ಮುಂಡಗೋಡ | ‘ಗೊಂದಲದ ಬಸವ ಮಂಟಪ’ ಪುಸ್ತಕ ವಿವಾದ: ತನಿಖೆ, ಕಾನೂನು ಕ್ರಮಕ್ಕೆ ಒತ್ತಾಯ

Date:

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ತತ್ವಾದರ್ಶಗಳು, ವಚನ ಸಾಹಿತ್ಯ ಹಾಗೂ ಸಾಮಾಜಿಕ ಸುಧಾರಣಾ ಚಳವಳಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಅಂಶಗಳನ್ನು ಒಳಗೊಂಡಿದೆ ಎನ್ನಲಾದ ‘ಗೊಂದಲದ ಬಸವ ಮಂಟಪ’ ಪುಸ್ತಕದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮುಂಡಗೋಡ ತಾಲೂಕಿನ ಸರ್ವ ಸಮಾಜದ ಮುಖಂಡರು ಮತ್ತು ಬಸವಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

- Advertisement -

“ಕರ್ನಾಟಕ ಸರ್ಕಾರವು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ಬಸವಣ್ಣನವರ ಇತಿಹಾಸ ಮತ್ತು ಅವರ ತತ್ವಾದರ್ಶಗಳಿಗೆ ಧಕ್ಕೆ ತರುವಂತಹ ಅಂಶಗಳು ಪುಸ್ತಕದಲ್ಲಿ ಪ್ರಕಟವಾಗಿವೆ” ಎಂಬ ಆರೋಪದ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಆಕ್ಷೇಪ ವ್ಯಕ್ತವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ಈ ಹಿನ್ನೆಲೆಯಲ್ಲಿ ಪುಸ್ತಕದ ವಿವಾದಾತ್ಮಕ ಅಂಶಗಳು, ಲೇಖಕ ರವಿ ಹಂಜ ಅವರ ಬರಹಗಳು ಹಾಗೂ ವಿಶ್ವವಾಣಿ ಪತ್ರಿಕೆಯಲ್ಲಿ ಈ ವಿಷಯಗಳು ಪ್ರಕಟವಾಗಲು ಸಹಕರಿಸಿದ್ದಾರೆ ಎನ್ನಲಾದ ವಿಶ್ವೇಶ್ವರ ಭಟ್ ಸೇರಿದಂತೆ ಸಂಬಂಧಪಟ್ಟವರ ಪಾತ್ರದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಸಂಘಟನೆಗಳು ಒತ್ತಾಯಿಸಿವೆ.

ಈ ಕುರಿತು ಐದು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿರುವ ಮುಖಂಡರು, ವಿವಾದಾತ್ಮಕ ಅಂಶಗಳನ್ನು ಒಳಗೊಂಡಿದೆ ಎನ್ನಲಾದ ಪುಸ್ತಕವನ್ನು ಕಾನೂನುಬದ್ಧವಾಗಿ ಪರಿಶೀಲಿಸಿ, ಅಗತ್ಯವಿದ್ದಲ್ಲಿ ಮುಟ್ಟುಗೋಲು ಹಾಕಿಕೊಳ್ಳಬೇಕು.

ಪುಸ್ತಕದ ಪ್ರಕಟಣೆ, ಬರವಣಿಗೆ ಮತ್ತು ಪ್ರಸಾರದಲ್ಲಿ ಭಾಗಿಯಾಗಿರುವವರ ಪಾತ್ರದ ಬಗ್ಗೆ ತನಿಖೆ ನಡೆಸಬೇಕು. ವಿಶ್ವವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಸಂಬಂಧಿತ ವಿಷಯಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.

“ಅಲ್ಲದೆ, ಬಸವಣ್ಣನವರ ಇತಿಹಾಸ ಹಾಗೂ ಸಮುದಾಯಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಅಂಶಗಳು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಧಾರ್ಮಿಕ ಸಾಮರಸ್ಯ, ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು” ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಎಲ್ಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಂಡಗೋಡ ತಾಲೂಕಿನ ಸರ್ವ ಸಮಾಜದ ಮುಖಂಡರು ಮತ್ತು ಬಸವಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ತಹಶೀಲ್ದಾರ್ ಅವರ ಮೂಲಕ ಮನವಿಯನ್ನು ಮುಖ್ಯಮಂತ್ರಿಗಳಿಗೆ ತಲುಪಿಸುವಂತೆ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ರಾಜ್ಯದ 15 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ; 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯಾದ್ಯಂತ ಮೈಕೊರೆಯುವ ಚಳಿ ಮತ್ತು ಒಣಹವೆಯ ವಾತಾವರಣ ಮುಂದುವರಿದಿದೆ. ಇದರ ನಡುವೆಯೇ,...

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...