ಮುಂಡಗೋಡ | ಭಾರತ-ನೇಪಾಳ ಅಂಧ ಮಹಿಳೆಯರ ಟಿ20 ಸರಣಿಗೆ ರಂಜಿತಾ ಹಾವೇರಿ ಆಯ್ಕೆ

Date:

ಭಾರತ ಮತ್ತು ನೇಪಾಳ ನಡುವೆ ನಡೆಯಲಿರುವ ಐದು ಪಂದ್ಯಗಳ ದ್ವಿಪಕ್ಷೀಯ ಅಂಧ ಮಹಿಳೆಯರ ಟಿ20 ಕ್ರಿಕೆಟ್ ಸರಣಿಗೆ ಪ್ರಕಟಿಸಿರುವ 17 ಸದಸ್ಯರ ಭಾರತೀಯ ತಂಡದಲ್ಲಿ ಮುಂಡಗೋಡಿನ ಜ್ಞಾನ ಪ್ರಜ್ಞಾ ಅಂಧ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿನಿ ರಂಜಿತಾ ಹಾವೇರಿ ಸ್ಥಾನ ಪಡೆದಿದ್ದಾರೆ.

- Advertisement -

ಭಾರತ ತಂಡದಲ್ಲಿ ಕರ್ನಾಟಕದ ನಾಲ್ವರು ಆಟಗಾರ್ತಿಯರಿಗೆ ಅವಕಾಶ ದೊರೆತಿದ್ದು, ರಂಜಿತಾ ಹಾವೇರಿ ಸೇರಿದಂತೆ ದೀಪಿಕಾ ಟಿ.ಸಿ., ಸುನೀತಾ ದೊಂಡಪ್ಪ ನವರ ಹಾಗೂ ಜಯಲಕ್ಷ್ಮಿ ಬಿ. ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಷೇರುದಾರರ ಇಂದಿನ ಜಾಗತಿಕ ಮಂತ್ರ- ‘ಅಮೆರಿಕವನ್ನು ನಂಬಿ ಹಣ...

ಅಮೆರಿಕನ್ನರು ಮಾತ್ರವಲ್ಲ, ವಿದೇಶಗಳ ಸಾಮಾನ್ಯ ಜನರೂ ಮುಗಿಬಿದ್ದು ಅಮೆರಿಕದ ಷೇರುಗಳನ್ನು ಕೊಳ್ಳುತ್ತಿದ್ದಾರೆ. ಅಮೆರಿಕದ ರಾಜಕೀಯ ನಾಯಕತ್ವದ ಬಗ್ಗೆ ಅವರಿಗೆ ಅಸಮಾಧಾನವಿದ್ದಿರಬಹುದು. ಆದರೆ ಅಮೆರಿಕನ್ ಕಂಪನಿಗಳ ಷೇರುಗಳ ಮೇಲೆ ಮಾತ್ರ ಅವರೆಲ್ಲರಿಗೂ ವಿಪರೀತ ವ್ಯಾಮೋಹ...

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಚಿಕ್ಕಂದಿನಿಂದಲೂ ಕ್ರಿಕೆಟ್‌ನಲ್ಲಿ ಆಸಕ್ತಿ ಹೊಂದಿರುವ ರಂಜಿತಾ, ಶಾಲೆಯ ಕ್ರೀಡಾ ತರಬೇತುದಾರರ ಮಾರ್ಗದರ್ಶನದಲ್ಲಿ ನಿರಂತರ ಅಭ್ಯಾಸ ನಡೆಸುತ್ತಾ ಬಂದಿದ್ದಾರೆ. ಬ್ಯಾಟಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಆಯ್ಕೆ ಪ್ರಕ್ರಿಯೆಯಲ್ಲಿ ಗಮನ ಸೆಳೆದ ಅವರು, ಇದೀಗ ಭಾರತೀಯ ತಂಡಕ್ಕೆ ಆಯ್ಕೆಯಾಗುವ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡಿದ್ದಾರೆ.

