ಕಾರವಾರ | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ: ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

Date:

ಉತ್ತರ ಕನ್ನಡ ಜಿಲ್ಲೆ, ಕಾರವಾರದ ಮಾಜಾಳಿ ಸಮೀಪ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಆರೋಪಿ ಸಂಶಾದ್‌ನನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಮುಂಬೈನ ಶಿವಾಜಿನಗರದಲ್ಲಿ ಬಂಧಿಸಿದ್ದಾರೆ.

- Advertisement -

ಮಾಜಾಳಿಯ ಸಂದೀಪ ವರ್ಣೇಕರ ಅವರಿಗೆ ಸೇರಿದ ಕಟ್ಟಡದಲ್ಲಿ ಇಕ್ಬಾಲ್ ಎಂಬುವವರು ಸಲೂನ್ ನಡೆಸುತ್ತಿದ್ದರು. ಇಲ್ಲಿ ಕೆಲಸ ಮಾಡುತ್ತಿದ್ದ ಸಂಶಾದ್, ಸಲೂನ್‌ಗೆ ಬಂದಿದ್ದ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಘಟನೆ ವೇಳೆ ಬಾಲಕಿ ಕೂಗಿಕೊಂಡಿದ್ದರಿಂದ ಆಕೆಯ ಅಕ್ಕ ಸ್ಥಳಕ್ಕೆ ಬಂದಿದ್ದು, ಬಳಿಕ ಕುಟುಂಬದವರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಈ ಸಂಬಂಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸಂಶಾದ್ ತಲೆಮರೆಸಿಕೊಂಡಿದ್ದ. ಆತನ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.

ನಿರಂತರ ಕಾರ್ಯಾಚರಣೆಯ ಮೂಲಕ ಆರೋಪಿಯ ಸುಳಿವು ಪತ್ತೆಹಚ್ಚಿದ ಪೊಲೀಸರು, ಮುಂಬೈ ಶಿವಾಜಿನಗರದಲ್ಲಿ ಆತನನ್ನು ಬಂಧಿಸಿದ್ದಾರೆ. ಬಳಿಕ ಕಾರವಾರಕ್ಕೆ ಕರೆತಂದು ಮುಂದಿನ ಕಾನೂನು ಪ್ರಕ್ರಿಯೆ ಹಾಗೂ ವಿಚಾರಣೆ ಕೈಗೊಂಡಿದ್ದಾರೆ.

ಬಾಲಕಿ ಮೇಲಿನ ದೌರ್ಜನ್ಯದ ಆರೋಪ ಖಂಡಿಸಿ ಆರೋಪಿಯನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಸಾರ್ವಜನಿಕರು ಈ ಹಿಂದೆ ಚಿತ್ತಾಕುಲ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಪ್ರಕರಣ ಸಾರ್ವಜನಿಕ ವಲಯದಲ್ಲಿಯೂ ತೀವ್ರ ಚರ್ಚೆಗೆ ಕಾರಣವಾಗಿತ್ತು.

ಇದೀಗ ಆರೋಪಿಯ ಬಂಧನದೊಂದಿಗೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯೂರು | ಕುಡಿಯುವ ನೀರಿಗೆ ಪರದಾಟ; ಸಮಸ್ಯೆ ಪರಿಹರಿಸಲು ನಗರಸಭೆಗೆ ಮನವಿ

ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯ ಚಿತ್ರದುರ್ಗದ ಹಿರಿಯೂರು ತಾಲೂಕು ಸಮಿತಿ ವತಿಯಿಂದ...

ಓಲಾ, ಉಬರ್ ಟ್ಯಾಕ್ಸಿಗಳಿಗೂ ಮೀಟರ್ ಕಡ್ಡಾಯ: ಸಾರಿಗೆ ಇಲಾಖೆಯ ಮಹತ್ವದ ನಿರ್ಧಾರ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್‌ನಂತಹ ಆ್ಯಪ್ ಆಧಾರಿತ ಟ್ಯಾಕ್ಸಿ...

ಚಿಂತಾಮಣಿ | ಗೌನಪಲ್ಲಿ ಪಟ್ಟಣ ಪಂಚಾಯಿತಿ ಕನಸು : ಸರ್ಕಾರದ ಗಮನ ಸೆಳೆಯಲು ಬೆಳಗಾವಿವರೆಗೆ ಕಾಲ್ನಡಿಗೆ ಹೊರಟ ಅಮ್ಜದ್ ಪಾಷಾ

ರಾಜ್ಯದ ಗಡಿಭಾಗದಲ್ಲಿರುವ ದೊಡ್ಡ ಜನಸಂಖ್ಯೆ ಹಾಗೂ ಭಾರಿ ವಿಸ್ತೀರ್ಣ ಹೊಂದಿರುವ ಕೋಲಾರ...

2027ರ ಜನಗಣತಿ ‘ಪ್ರಹಸನ’ವಾಗುತ್ತಿದೆ, ಗಂಭೀರ ಪರಿಣಾಮ ಬೀರಲಿದೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ!

2027ರ ಜನಗಣತಿ ಪ್ರಕ್ರಿಯೆಯು ಹಲವು ವಿಧಗಳಲ್ಲಿ ಒಂದು ‘ಪ್ರಹಸನ’ವಾಗಿ ಮಾರ್ಪಡುತ್ತಿದ್ದು, ಇದು...