ಉತ್ತರ ಕನ್ನಡ | ಕಪ್ಪೆಚಿಪ್ಪಿಗಾಗಿ ನದಿಗೆ ತೆರಳಿದ್ದ 8 ಮಂದಿ ಜಲಸಮಾಧಿ

Date:

ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ ಎಂಟು ಮಂದಿ ದುರದೃಷ್ಟವಶಾತ್ ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ತಟ್ಟೆಹಕ್ಕಲು ಬಳಿ ನಡೆದಿದೆ.

- Advertisement -

ಭಟ್ಕಳದ ಶಿರಾಲಿ ಮೂಲದ ಒಂದೇ ಕುಟುಂಬಕ್ಕೆ ಸೇರಿದ ಒಟ್ಟು 14 ಮಂದಿ ಕಪ್ಪೆಚಿಪ್ಪುಗಳನ್ನು ಸಂಗ್ರಹಿಸುವ ಉದ್ದೇಶದಿಂದ ದೋಣಿಯೊಂದರಲ್ಲಿ ನದಿಗೆ ತೆರಳಿದ್ದರು. ಈ ವೇಳೆ ದೋಣಿ ಮಗುಚಿ ಇಡೀ ಕುಟುಂಬವೇ ಅಪಾಯಕ್ಕೆ ಸಿಲುಕಿದ್ದು, ಎಂಟು ಜನರು ನದಿಯ ನೀರಿನ ಸೆಳತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು. ಉಳಿದ ಆರು ಮಂದಿಯನ್ನು ರಕ್ಷಿಸಲಾಗಿದೆ. ಅವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಘಟನೆಯ ಮಾಹಿತಿ ಪಡೆದು ಭಟ್ಕಳ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ನಾಪತ್ತೆಯಾದವರಿಗಾಗಿ ನದಿಯಲ್ಲಿ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ. ದೀರ್ಘಕಾಲ ನಡೆದ ಕಾರ್ಯಾಚರಣೆಯಲ್ಲಿ ಎಂಟೂ ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ದುರಂತ ಘಟನೆಯಿಂದ ಇಡೀ ಗ್ರಾಮದಲ್ಲಿ ಆತಂಕ ಮತ್ತು ಸೂತಕದ ವಾತಾವರಣ ನಿರ್ಮಾಣವಾಗಿದೆ.

ಈ ಲೇಖನ ಓದಿದ್ದೀರಾ?: ಕನ್ನಡಿಗರೇ ಎಚ್ಚರ: ಎಸ್‌ಐಆರ್‌ – ಮತಪಟ್ಟಿ ಪರಿಶೀಲನೆಯಲ್ಲ, ಪೌರತ್ವ ಪರೀಕ್ಷೆ!

ಇನ್ನು, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶಗುಡಿ ಗ್ರಾಮದಲ್ಲಿರುವ ಸಿಲ್ವರ್ ಬಿಲ್ ರೆಸಾರ್ಟ್‌ನಲ್ಲಿ ಮತ್ತೊಂದು ಘೋರ ದುರಂತ ನಡೆದಿದೆ. ರೆಸಾರ್ಟ್ ಆಡಳಿತ ಮಂಡಳಿಯ ಬೇಜವಾಬ್ದಾರಿತನಕ್ಕೆ ಆಂಧ್ರಪ್ರದೇಶದ ವಿಜಯವಾಡ ಮೂಲದ ಮಹೇಶ್ ಎಂಬ ಯುವಕ ಬಲಿಯಾಗಿದ್ದಾನೆ ಎಂದು ವರದಿಯಾಗಿದೆ.

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಮಹೇಶ್, ಕಾಳಿ ನದಿಯಲ್ಲಿ ರಿವರ್ ರ‍್ಯಾಫ್ಟಿಂಗ್ (ಜಲಸಾಹಸ ಕ್ರೀಡೆ) ಮುಗಿಸಿ ಬೋಟ್‌ನಿಂದ ನದಿಯ ನೀರಿಗೆ ಹಾರಿದ್ದಾರೆ. ಈ ವೇಳೆ, ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜಲಸಾಹಸ ಕ್ರೀಡೆಗಳು ನಡೆಯುವ ನದಿಯ ಪಾತ್ರದಲ್ಲೇ ರೆಸಾರ್ಟ್ ಆಡಳಿತ ಮಂಡಳಿಯು ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಅನಧಿಕೃತವಾಗಿ ವಿದ್ಯುತ್ ಪಂಪ್‌ಸೆಟ್ ಅಳವಡಿಸಿ, ನದಿಯೊಳಗೆ ವಿದ್ಯುತ್ ತಂತಿಯನ್ನು ಬಿಟ್ಟಿರುವುದೇ ಈ ದುರಂತಕ್ಕೆ ನೇರ ಕಾರಣ ಎಂದು ಸ್ಥಳೀಯರು ಮತ್ತು ಪ್ರವಾಸಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...