ಉತ್ತರ ಕನ್ನಡ | ಪ್ರವಾಸಕ್ಕೆ ಬಂದಿದ್ದ ಕೋಲಾರದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲು

Date:

Advertisements

ಶೈಕ್ಷಣಿಕ ಪ್ರವಾಸಕ್ಕೆಂದು ಕಾರವಾರದ ಮುರುಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಈ ದುರ್ಘಟನೆ ನಡೆದಿದೆ. ಇಂದು (ಡಿಸೆಂಬರ್ 10) ಸಂಜೆ ಕಡಲ ತೀರದಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ಕು ಬಾಲಕರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಸದ್ಯ ಓರ್ವ ವಿದ್ಯಾರ್ಥಿ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ವಿದ್ಯಾರ್ಥಿಗಳಿಗೆ ಶೋಧ ಕಾರ್ಯ ನಡೆದಿದೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕೊತ್ತೂರು ಶಾಲೆ ವತಿಯಿಂದ ಒಟ್ಟು 54 ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದು, ಇಂದು ಸಂಜೆ ಮುರುಡೇಶ್ವರ ಬೀಚ್​ನಲ್ಲಿ ಆಟವಾಡುತ್ತಿದ್ದಾರೆ. ಈ ವೇಳೆ ಏಕಾಏಕಿ ನಾಲ್ವರು ವಿದ್ಯಾರ್ಥಿಗಳು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಡಾ ಹಗರಣ | ಕರ್ನಾಟಕ ಹೈಕೋರ್ಟ್ ದೋಷಪೂರಿತ ತೀರ್ಪು ನೀಡಿತೆ?

Advertisements

ಇನ್ನು ಕಳೆದ ಎರಡು ತಿಂಗಳಿನಿಂದ ಯಾವುದೇ ಸಲಕರಣೆ ಪೂರೈಸದ ಹಿನ್ನೆಲೆಯಲ್ಲಿ ಮಕ್ಕಳನ್ನು ರಕ್ಷಿಸಲಾಗದೆ ಲೈಫ್ ಗಾರ್ಡ್ಸ್ ಅಸಹಾಯಕರಾಗಿದ್ದಾರೆ. ಲೈಫ್ ಗಾರ್ಡ್ ಗಳಿಗೆ ಅಗತ್ಯ ಸಲಕರಣೆ ಒದಗಿಸುವಂತೆ ಸುದ್ದಿ ಮಾಡಿದ್ದರೂ ಪ್ರವಾಸೋದ್ಯಮ ಇಲಾಖೆ ಎಚ್ಚೆತ್ತುಕೊಂಡಿಲ್ಲ. ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೆವೆ ಸಲಕರಣೆ ಸಮಸ್ಯೆ ಬಗೆಹರಿಸುವ ಅಶ್ವಾಸನೆಯನ್ನು ಸಚಿವ ಮಂಕಾಳು ವೈದ್ಯ ನೀಡಿದ್ದರು. ಆದರೆ ಅದು ಭರವಸೆಯಾಗಿಯೇ ಉಳಿದಿದೆ.

ಕೆಲವು ದಿನಗಳ ಹಿಂದೆ ಮುರುಡೇಶ್ವರದಲ್ಲಿ ಪ್ರವಾಸಿಗರು ಮೃತಪಟ್ಟಿದ್ದರು. ಆದರೂ ಅಗತ್ಯ ಸಲಕರಣೆ ಇಲ್ಲದ ಕಾರಣ ಲೈಫ್ ಗಾರ್ಡ್ಸ್​ಗಳು ಸಮುದ್ರಕ್ಕೆ ಇಳಿದಿರಲಿಲ್ಲ. ಹೀಗಾಗಿ ತಾಲೂಕು ಆಡಳಿತ ಪ್ರವಾಸಿಗರನ್ನು ಕಡಲ ತೀರಕ್ಕೆ ನಿರ್ಬಂಧಿಸಿತ್ತು. ಬಳಿಕ ಕಳೆದ ಒಂದು ತಿಂಗಳಿನಿಂದ ನಿರ್ಬಂಧ ತೆರವುಗೊಳಿಸಿತ್ತು. ಆದರೆ ಸುರಕ್ಷತೆ ಕ್ರಮ ಕೈಗೊಳ್ಳಲಾಗಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X