ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 14 ಮಂದಿ ನೀರಿನ ಸುಳಿಗೆ ಸಿಲುಕಿದ್ದು, ಈ ಪೈಕಿ ಮೂವರ ಮೃತದೇಗಳು ಪತ್ತೆಯಾಗಿವೆ. ಇನ್ನುಳಿದ 11 ಮಂದಿ ನೀರು ಪಾಲಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಮೂವರ ಮೃತದೇಹಗಳನ್ನು ಭಟ್ಕಳದ ಸರ್ಕಾರಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದುಬಂದಿದ್ದು, ಎಲ್ಲರೂ ಒಂದೇ ಕುಟುಂಬದವರು ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿದ್ದೀರಾ? ಕಲಬುರಗಿ | ನೀಟ್ ಪರೀಕ್ಷೆ ರದ್ದು: ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭಟ್ಕಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಮೀನುಗಾರರ ಸಹಾಯದಿಂದ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಕಪ್ಪೆಚಿಪ್ಪು ತೆಗೆಯಲು ಹೋದ ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದು ಬಂದಿದೆ. ಎಲ್ಲರೂ ಒಂದೇ ಕುಟುಂಬದವರು ಎಂಬ ಮಾಹಿತಿ ಲಭ್ಯವಾಗಿದೆ.