ದೃಷ್ಟಿ ಸವಾಲಿನ ನಡುವೆಯೂ ಕ್ರೀಡೆಯಲ್ಲಿ ಸಾಧನೆ ಮಾಡಿರುವ ರಂಜಿತಾ ಅವರ ಆಯ್ಕೆಯಿಂದ ಮುಂಡಗೋಡ ಮಾತ್ರವಲ್ಲದೆ ಉತ್ತರ ಕನ್ನಡ ಜಿಲ್ಲೆ ಹಾಗೂ ರಾಜ್ಯಕ್ಕೆ ಹೆಮ್ಮೆ ತಂದಂತಾಗಿದೆ. ಶಾಲೆಯಲ್ಲಿ ದೊರೆತ ತರಬೇತಿ, ಶಿಸ್ತು, ಪರಿಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನ ಅವರ ಸಾಧನೆಗೆ ನೆರವಾಗಿದೆ.

ಭಾರತ ಮತ್ತು ನೇಪಾಳ ನಡುವಿನ ಈ ಐದು ಪಂದ್ಯಗಳ ಸರಣಿಯು ಅಂಧ ಮಹಿಳಾ ಕ್ರಿಕೆಟ್‌ಗೆ ಉತ್ತೇಜನ ನೀಡುವ ನಿರೀಕ್ಷೆಯಿದೆ. ಈ ಮೂಲಕ ಎರಡೂ ದೇಶಗಳ ಆಟಗಾರ್ತಿಯರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶ ದೊರೆಯಲಿದೆ.

ಶಾಲಾ ಆಡಳಿತ ಮಂಡಳಿಯಿಂದ ಅಭಿನಂದನೆ

ರಂಜಿತಾ ಅವರ ಆಯ್ಕೆಗೆ ಜ್ಞಾನ ಪ್ರಜ್ಞಾ ಅಂಧ ಮಕ್ಕಳ ವಸತಿ ಶಾಲೆಯ ಅಧ್ಯಕ್ಷ ಶಂಕರ್ ವಿ. ಆಲದಕಟ್ಟಿ ಹಾಗೂ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಭಾರತ ತಂಡದ ಗೆಲುವಿಗೆ ಕೊಡುಗೆ ನೀಡುವುದರ ಜೊತೆಗೆ ಶಾಲೆ ಹಾಗೂ ಮುಂಡಗೋಡಿಗೆ ಇನ್ನಷ್ಟು ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ. ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಸಹಪಾಠಿಗಳು ಕೂಡ ರಂಜಿತಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಬಾಲಕ ಜಯ್ ಶಾ ಐಸಿಸಿ ಅಧ್ಯಕ್ಷ; ಭಾರತದ ಯುವಸಮೂಹ ನಿರ್ಲಕ್ಷ್ಯ

ಅಧಿಕಾರಸ್ಥರ ಮಕ್ಕಳು ಅರ್ಹತೆ ಇಲ್ಲದಿದ್ದರೂ ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿಷ್ಠಿತ ಹುದ್ದೆಗಳನ್ನು ಅಲಂಕರಿಸುವುದು;...

ಬಿಲ್ಕಿಸ್ ಬಾನೋ ಪ್ರಕರಣ: ಇಬ್ಬರು ಅಪರಾಧಿಗಳ ಶಿಕ್ಷೆ ಅಮಾನತು ಮಾಡಿದ ಸುಪ್ರೀಂ; ನೋವು-ಆಘಾತ ಎಂದ ಸಂತ್ರಸ್ತೆ

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ...

 ‘ಸ್ಟಿಂಗ್ ಆಪರೇಷನ್’ ಪ್ರಕರಣ: ತನಿಖೆಗೆ ಮೊಬೈಲ್ ನೀಡಲು ಕೃಪಾ ಆಳ್ವ ಹಿಂದೇಟು!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದೆ ಎನ್ನಲಾದ ‘ಸ್ಟಿಂಗ್ ಆಪರೇಷನ್’...

ಚುನಾವಣಾ ಆಯೋಗಕ್ಕೆ ಪ್ರತಿಪಕ್ಷಗಳ ‘ಇಂಟರಾಗೇಟರಿ’ ಅಸ್ತ್ರ: 48 ಪ್ರಶ್ನೆಗಳಿಗೆ ಉತ್ತರ ಕೋರಿ ಸುಪ್ರೀಂ ಮೊರೆ

ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಎದುರಿಸುತ್ತಿರುವ ಚುನಾವಣಾ ಆಯೋಗಕ್ಕೆ (ECI) ಕರಾರುವಕ್ಕಾದ ಮಾಹಿತಿ...