ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ; ಕಾರವಾರದಲ್ಲಿ ದಸಂಸ ಬೃಹತ್ ಪ್ರತಿಭಟನೆ

Date:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ವಿವಿಧ ಸಮಸ್ಯೆಗಳನ್ನು ಪರಿಹರಿಸಿ, ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಆಗ್ರಹಿಸಿ ಹಾಗೂ 16 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ವತಿಯಿಂದ ಶುಕ್ರವಾರ ಕಾರವಾರದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಸಮಿತಿಯ ಜಿಲ್ಲಾ ಸಂಚಾಲಕ ಗಣೇಶ ಮೊಗೇರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಗ್ರೀನ್ ಸ್ಟ್ರೀಟ್‌ನಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕನ್ನಡ ವಿಚಾರ ಪರಂಪರೆಗೆ ಕೆವಿಎನ್...

ನಮ್ಮೊಳಗಿನ ತಾಕಲಾಟ, ಹೊಯ್ದಾಟ, ತೀರಗಳೇ ತಲುಪದ ಭಾರಿ ಅಲೆಗಳ ಏರಾಟದಲ್ಲಿ ಸಿಲುಕಿ ಒದ್ದಾಡುವಾಗ ಒಮ್ಮೆ ಕೆವಿಎನ್‌ ಜತೆ ಮಾತನಾಡಿದರೆ ಸಾಕು… ಕಂಡ ಆಪ್ತರು “ ಏನೋ ಇವತ್ತು ನಿನಗೆ ಬಂಪರ್‌ ಲಾಟರಿ ಹೊಡೀತಾ’’...

E20 ಹೆಸರಲ್ಲಿ E31 ಸುಲಿಗೆ: ಕರ್ನಾಟಕದಲ್ಲಿ ಮೋದಿ ಸರ್ಕಾರದ...

ದೇಶದ ಇಂಧನ ಮಾರುಕಟ್ಟೆಯ ಇತಿಹಾಸದಲ್ಲೇ ಅತ್ಯಂತ ಕರಾಳವಾದ, ಜನರ ಕಣ್ಣಿಗೆ ಮಣ್ಣು ಎರಚಿ ಅವರ ವಾಹನಗಳ ಎಂಜಿನ್‌ಗಳನ್ನು ನಾಶಪಡಿಸುವ ಮತ್ತು ಜೇಬಿಗೆ ಕತ್ತರಿ ಹಾಕುವ ಬೃಹತ್ ದರೋಡೆಕೋರತನ ಕರ್ನಾಟಕದಲ್ಲಿ ಬಯಲಾಗಿದೆ. ಪೆಟ್ರೋಲ್‌ನಲ್ಲಿ 20%ರ...

ಮೀಟರ್ ಹಾಕಲ್ಲ, ನಿಗದಿತ ಬಾಡಿಗೆಗೆ ಬರಲ್ಲ: ಆಟೋ ಸುಲಿಗೆಯಿಂದ...

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋಗಳ ಸಂಚಾರ ಮತ್ತು ಆಟೋ ಪ್ರಯಾಣಿಕರ ಸಮಸ್ಯೆ ಇಂದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ. ನಗರದ ರಸ್ತೆಗಳಲ್ಲಿ ಆಟೋಗಳ ಸಂಖ್ಯೆ ಹೆಚ್ಚುತ್ತಿರುವುದು, ನಿಗದಿತ ದರಕ್ಕಿಂತ ಹೆಚ್ಚಿನ ಬಾಡಿಗೆ ಕೇಳುವುದು,...

“ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಒಳಮೀಸಲಾತಿ ಸೇರಿದಂತೆ ಮೀಸಲಾತಿಗೆ ಸಂಬಂಧಿಸಿದ ಬೇಡಿಕೆಗಳನ್ನು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

“ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ನಿಗದಿತ ಉದ್ದೇಶಗಳಿಗೆ ಮಾತ್ರ ಬಳಸಬೇಕು. ಸಮುದಾಯದ ಜನರಿಗೆ ಶಿಕ್ಷಣ, ಉದ್ಯೋಗ ಹಾಗೂ ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ವಸತಿ ಸೌಲಭ್ಯ ಒದಗಿಸಬೇಕು. ಅಂಬೇಡ್ಕರ್ ಭವನ ಹಾಗೂ ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಲಾಗಿದೆ.

