ಅವ್ಯವಸ್ಥೆಗಳ ಕೂಪವಾದ ಶಿರವಾಡ ತ್ಯಾಜ್ಯ ಘಟಕ; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಉಪಲೋಕಾಯುಕ್ತ

Date:

ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಶಿರವಾಡ ತ್ಯಾಜ್ಯ ವಿಲೇವಾರಿ ಘಟಕಕ್ಕೆ ದಿಢೀರ್‌ ಭೇಟಿ ನೀಡಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ, ಅವ್ಯವಸ್ಥೆಯ ಆಗರವಾಗಿದ್ದ ತ್ಯಾಜ್ಯಘಟಕವನ್ನು ಪರಿಶೀಲಿಸಿದರು. ತ್ಯಾಜ್ಯ ಘಟಕದ ವೈಜ್ಞಾನಿಕ ಪರಿಶೀಲನೆಗೆ ಜಿಲ್ಲಾಧಿಕಾರಿ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಸಮಸ್ಯೆಯ ಗಂಭೀರತೆಯನ್ನು ಮನಗಂಡು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುವುದಾಗಿ ತಿಳಿಸಿದರು.

- Advertisement -

ತ್ಯಾಜ್ಯ ವಿಲೇವಾರಿ ಘಟಕದ ಸುತ್ತಮುತ್ತಲಿನ ಅಸ್ವಚ್ಛತೆ, ಕಸದ ನಿರ್ವಹಣೆಯಲ್ಲಿನ ವಿಳಂಬ ಹಾಗೂ ಮೂಲಸೌಕರ್ಯಗಳ ಕೊರತೆಯನ್ನು ಗಮನಿಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಘಟಕದಲ್ಲಿ ಹಸಿ ಮತ್ತು ಒಣ ಕಸದ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲ. ಸುತ್ತಲಿನ ಚರಂಡಿಗಳ ನಿರ್ವಹಣೆಯೂ ಸರಿಯಾಗಿ ಆಗಿಲ್ಲ ಎಂಬುದು ಪರಿಶೀಲನೆ ವೇಳೆ ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಸುಮಾರು 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಘಟಕದಲ್ಲಿ ಹಳೆಯ ತ್ಯಾಜ್ಯ ದೊಡ್ಡ ಪ್ರಮಾಣದಲ್ಲಿ ಸಂಗ್ರಹವಾಗಿದ್ದರೂ, ಅದರ ವೈಜ್ಞಾನಿಕ ನಿರ್ವಹಣೆಗೆ ಈವರೆಗೆ ಸೂಕ್ತ ಅಧ್ಯಯನ ನಡೆಸದಿರುವುದನ್ನೂ ಅವರು ಪ್ರಶ್ನಿಸಿದರು.

ತ್ಯಾಜ್ಯದಿಂದ ಹೊರಬರುವ ಕಲುಷಿತ ದ್ರವ ಭೂಮಿಗೆ ಸೇರುತ್ತಿರುವುದರಿಂದ ಸುತ್ತಮುತ್ತಲಿನ ಬಾವಿ ಹಾಗೂ ಕುಡಿಯುವ ನೀರಿನ ಮೂಲಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಸೊಳ್ಳೆ ಮತ್ತು ನೊಣಗಳ ಹೆಚ್ಚಳದಿಂದ ಆರೋಗ್ಯ ಸಮಸ್ಯೆ ಉಂಟಾಗುವ ಆತಂಕವೂ ಇದೆ. ಅಲ್ಲದೆ, ಘಟಕದ ಸುತ್ತ ನಾಯಿಗಳ ಹಿಂಡು ಇರುವುದರಿಂದ ಸಾರ್ವಜನಿಕರು ಹಾಗೂ ಮಕ್ಕಳ ಸುರಕ್ಷತೆಯ ಬಗ್ಗೆಯೂ ಉಪಲೋಕಾಯುಕ್ತರು ಗಮನ ಸೆಳೆದರು.

348eaf9d 08b6 4914 b625 294d80518660


ಸಮಿತಿಯಲ್ಲಿ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಲೋಕೋಪಯೋಗಿ ಇಲಾಖೆ, ಪುರಸಭೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವೈದ್ಯಾಧಿಕಾರಿಗಳನ್ನು ಒಳಪಡಿಸಿ ಸಮಗ್ರ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ.

ಸಮಿತಿಯು ಕೈಗೊಂಡ ಕ್ರಮಗಳ ಕುರಿತು ಪ್ರತಿ ತಿಂಗಳು ವರದಿ ಸಲ್ಲಿಸಬೇಕು. ಅಗತ್ಯ ಕಂಡುಬಂದರೆ ಜನವಸತಿ ಪ್ರದೇಶದಿಂದ ದೂರವಿರುವ ಸೂಕ್ತ ಸ್ಥಳಕ್ಕೆ ತ್ಯಾಜ್ಯ ಘಟಕವನ್ನು ಸ್ಥಳಾಂತರಿಸುವ ಸಾಧ್ಯತೆಯನ್ನೂ ಪರಿಶೀಲಿಸಬೇಕು ಎಂದು ಉಪಲೋಕಾಯುಕ್ತರು ನಿರ್ದೇಶನ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ವಿಚಾರಣೆಯಿಲ್ಲದೆ 5 ವರ್ಷಗಳಿಂದ ಜೈಲು: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ಮತ್ತೆ ವಜಾ

2020ರ ದೆಹಲಿ ಗಲಭೆ ವಿಚಾರದಲ್ಲಿ ಜೈಲು ಸೇರಿರುವ ವಿದ್ಯಾರ್ಥಿ ನಾಯಕರಾದ ಉಮರ್...

ಕ್ಯಾಬ್‌ಗಳಲ್ಲಿ ಮಹಿಳಾ ಸುರಕ್ಷತೆ | ಓಲಾ, ಉಬರ್, ರ‍್ಯಾಪಿಡೊಗೆ ದೆಹಲಿ ಹೈಕೋರ್ಟ್ ನೋಟಿಸ್

ಆ್ಯಪ್ ಆಧಾರಿತ ಕ್ಯಾಬ್‌ ಸೇವೆಗಳಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಲು ಸಮಗ್ರ ಕ್ರಮ...