ಕಾರವಾರ | ಕಳಪೆ ಕಾಮಗಾರಿ ಕಂಡುಬಂದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾ ಪಂಚಾಯತ್ ಸಿಇಒ ಡಾ. ದಿಲೀಷ್ ಶಶಿ

Date:

ಕಾರವಾರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗುವ ಟಾಸ್ಕ್ ಫೋರ್ಸ್ ಕಾಮಗಾರಿಗಳು ಸೇರಿದಂತೆ ಯಾವುದೇ ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಎಚ್ಚರಿಕೆ ನೀಡಿದರು.

- Advertisement -

ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸಬೇಕು. ಪ್ರತಿಯೊಂದು ಕಾಮಗಾರಿಯ ವಿವರಗಳನ್ನು ಜಿಪಿಎಸ್ ಮಾಹಿತಿ ಒಳಗೊಂಡ ಛಾಯಾಚಿತ್ರಗಳೊಂದಿಗೆ ಸಲ್ಲಿಸಿದ ಬಳಿಕವೇ ಕಾಮಗಾರಿಯ ವೆಚ್ಚದ ಬಿಲ್ಲುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಈ ಸುದ್ದಿ ಓದಿದ್ದೀರಾ? ದಾಂಡೇಲಿ | ರೀಲ್ಸ್‌ಗಾಗಿ ಅಪಾಯಕಾರಿ ವಾಹನ ಚಾಲನೆ; ತೂಫಾನ್ ಕ್ರೂಸರ್ ಚಾಲಕನ ವಿರುದ್ಧ ಪ್ರಕರಣ ದಾಖಲು

ಜಿಲ್ಲೆಯ ವಿವಿಧೆಡೆ ಕೊರೆದಿರುವ ಕೊಳವೆಬಾವಿಗಳಿಗೆ ಆದಷ್ಟು ಶೀಘ್ರದಲ್ಲಿ ವಿದ್ಯುತ್ ಸಂಪರ್ಕ ಹಾಗೂ ಪಂಪ್‌ಸೆಟ್ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ, ದುರಸ್ತಿ ಹಾಗೂ ಅವುಗಳ ಸುಧಾರಣೆ ಕುರಿತು ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಬಕಷ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್‌ಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮಾದಕ ವ್ಯಸನದಿಂದ ಅಪರಾಧಗಳ ಹೆಚ್ಚಳ: ಜಿಲ್ಲಾಡಳಿತ ವಿಫಲ, ಜನಪ್ರತಿನಿಧಿಗಳಿಂದ ಆರೋಪಿಗಳ ರಕ್ಷಣೆ — ಎಂ. ವಿರೂಪಾಕ್ಷಿ ಆರೋಪ

ಜಿಲ್ಲೆಯಲ್ಲಿ ಮಾದಕ ವ್ಯಸನದಿಂದ ಕೊಲೆಗಳು, ದೌರ್ಜನ್ಯ, ಹಲ್ಲೆಗಳು ಹೆಚ್ಚಳವಾಗುತ್ತಿದ್ದು ಜಿಲ್ಲಾಡಳಿತ ನಿಯಂತ್ರಿಸುವಲ್ಲಿ...

ಕಲಬುರಗಿ | ಮನೆಯ ಛಾವಣಿಯಲ್ಲಿ ಬೆಂಕಿ ಅವಘಡ

ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜು ರಸ್ತೆಯಲ್ಲಿರುವ ಎ.ಕೆ. ಇಂಫ್ರಾ ಸಂಸ್ಥೆಗೆ ಸೇರಿದ...

ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ,...