ಮುಂಡಗೋಡ | ನೀರು ಕೇಳುವ ನೆಪದಲ್ಲಿ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿ

Date:

ಅಂಗಡಿಗೆ ಬಂದು ವಿಮಲ್ ಹಾಗೂ ಕುಡಿಯುವ ನೀರು ಕೇಳುವ ನೆಪದಲ್ಲಿ ಮಹಿಳೆಯ ಗಮನ ಬೇರೆಡೆ ಸೆಳೆದು, ಅವರ ಕೊರಳಲ್ಲಿದ್ದ ಚಿನ್ನದ ಸರಗಳನ್ನು ಕಿತ್ತುಕೊಂಡು ಅಪರಿಚಿತರು ಪರಾರಿಯಾಗಿರುವ ಘಟನೆ ಮುಂಡಗೋಡ ತಾಲೂಕಿನ ಕರಗಿನಕೊಪ್ಪ ಗ್ರಾಮದಲ್ಲಿ ನಡೆದಿದೆ.

- Advertisement -

ನವೆಂಬರ್ 21ರಂದು ಮಧ್ಯಾಹ್ನ ಸುಮಾರು 3.45ರ ವೇಳೆಗೆ ಈ ಘಟನೆ ನಡೆದಿದೆ. ಕರಗಿನಕೊಪ್ಪ ಗ್ರಾಮದ ಗೀತಾ ಲಮಾಣಿ ಅವರು ಅಂಗಡಿಯಲ್ಲಿದ್ದಾಗ ಬಿಳಿ ಬಣ್ಣದ ಕಾರಿನಲ್ಲಿ ಬಂದಿದ್ದ ಮೂವರು ಅಥವಾ ನಾಲ್ವರು ಆರೋಪಿಗಳ ಪೈಕಿ ಒಬ್ಬ ಅಂಗಡಿಗೆ ಬಂದು ವಿಮಲ್ ಹಾಗೂ ಕುಡಿಯುವ ನೀರು ಕೇಳಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಈ ವೇಳೆ ಮಹಿಳೆಯ ಕೊರಳಲ್ಲಿದ್ದ ಸುಮಾರು 15 ಗ್ರಾಂ ತೂಕದ ₹1 ಲಕ್ಷ ಮೌಲ್ಯದ ಚಿನ್ನದ ತಾಳಿ ಸರ ಹಾಗೂ 5 ಗ್ರಾಂ ತೂಕದ ₹50 ಸಾವಿರ ಮೌಲ್ಯದ ದೇವರ ಪದಕವಿದ್ದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಳುವಾದ ಒಟ್ಟು 20 ಗ್ರಾಂ ಚಿನ್ನಾಭರಣಗಳ ಮೌಲ್ಯ ಸುಮಾರು ₹1.50 ಲಕ್ಷ ಎಂದು ಅಂದಾಜಿಸಲಾಗಿದೆ.

ಆರೋಪಿಗಳ ಪೈಕಿ ಒಬ್ಬ ಬಿಳಿ ಬಣ್ಣದ ಉದ್ದತೋಳಿನ ಶರ್ಟ್, ನೀಲಿ ಜೀನ್ಸ್ ಪ್ಯಾಂಟ್, ಕಪ್ಪು ಟೋಪಿ ಹಾಗೂ ಬಿಳಿ ಶೂ ಧರಿಸಿದ್ದನು. ಗೋಧಿ ಮೈಬಣ್ಣ ಹೊಂದಿದ್ದು, ಮುಖದ ಮೇಲೆ ಕಪ್ಪು ಬಣ್ಣದ ಕುರುಚಲು ಗಡ್ಡ ಮತ್ತು ಮೀಸೆ ಇತ್ತು ಎಂದು ದೂರಿನಲ್ಲಿ ವಿವರಿಸಲಾಗಿದೆ.

ಈ ಕುರಿತು ಗೀತಾ ಲಮಾಣಿ ಅವರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ ಅಂದಿನ ಐತಿಹಾಸಿಕ ನಿಲುವುಗಳ ಅರಿವಿದೆಯೇ?

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ...

ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ; 12 ಸಮಿತಿಗಳ ರಚನೆ

ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಯಾವುದೇ ಲೋಪದೋಷಗಳಿಗೆ...

ಕತ್ತಲಲ್ಲಿ ಅಡ್ಜಸ್ಟ್‌ಮೆಂಟ್ ಮಾಡಿಕೊಳ್ಳುವ ರಾಜಕಾರಣಿ ನಾನಲ್ಲ: ವಿಜಯೇಂದ್ರಗೆ ಜನಾರ್ದನ ರೆಡ್ಡಿ ತಿರುಗೇಟು

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೂತನ ಸರ್ಕಾರಿ ನಿವಾಸದ ಗೃಹಪ್ರವೇಶ ಔತಣಕೂಟದಲ್ಲಿ...

ಗದಗ | ಕೃಷಿ ಮೌಲ್ಯವರ್ಧನೆ, ಮಾರುಕಟ್ಟೆ ಜಾಲ ವಿಸ್ತರಣೆ ಇಂದಿನ ಅಗತ್ಯ: ಈಶ್ವರ ಖಂಡ್ರೆ

ಕೃಷಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಲಕ್ಷಾಂತರ ಕುಟುಂಬಗಳ ಜೀವನೋಪಾಯಕ್ಕೆ ಆಧಾರವಾಗಿದೆ. ದೇಶದ...