ಮುಂಡಗೋಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳವಾದ ವಾರದ ಸೋಮವಾರದ ಸಂತೆ ಹಾಗೂ ಗ್ರಾಮೀಣ ಭಾಗದ ಮಾರುಕಟ್ಟೆಯನ್ನು ಆಯ್ಕೆ ಮಾಡಿಕೊಂಡು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸೋಮವಾರ ವಿನೂತನ ಜಾಗೃತಿ ಅಭಿಯಾನ ನಡೆಸಲಾಯಿತು.
ವಾರದ ಸಂತೆಗೆ ವಿವಿಧ ಗ್ರಾಮಗಳಿಂದ ಸಾವಿರಾರು ಜನರು ಆಗಮಿಸುವ ಹಿನ್ನೆಲೆಯಲ್ಲಿ, ಒಂದೇ ಸ್ಥಳದಲ್ಲಿ ಹೆಚ್ಚಿನ ಜನರನ್ನು ತಲುಪಲು ಈ ಅಭಿಯಾನ ಆಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಸಂತೆಯಲ್ಲಿ ವ್ಯಾಪಾರಸ್ಥರು, ರೈತರು ಹಾಗೂ ಸಾರ್ವಜನಿಕರನ್ನು ನೇರವಾಗಿ ಭೇಟಿ ಮಾಡಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಮಾಹಿತಿ ನೀಡಲಾಯಿತು.
ಈ ಸುದ್ದಿ ಓದಿದ್ದೀರಾ? ಹಳಿಯಾಳ | ಸಿದ್ದಿ ಸಮುದಾಯದ ಯುವತಿಯರ ರಾಷ್ಟ್ರೀಯ ಸಾಧನೆ; ಶಾಲಿನಾಗೆ ಬೆಳ್ಳಿ, ಪ್ರಿನ್ಸಿಟಾಗೆ ಕಂಚು
ಕಾರ್ಯಕ್ರಮಕ್ಕೆ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಸ್ವೀಪ್ ನೋಡಲ್ ಅಧಿಕಾರಿ ಟಿ.ವೈ. ದಾಸನಕೊಪ್ಪ ಚಾಲನೆ ನೀಡಿ ಮಾತನಾಡಿ, ಈಗಾಗಲೇ ಮನೆ ಮನೆಗೆ ಗಣತಿ ನಮೂನೆಗಳನ್ನು ವಿತರಣೆ ಮಾಡಲಾಗಿದ್ದು, ಭರ್ತಿ ಮಾಡಿದ ನಮೂನೆಗಳನ್ನು ಜುಲೈ 29ರೊಳಗಾಗಿ ಸಂಬಂಧಿಸಿದ ಬೂತ್ ಮಟ್ಟದ ಅಧಿಕಾರಿಗಳಿಗೆ ಕಡ್ಡಾಯವಾಗಿ ಸಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿಯ ಯೋಜನಾ ಅಧಿಕಾರಿ ಚೋಳಪ್ಪ ಬಣಕಾರ, ತಾಲೂಕು ಪಂಚಾಯತಿಯ ಅಧಿಕಾರಿಗಳು, ಎನ್ಆರ್ಎಲ್ಎಂ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.




