ಸಾಲದ ಹೊರೆ ತಾಳಲಾರದೆ 20 ದಿನದ ಗಂಡು ಮಗು ಮಾರಾಟ ಮಾಡಿದ ದಂಪತಿ

Date:

Advertisements

ಸಾಲ ತೀರಿಸಲು ತಮ್ಮ 20 ದಿನದ ಗಂಡು ಮಗುವನ್ನು 3 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.

ಹಳೇ ದಾಂಡೇಲಿ ದೇಶಪಾಂಡೆ ನಗರದ ನಿವಾಸಿ ಮಾಹೀನ್ ಜೂನ್ 17 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿನ ತಂದೆ ವಸೀಂ ನಜೀರ್ ತುಂಬಾ ಸಾಲ ಮಾಡಿಕೊಂಡಿದ್ದ ಕಾರಣ ಮಗುವನ್ನು ಮಾರಾಟ ಮಾಡಿದ್ದಾರೆ.

ಜುಲೈ 8ರಂದು ಧಾರವಾಡಕ್ಕೆ ಹೋಗಿ, ಬೆಳಗಾವಿಯ ನೂ‌ರ್ ಅಹಮ್ಮದ್ ಎಂಬಾತನಿಗೆ 3 ಲಕ್ಷ ರೂ.ಗೆ ಮಗುವನ್ನು ಮಾರಾಟ ಮಾಡಿದ್ದರು. ಮಾಹೀನ್ ಮನೆಯಲ್ಲಿ ಮಗು ಕಾಣದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ರೇಷ್ಮಾ ಮಹಾದೇವ ಪಾವಸ್ಥರ ಅವರು ದಾಂಡೇಲಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಅಂಗನವಾಡಿ ಕಾರ್ಯಕರ್ತೆಯ ದೂರಿನ ಹಿನ್ನೆಲೆಯಲ್ಲಿ ಪಿಎಸ್ಐ ಅಮೀನಸಾಬ ಅತ್ತಾರ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ.

Advertisements
ಮಗು ಖರೀದಿದಾರರು
ಮಗು ಖರೀದಿದಾರರು

ಪ್ರಕರಣದಲ್ಲಿ ಮಗು ಖರೀದಿಸಿದ ವ್ಯಕ್ತಿ ಮತ್ತು ಇದಕ್ಕೆ ಸಹಕರಿಸಿದ ಚಾಲಕನನ್ನು ದಾಂಡೇಲಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆದರೆ, ಮಗುವಿನ ಹೆತ್ತವರು ನಾಪತ್ತೆಯಾಗಿದ್ದಾರೆ.

ಮಾರಾಟ ಮಾಡಲಾಗಿದ್ದ ಮಗುವನ್ನು ಶಿರಸಿಯ ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಲಾಗಿದೆ. ಸಮಿತಿಯು ಮಗುವಿನ ಪೋಷಣೆ ಮತ್ತು ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

‘ಭೂಮಿ ಯೋಜನೆ’ ಅರ್ಜಿಗಳ ತ್ವರಿತ ವಿಲೇವಾರಿ; ಹೊನ್ನಾವರ ರಾಜ್ಯಕ್ಕೆ ಪ್ರಥಮ

ಭೂಮಿ ಯೋಜನೆಯಡಿ ಸಾರ್ವಜನಿಕರ ಅರ್ಜಿಗಳ ತ್ವರಿತ ವಿಲೇವಾರಿಯಲ್ಲಿ ಹೊನ್ನಾವರ ತಾಲ್ಲೂಕು ರಾಜ್ಯದಲ್ಲೇ...

ಉತ್ತರ ಕನ್ನಡ | ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ: ಶರಾವತಿ ತಗ್ಗು ಪ್ರದೇಶದ ಜನರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ

ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಲಿಂಗನಮಕ್ಕಿ ಜಲಾಶಯದಿಂದ ಆಗಸ್ಟ್‌ 19ರಂದು...

Download Eedina App Android / iOS

X