ಶಿರಸಿ | ಬೆಲೆ ಏರಿಕೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Date:

ಹಾಲಿನ ಬೆಲೆ, ಬಸ್ ಪ್ರಯಾಣ ದರ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ, ಬೆಲೆ ನಿಯಂತ್ರಣಕ್ಕೆ ಸರ್ಕಾರಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಶಿರಸಿ-ಸಿದ್ದಾಪುರ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

- Advertisement -

ತಾಲೂಕು ಅಧ್ಯಕ್ಷ ಅಮ್ಜದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಪಕ್ಷದ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ರಿಯಾಜ್ ಶಿರಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಬೆಲೆ ಏರಿಕೆ ನೀತಿಗಳಿಂದ ಜನಸಾಮಾನ್ಯರ ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ರಾಜ್ಯ ಸರ್ಕಾರ ಒಂದು ಕಡೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದರೆ, ಮತ್ತೊಂದೆಡೆ ಹಾಲು, ಮೊಸರು, ಅಕ್ಕಿ, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸುವ ಮೂಲಕ ಜನರ ಮೇಲೆ ಆರ್ಥಿಕ ಹೊರೆ ಹಾಕುತ್ತಿದೆ. ಕೇಂದ್ರ ಸರ್ಕಾರವೂ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಮೆನ್ ಇಂಡಿಯಾ ಮೂವ್‌ಮೆಂಟ್‌ನ ಉತ್ತರ ಕನ್ನಡ ಜಿಲ್ಲಾಧ್ಯಕ್ಷೆ ಹಂಷಾ ಅವರು, ಬೆಲೆ ಏರಿಕೆಯಿಂದ ಸಾಮಾನ್ಯ ಕುಟುಂಬಗಳು ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ವಿವರಿಸಿ, ಸರ್ಕಾರದ ಮುಂದೆ ಪ್ರಮುಖ ಬೇಡಿಕೆಗಳನ್ನು ಮಂಡಿಸಿದರು.

“ಹಾಲಿನ ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು, ಹೆಚ್ಚಿಸಿರುವ ಬಸ್ ಪ್ರಯಾಣ ದರವನ್ನು ಹಿಂದಿನ ದರಕ್ಕೆ ಇಳಿಸಬೇಕು ಹಾಗೂ ದಿನಬಳಕೆಯ ವಸ್ತುಗಳು ಮತ್ತು ದಿನಸಿ ಸಾಮಗ್ರಿಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು. ಕಾಳಸಂತೆ ತಡೆಯಲು ಕಠಿಣ ಕ್ರಮಗಳನ್ನು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಸೀಫ್ ಶೇಕ್, ಜಿಲ್ಲಾ ಸದಸ್ಯ ನಝೀರ್ ಖಾಝಿ, ಶಿರಸಿ ತಾಲೂಕು ಉಪಾಧ್ಯಕ್ಷ ಅಸ್ಲಾಂ ಹೆಗಡೆಕಟ್ಟ ಸೇರಿದಂತೆ ಪಕ್ಷದ ಸದಸ್ಯರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇ.ಡಿ. ‘ಸೂಪರ್ ಕಾಪ್’ ಅಲ್ಲ, ಸ್ವತಂತ್ರವಾಗಿ ತನಿಖೆ ನಡೆಸಲು ಅಧಿಕಾರವಿಲ್ಲ: ಕರ್ನಾಟಕ ಹೈಕೋರ್ಟ್

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯಕ್ಕೆ...

ಶಿವಮೊಗ್ಗ | ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್‌ ಜಿ.ಟಿ ನಿಟ್ಟಾಲಿ ನೇಮಕ

ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಐಎಎಸ್‌...

ಇರಾನ್‌ನ ಪರಮಾಣು ಕಾರ್ಯಕ್ರಮದ ಮಾಹಿತಿ ಕೊಟ್ಟವರಿಗೆ 2 ಕೋಟಿ ಡಾಲರ್ ಬಹುಮಾನ: ಅಮೆರಿಕ ಘೋಷಣೆ

ಇರಾನ್‌ನ ಪರಮಾಣು ಕಾರ್ಯಕ್ರಮದ ಕುರಿತು ಮಹತ್ವದ ಮಾಹಿತಿ ನೀಡುವವರಿಗೆ ಗರಿಷ್ಠ 20...