ಜೋಯ್ಡಾ | ದೂರು ಹಿಂಪಡೆಯಲು ರೂ.10 ಲಕ್ಷ ಬೇಡಿಕೆ! ಅಬಕಾರಿ ನಿರೀಕ್ಷಕರಿಂದ ದೂರು

Date:

ಉತ್ತರ ಕನ್ನಡ ಜಿಲ್ಲೆ, ಜೋಯ್ಡಾದ ಅನಮೋಡ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ದೂರನ್ನು ಹಿಂಪಡೆಯಲು ಮತ್ತು ಮುಂದಿನ ಕ್ರಮ ಕೈಗೊಳ್ಳದಂತೆ ತಡೆಯಲು ₹10 ಲಕ್ಷ ನೀಡುವಂತೆ ಒತ್ತಾಯಿಸಿ, ಹಣ ನೀಡದಿದ್ದರೆ ಜಾತಿ ನಿಂದನೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬೆಳಗಾವಿ ಜಿಲ್ಲೆಯ ಮಾರುತಿ ಕೆಳಗೇರಿ ಎಂಬುವವರ ವಿರುದ್ಧ ಅಬಕಾರಿ ನಿರೀಕ್ಷಕರು ದೂರು ನೀಡಿದ್ದಾರೆ.

- Advertisement -

ಅನಮೋಡ ಅಬಕಾರಿ ತನಿಖಾ ಠಾಣೆಯ ಅಬಕಾರಿ ನಿರೀಕ್ಷಕರು ತಮ್ಮ ಸಿಬ್ಬಂದಿಯೊಂದಿಗೆ ಕರ್ತವ್ಯದಲ್ಲಿದ್ದಾಗ ಅ.24ರಂದು ಸಂಜೆ 4.20ರ ಸುಮಾರಿಗೆ ಉದಯ ಬಸೋಜಿ ಎಂಬ ವ್ಯಕ್ತಿ ಎರಡು ಬಾಟಲಿಗಳಿದ್ದ ಕವರೊಂದನ್ನು ತೆಗೆದುಕೊಂಡು ಠಾಣೆಯ ಬಳಿ ಬಂದಿದ್ದಾನೆ. ಅಲ್ಲಿ ಅಬಕಾರಿ ಸಿಬ್ಬಂದಿಗೆ ಬಲವಂತವಾಗಿ ₹200 ನೀಡಲು ಮುಂದಾಗಿದ್ದು, ಸಿಬ್ಬಂದಿ ಹಣ ಸ್ವೀಕರಿಸಲು ನಿರಾಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬಳಿಕ ಆತನ ಬಳಿಯಿದ್ದ ಮದ್ಯದ ಬಾಟಲಿಗಳಂತಿದ್ದ ಬಾಟಲಿಗಳಲ್ಲಿನ ದ್ರವ ಪದಾರ್ಥವನ್ನು ಚೆಲ್ಲಲಾಗಿದ್ದು, ಈ ಘಟನೆಯನ್ನು ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ದ್ರವ ಪದಾರ್ಥವನ್ನು ಚೆಲ್ಲುವಾಗ ಯಾವುದೇ ವಾಸನೆ ಬಂದಿರಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂದರ್ಭದಲ್ಲಿ ಠಾಣೆಯ ಬಳಿ ಬಂದ ಮಾರುತಿ ಕೇಳಗೇರಿ, ಅಬಕಾರಿ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾನೆ ಎನ್ನಲಾಗಿದೆ.

ಅಬಕಾರಿ ತನಿಖಾ ಠಾಣೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ವಿಡಿಯೋ ಚಿತ್ರೀಕರಿಸಿ ಮೇಲಧಿಕಾರಿಗಳಿಗೆ ದೂರು ನೀಡಿದ್ದು, ಆ ದೂರನ್ನು ಹಿಂಪಡೆಯಲು, ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳದಿರಲು ₹10 ಲಕ್ಷ ನೀಡಬೇಕು ಎಂದು ಒತ್ತಾಯಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಹಣ ನೀಡದಿದ್ದರೆ ಜಾತಿ ನಿಂದನೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದೂ ದೂರಿನಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಬಳಸುವಂತೆ ಜಾಗೃತಿ ಅಭಿಯಾನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಹಾಗೂ ವಿವಿಧ...

ದಾವಣಗೆರೆ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಪಿಐ ಪ್ರತಿಭಟನೆ

ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವ ಮೂಲಕ ಸಿಪಿಐ, ಮುಖ್ಯ ಚುನಾವಣಾ...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ ಅಡ್ಡಿಯಾಗುತ್ತದೆ?

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ....

ಟಾಟಾ ಸಮೂಹ ನಾಶಕ್ಕೆ ಯತ್ನ; ಉದ್ಯಮಿಗಳ ಮೌನದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಟಾಟಾ ಸಮೂಹದಲ್ಲಿ ನಡೆಯುತ್ತಿರುವ ಆಂತರಿಕ ಬಿಕ್ಕಟ್ಟಿನ ಬೆನ್ನಲ್ಲೇ, ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್‌ವರೆಗೆ...