“ಉತ್ತರ ಕನ್ನಡ ಜಿಲ್ಲೆಯ ಮೊಗೇರ ಸಮುದಾಯದವರಿಗೆ ಜಾತಿ ಪ್ರಮಾಣಪತ್ರ ಪಡೆಯುವಲ್ಲಿ ಎದುರಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಿ, ಅರ್ಹರಿಗೆ ಸರ್ಕಾರದ ಸೌಲಭ್ಯಗಳು ದೊರೆಯುವಂತೆ ಮಾಡಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ನ್ಯಾಯ ಹಾಗೂ ಸೂಕ್ತ ಪರಿಹಾರ ಕಲ್ಪಿಸಬೇಕು. ದೌರ್ಜನ್ಯ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು” ಎಂದು ಒತ್ತಾಯಿಸಲಾಗಿದೆ.

ಇದಲ್ಲದೆ, ದೇವದಾಸಿ ಮತ್ತು ವಿಧವಾ ಮಹಿಳೆಯರ ಮಾಸಾಶನ ಹೆಚ್ಚಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ವಸತಿ ಸೌಲಭ್ಯ, ನಿವೇಶನ ಹಾಗೂ ಇತರ ಸರ್ಕಾರಿ ಯೋಜನೆಗಳ ಪ್ರಯೋಜನ ತಲುಪಿಸಬೇಕು. ಸಮುದಾಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಬಾಕಿ ಇರುವ ಯೋಜನೆಗಳನ್ನು ಜಾರಿಗೊಳಿಸಬೇಕು. ಸರ್ಕಾರಿ ಇಲಾಖೆಗಳಲ್ಲಿ ಸಮುದಾಯದ ಹಕ್ಕು ಮತ್ತು ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಬೇಕು ಎಂಬ ಬೇಡಿಕೆಗಳನ್ನೂ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಒಟ್ಟು 16 ಪ್ರಮುಖ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಸಲ್ಲಿಸಿದ ಸಮಿತಿಯ ಪದಾಧಿಕಾರಿಗಳು, ಸರ್ಕಾರ ಈ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಆದ್ಯತೆಯ ಮೇರೆಗೆ ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇರಳ- ಚುನಾವಣಾ ಆಯುಕ್ತ ಗ್ಯಾನೇಶ್ ವಿರುದ್ಧದ ತನಿಖೆಗೆ ವಿಶೇಷ ತಂಡ ರಚನೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್‌ ಅವರ ವಿರುದ್ಧ...

ಎಸ್‌ಬಿಐಗೆ ₹12,668 ಕೋಟಿ ವಂಚನೆ: ವಿಡಿಯೊಕಾನ್‌ ಮಾಜಿ ಪ್ರವರ್ತಕ ವೇಣುಗೋಪಾಲ್ ಧೂತ್‌ ‘ದಿವಾಳಿ’

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ನೇತೃತ್ವದ ಪ್ರಬಲ ಬ್ಯಾಂಕ್‌ಗಳ ಒಕ್ಕೂಟಕ್ಕೆ...

ಆಲಮಟ್ಟಿ– ಕುಷ್ಟಗಿ ರೈಲು ಮಾರ್ಗಕ್ಕೆ ಭೂಮಿ ಒದಗಿಸಲು ರೈಲ್ವೇ ಹೋರಾಟ ಸಮಿತಿಯ ಮನವಿ

ರಾಜ್ಯದಲ್ಲಿ ಹೊಸ ರೈಲು ಮಾರ್ಗಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಹಾಗೂ ಅನುದಾನ...