ಕುಮಟಾ | ಬಿಜೆಪಿ ತಾಲೂಕು ಅಧ್ಯಕ್ಷ ಜಿ.ಐ. ಹೆಗಡೆ ವಿರುದ್ಧ ಭೂ ಅತಿಕ್ರಮಣ ಆರೋಪ; ಗ್ರಾಮಸ್ಥರಿಂದ ಪ್ರತಿಭಟನೆ

Date:

ಕುಮಟಾ: ತಾಲೂಕಿನ ಮೂರೂರು ಗ್ರಾಮದಲ್ಲಿ ಅರಣ್ಯ ಭೂಮಿ ಹಾಗೂ ದೈವಸ್ಥಾನದ ಜಾಗವನ್ನು ಒತ್ತುವರಿ ಮಾಡಲು ಯತ್ನಿಸಿದ ಆರೋಪ ಕುಮಟಾ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಿ.ಐ. ಹೆಗಡೆ ಅವರ ವಿರುದ್ಧ ಕೇಳಿಬಂದಿದೆ.

- Advertisement -

ಸುಮಾರು 500ಕ್ಕೂ ಹೆಚ್ಚು ಗ್ರಾಮಸ್ಥರು ಒಗ್ಗೂಡಿ ಅತಿಕ್ರಮಣ ಆಗುವುದನ್ನು ತಡೆದಿದ್ದಲ್ಲದೆ, ರಾಜಕೀಯ ಪ್ರಭಾವಕ್ಕೆ ಮಣಿಯದಂತೆ ಆಡಳಿತ ವರ್ಗಕ್ಕೆ ಎಚ್ಚರಿಕೆ ನೀಡಿದ್ದಾರೆ. ಮೂರೂರು ಗ್ರಾಮದ ಸರ್ವೆ ನಂಬರ್ 191ರಲ್ಲಿರುವ ಸುಮಾರು 3 ಎಕರೆ ಅರಣ್ಯ ಪ್ರದೇಶವನ್ನು ಜಿ.ಐ. ಹೆಗಡೆ ಅವರು ಕಾನೂನುಬಾಹಿರವಾಗಿ ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂಬುದು ಗ್ರಾಮಸ್ಥರ ಪ್ರಮುಖ ದೂರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಜಾಗವು ಗ್ರಾಮದ ಸುಮಾರು 700ಕ್ಕೂ ಹೆಚ್ಚು ಕುಟುಂಬಗಳ ಶ್ರದ್ಧಾಕೇಂದ್ರವಾದ ‘ಜಟಕ ದೇವರು’ ನೆಲೆಸಿರುವ ಪುಣ್ಯಭೂಮಿಯಾಗಿದ್ದು, ಸಂಪೂರ್ಣವಾಗಿ ಅರಣ್ಯ ಇಲಾಖೆಗೆ ಸೇರಿದ್ದಾಗಿದೆ. ಖಾಸಗಿ ವ್ಯಕ್ತಿಗೆ ಸಂಬಂಧಿಸಿದ 3 ಎಕರೆ ಇಳಿಜಾರು ಪ್ರದೇಶದ ಬದಲಾಗಿ, ಅರಣ್ಯ ಇಲಾಖೆಗೆ ಸೇರಿದ ಸಮತಟ್ಟಾದ ಜಾಗವನ್ನು ಅಕ್ರಮವಾಗಿ ಕೊಡಿಸುವುದಾಗಿ ಜಿ.ಐ. ಹೆಗಡೆ ಅವರು ಮೂಲ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪವನ್ನು ಗ್ರಾಮಸ್ಥರು ಮಾಡಿದ್ದಾರೆ.

ಜಾಗದ ಕುರಿತು 2021ರಲ್ಲಿಯೇ ಅರಣ್ಯ ಇಲಾಖೆ ಮತ್ತು ತಹಶೀಲ್ದಾರರು ಸ್ಥಳ ಪರಿಶೀಲನೆ ನಡೆಸಿದ್ದರು. ಸದರಿ ಜಾಗವು ಕಂದಾಯ ಇಲಾಖೆಗೆ ಸೇರಿದ್ದಲ್ಲ, ಬದಲಾಗಿ ಅರಣ್ಯ ಇಲಾಖೆಗೆ ಸೇರಿದ್ದೆಂದು ಅಂದೇ ಲಿಖಿತವಾಗಿ ದಾಖಲೆ ನೀಡಲಾಗಿತ್ತು. ಹೀಗಿದ್ದರೂ, ರಾಜಕೀಯ ಒತ್ತಡ ಬಳಸಿ ಸರ್ವೆ ಕಾರ್ಯ ಮತ್ತು ಗಡಿ ಗುರುತಿಸುವಿಕೆ ನಡೆಸುವ ಮೂಲಕ ಭೂಮಿಯನ್ನು ಕಬಳಿಸಲು ನಿರಂತರ ಸಂಚು ನಡೆಯುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | 73 ಹೊಸ ನ್ಯಾಯಬೆಲೆ ಅಂಗಡಿಗಳ ಸ್ಥಾಪನೆಗೆ ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆ ಸಲ್ಲಿಕೆ

ಇತ್ತೀಚೆಗೆ ಅತಿಕ್ರಮಣ ಚಟುವಟಿಕೆಗಳು ಆರಂಭವಾದ ವಿಷಯ ತಿಳಿಯುತ್ತಿದ್ದಂತೆ 200ಕ್ಕೂ ಹೆಚ್ಚು ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಜಿ.ಐ. ಹೆಗಡೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮದ ಆಸ್ತಿ ಮತ್ತು ದೈವದ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದ ಗ್ರಾಮಸ್ಥರು, ಸದ್ಯಕ್ಕೆ ಒತ್ತುವರಿ ಕಾರ್ಯವನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜಕೀಯ ನಾಯಕರ ಒತ್ತಡಕ್ಕೆ ಮಣಿದು ಅರಣ್ಯ ಭೂಮಿ ಮತ್ತು ಧಾರ್ಮಿಕ ಸ್ಥಳಗಳನ್ನು ಅತಿಕ್ರಮಿಸುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಒಂದು ವೇಳೆ ರಾಜಕೀಯ ಪ್ರಭಾವ ಬಳಸಿ ಮತ್ತೆ ಅತಿಕ್ರಮಣಕ್ಕೆ ಮುಂದಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮೂರೂರು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...