ಕಾರವಾರ | ‘ನಾಲ್ವರಲ್ಲಿ ಯಾರಿಗೇ ಸಚಿವ ಸ್ಥಾನ ಸಿಕ್ಕರೂ ಸ್ವಾಗತ’: ಭೀಮಣ್ಣ ನಾಯ್ಕ

Date:

ರಾಜ್ಯ ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯುವ ನಿರೀಕ್ಷೆ ಇದ್ದು, ಸಚಿವ ಸ್ಥಾನ ನೀಡುವ ಅಂತಿಮ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ಗೆ ಸೇರಿದೆ ಎಂದು ಶಿರಸಿ ಶಾಸಕ ಭೀಮಣ್ಣ ನಾಯ್ಕ ಹೇಳಿದರು.

- Advertisement -

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಪ್ರಸ್ತುತ ವಿಧಾನಸಭೆಯಲ್ಲಿ ನಾಮದಾರಿ ಸಮುದಾಯದ ನಾಲ್ವರು ಶಾಸಕರಿದ್ದು, ಅವರಲ್ಲಿ ಯಾರಿಗೇ ಸಚಿವ ಸ್ಥಾನ ನೀಡಿದರೂ ಅದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದೇ ವೇಳೆ, ಸೊರಬ ಕ್ಷೇತ್ರದ ಶಾಸಕ ಹಾಗೂ ಹಾಲಿ ಸಚಿವ ಮಧು ಬಂಗಾರಪ್ಪ ಸಚಿವರಾಗಿ ಮುಂದುವರಿಯಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ಹೇಳಿದರು. ಈ ಕುರಿತು ಕಾಂಗ್ರೆಸ್ ಹೈಕಮಾಂಡ್‌ಗೆ ಅಧಿಕೃತವಾಗಿ ಮನವಿ ಸಲ್ಲಿಸಲಾಗಿದ್ದು, ತಮ್ಮ ವೈಯಕ್ತಿಕ ಅಭಿಪ್ರಾಯ ಹಾಗೂ ಸಮುದಾಯದ ನಿರೀಕ್ಷೆಯನ್ನು ಪಕ್ಷದ ವರಿಷ್ಠರ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶಿರಸಿ | ತಂದೆ ಹತ್ಯೆ, ತಾಯಿ ಜೈಲು ಪಾಲು; ಅನಾಥರಾದ ಮಕ್ಕಳ ನೆರವಿಗೆ ಧಾವಿಸಿದ ಶಾಸಕ ಭೀಮಣ್ಣ ನಾಯ್ಕ್

“ಸಚಿವ ಸ್ಥಾನ ಯಾರಿಗೆ ನೀಡಬೇಕು ಎಂಬುದು ಸಂಪೂರ್ಣವಾಗಿ ಹೈಕಮಾಂಡ್‌ನ ತೀರ್ಮಾನ. ನಾವು ಆ ನಿರ್ಧಾರವನ್ನು ಗೌರವಿಸುತ್ತೇವೆ. ಆದರೆ ಮಧು ಬಂಗಾರಪ್ಪ ಅವರು ಸಚಿವರಾಗಿ ಮುಂದುವರಿಯಲಿದ್ದಾರೆ ಎಂಬ ವಿಶ್ವಾಸ ನಮ್ಮಲ್ಲಿದೆ,” ಎಂದು ಭೀಮಣ್ಣ ನಾಯ್ಕ ಹೇಳಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ ಭೀಮಣ್ಣ ನಾಯ್ಕ ಅವರ ಈ ಹೇಳಿಕೆ ಮಹತ್ವ ಪಡೆದಿದೆ. ಇದೇ ಸಂದರ್ಭದಲ್ಲಿ ನಾಮದಾರಿ ಸಮುದಾಯಕ್ಕೆ ಸಮರ್ಪಕ ಪ್ರಾತಿನಿಧ್ಯ ದೊರೆಯಬೇಕು ಎಂಬ ನಿರೀಕ್ಷೆಯನ್ನೂ ಅವರು ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ...

ಬಳ್ಳಾರಿ | ಆಂಧ್ರದ ಮಲ್ಲಯ್ಯನ ಜಾತ್ರೆಯಲ್ಲಿ ಬಡಿಗೆ ಕಾಳಗ: ಓರ್ವ ಸಾವು, 80 ಮಂದಿಗೆ ಗಾಯ

ಆಂಧ್ರದ ಆಲೂರು ಮಂಡಲದ ನೇರಣಿಕೆ ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ನಡೆಯುವ ಬಡಿಗೆ...

ಮಂಡ್ಯ | ಟನ್ ಕಬ್ಬಿಗೆ ₹5,500 ಎಫ್‌ಆರ್‌ಪಿ ಘೋಷಿಸಲು ಆಗ್ರಹ

2025-26ನೇ ಸಾಲಿನ ಕಬ್ಬಿಗೆ ಟನ್‌ಗೆ ₹5,500ರ ನ್ಯಾಯಯುತ ಮತ್ತು ಲಾಭದಾಯಕ ಬೆಲೆ...

ಗದಗ | ಮೋಹನ ಲಿಂಬಿಕಾಯಿ ಬೆಂಬಲಿಸಲು ಸಿಪಿಐ(ಎಂ) ಕರೆ

"ಇದೇ ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ...