ಹೊನ್ನಾವರ | ಪರ್ಷಿಯನ್ ಬೋಟ್‌ ಬೆಂಕಿಗಾಹುತಿ: ರೂ. 30 ಲಕ್ಷಕ್ಕೂ ಅಧಿಕ ನಷ್ಟ

Date:

ಹೊನ್ನವಾರ ಸಮೀಪದ ಕಾಸರಕೋಡು ಟೊಂಕ ಮೀನುಗಾರಿಕೆ ಬಂದರಿನಲ್ಲಿ ಲಂಗರು ಹಾಕಿ ನಿಲ್ಲಿಸಿದ್ದ ಪರ್ಷಿಯನ್ ಬೋಟ್‌ ಬೆಂಕಿಗಾಹುತಿಯಾಗಿದೆ. ಆಯುಬ್ ಸಾಬ್ ಅವರಿಗೆ ಸೇರಿದ ಬೋಟ್‌ನಲ್ಲಿ ದುರಸ್ತಿ ಹಾಗೂ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದ ರೂ. 30 ಲಕ್ಷಕ್ಕೂ ಹೆಚ್ಚು ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ.

- Advertisement -

ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬೋಟ್ ಆವರಿಸಿಕೊಂಡು ಉರಿ ಜ್ವಾಲೆಯೊಂದಿಗೆ ದಟ್ಟ ಹೊಗೆ ವ್ಯಾಪಿಸಿದ್ದರಿಂದ ಬಂದರಿನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಮೀನುಗಾರರು ಹಾಗೂ ಸಾರ್ವಜನಿಕರು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಅವರ ಸಮಯೋಚಿತ ಕ್ರಮದಿಂದ ಬೆಂಕಿ ಪಕ್ಕದಲ್ಲಿದ್ದ ಇತರ ಬೋಟ್‌ಗಳಿಗೆ ಹರಡದಂತೆ ತಡೆಯುವಲ್ಲಿ ಯಶಸ್ವಿಯಾದರು.

ಬೆಂಕಿಯ ತೀವ್ರತೆಗೆ ಬೋಟ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅದರಲ್ಲಿದ್ದ ಮೀನುಗಾರಿಕಾ ಬಲೆಗಳು, ಶಕ್ತಿಶಾಲಿ ಇಂಜಿನ್‌ಗಳು ಸೇರಿದಂತೆ ಬಹುತೇಕ ಎಲ್ಲಾ ಉಪಕರಣಗಳು ಭಸ್ಮವಾಗಿವೆ. ಈ ಅಗ್ನಿ ಅವಘಡದಲ್ಲಿ ಸುಮಾರು ₹30 ಲಕ್ಷಕ್ಕೂ ಹೆಚ್ಚು ಮೌಲ್ಯದ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಉಂಟಾಗಲು ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಬೇಕಿದ್ದು, ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...