ಹೆಸ್ಕಾಂ ವತಿಯಿಂದ ವಿವಿಧ ವಿದ್ಯುತ್ ಮಾರ್ಗಗಳಲ್ಲಿ ನಿರ್ವಹಣೆ ಹಾಗೂ ತುರ್ತು ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 18ರಂದು ಕುಮಟಾ, ಗೋಕರ್ಣ ಮತ್ತು ಹೊನ್ನಾವರದ ವಿವಿಧ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಕುಮಟಾದ 110 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿ ಶಕ್ತಿ ಪರಿವರ್ತಕ-2ರ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ 11 ಕೆ.ವಿ. ಕುಮಟಾ ಟೌನ್, ಚಿತ್ರಗಿ, ಧಾರೇಶ್ವರ, ಬಾಡಾ ಮತ್ತು ಮಾಸೂರ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದರೊಂದಿಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಾಗಿ 11 ಕೆ.ವಿ. ವಿದ್ಯುತ್ ಮಾರ್ಗ ಸ್ಥಳಾಂತರಿಸುವ ಕಾರ್ಯ ನಡೆಯಲಿರುವುದರಿಂದ ಕುಮಟಾ ನಗರ ಶಾಖೆಯ ಕುಮಟಾ ಟೌನ್ ಹಾಗೂ ಗ್ರಾಮೀಣ ಶಾಖೆಯ ಧಾರೇಶ್ವರ ಮಾರ್ಗದಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ.
ಅದೇ ರೀತಿ, 33 ಕೆ.ವಿ. ಗೋಕರ್ಣ ವಿದ್ಯುತ್ ಉಪಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಿರುವುದರಿಂದ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಗೋಕರ್ಣ ಶಾಖೆಯ ವ್ಯಾಪ್ತಿಯ ಎಲ್ಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೊನ್ನಾವರ ಉಪವಿಭಾಗದ ಪಟ್ಟಣ ಶಾಖೆಯ ವ್ಯಾಪ್ತಿಯಲ್ಲಿ ಕರ್ಕಿ ಫೀಡರ್‌ನ 11 ಕೆ.ವಿ. ಮಾರ್ಗದ ನಿರ್ವಹಣಾ ಕಾರ್ಯ ನಡೆಯಲಿರುವುದರಿಂದ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಅವಧಿಯಲ್ಲಿ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಹೆಸ್ಕಾಂಗೆ ಸಹಕರಿಸುವಂತೆ ಕುಮಟಾ ಮತ್ತು ಹೊನ್ನಾವರ ಉಪವಿಭಾಗಗಳ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳು ತಿಳಿಸಿದ್ದಾರೆ.



