಕ್ತವಾಗಿದೆ. ಶಾಲಾ ಆಡಳಿತ ಮಂಡಳಿ ಈ ಸಮಸ್ಯೆ ತಾತ್ಕಾಲಿಕವಾಗಿದ್ದು, ಪೈಪ್‌ಲೈನ್‌ಗಳು ಒಡೆದು ಹೋಗಿರುವುದರಿಂದ ವಿದ್ಯಾರ್ಥಿಗಳು ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಬಬು ಹೇಳಿದೆ. ಸ್ಥಳೀಯರು ಮತ್ತು ಪೋಷಕರು ಹೇಳುವಂತೆ ಶಾಲಾ ಮಕ್ಕಳು ಕಳೆದ ಎರಡು ತಿಂಗಳಿನಿಂದ 100 ಅಡಿ ದೂರವಿರುವ ಬಾವಿಯಿಂದ ನೀರು ಸೇದಿ, ಬಕೆಟ್‌ನಲ್ಲಿ ಹೊತ್ತು ತರುತ್ತಿದ್ದು, ಶಾಲೆಯಲ್ಲಿ ಇನ್ನೂ ಹಲವು ಮೂಲಭೂತ ಸೌಕರ್ಯಗಳ ಕೊರತೆಯಿದೆ.

ಜೋರು ಗಾಳಿ-ಮಳೆಯ ಸಂದರ್ಭದಲ್ಲಿ ಮೇಲ್ಛಾವಣಿಯೂ ಹಾರಿ ಹೋಗುತ್ತದೆ. ಬಾವಿ ಬದಿಯಲ್ಲಿ ನೇತಾಡುವ ವಿದ್ಯುತ್ ಕೇಬಲ್ ಮಕ್ಕಳ ಸುರಕ್ಷತೆಯ ಕುರಿತು ನಮ್ಮಲ್ಲಿ ಭೀತಿ ಹುಟ್ಟಿಸಿದೆ ಎಂದು ಸ್ಥಳೀಯರು, ಪೋಷಕರು ದೂರಿದ್ದಾರೆ. 36 ಮಕ್ಕಳಿರುವ ಈ ಶಾಲೆಯಲ್ಲಿ ಕೇವಲ ನಾಲ್ಕು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಸರಿಯಾದ ಕೊಠಡಿಗಳಿಲ್ಲ, ಪೀಠೋಪಕರಣಗಳ ಕೊರತೆಯಿದೆ. ಜೊತೆಗೆ ಶಾಲಾ ಆವರಣ ಅನೈರ್ಮಲ್ಯದಿಂದ ಕೂಡಿದ್ದು, ಮಕ್ಕಳು ಕಸ-ಕಡ್ಡಿ ಆವರಿಸಿದ ಜಾಗಗಳಲ್ಲಿ ಕುಳಿತು ಊಟ ಮಾಡುತ್ತಿದ್ದಾರೆ. ಇದು ಅವರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಪರಿಸ್ಥಿತಿಯಿಂದ ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ವಾತಾವರಣದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ಮತ್ತು ಶಾಲಾ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ನೀರಿನ ಸೌಕರ್ಯ ಕಲ್ಪಿಸಲು ಆಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದು ಹಳ್ಳಿಯ ಜನರ ಮತ್ತು ಪೋಷಕರ ಬೇಡಿಕೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಸೆ.24ರಂದು ಯೆಲ್ಲೋ ಅಲರ್ಟ್‌: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...

ಸಿಂಧನೂರು | ಸಿಡಿಲು ಬಡಿದು ರೈತ ಸಾವು, ಮತ್ತೋರ್ವ ಗಂಭೀರ ಗಾಯ

ಬಿತ್ತನೆ ಮಾಡಲು ಹೊಲಕ್ಕೆ ತೆರಳಿದ್ದ ವೇಳೆ ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿದ್ದು,...

ಗದಗ | ಮಾರಕಾಸ್ತ್ರಗಳಿಂದ ವ್ಯಕ್ತಿ ಕೊಲೆ

ಮಾರಕಾಸ್ತ್ರಗಳಿಂದ ಇರ್ಫಾನ್ ಮಲ್ಲಿಕ್‌ ಸಾಬ್ ತಹಶೀಲ್ದಾರ್ (34) ಎಂಭ ವ್ಯಕ್ತಿಯನ್ನು ಕೊಲೆ...