ಉತ್ತರ ಕನ್ನಡ | ಹೆದ್ದಾರಿ 66ರಲ್ಲಿ ಭೂಕುಸಿತದ ಆತಂಕ: ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ

Date:

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಹೆಚ್ಚುತ್ತಿದ್ದಂತೆ ಭೂಕುಸಿತದ ಭೀತಿ ಎದುರಾಗಿದ್ದು, ಕಾರವಾರ ತಾಲೂಕಿನ ಸಂಕ್ರುಬಾಗ್ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿಯುವ ಆತಂಕ ನಿರ್ಮಾಣವಾಗಿದೆ. ಪರಿಸ್ಥಿತಿಗೆ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ.

- Advertisement -

ಜಿಲ್ಲೆಯಲ್ಲಿ ಹೆದ್ದಾರಿ ವಿಸ್ತರಣೆಯ ಹೆಸರಿನಲ್ಲಿ ಬೆಟ್ಟದ ಇಳಿಜಾರನ್ನು ಬಗೆದು ಹಾಕಲಾಗಿದೆ. ಭೂ ವೈಜ್ಞಾನಿಕ ಸಮೀಕ್ಷಾ ತಜ್ಞರು ಕಳೆದ ಮೂರು ವರ್ಷಗಳ ಹಿಂದೆಯೇ ಬೆಟ್ಟ ಕಡಿದು, ಹೆದ್ದಾರಿ ನಿರ್ಮಿಸುವ ಈ ಯೋಜನೆಯಿಂದ ಭೂಕುಸಿತ ಅಪಾಯ ಸಂಭವಿಸುತ್ತದೆ ಎಂಬ ಮುನ್ನೆಚ್ಚರಿಕೆ ನೀಡಿದ್ದರೂ ಜಿಲ್ಲಾಡಳಿತ ಈ ಕುರಿತು ಯಾವುದೇ ಸುರಕ್ಷತಾ ಕ್ರಮವನ್ನು ಅನುಸರಿಸಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಜಿಲ್ಲಾಡಳಿತ ಕಾರವಾರ ತಾಲೂಕಿನ ಸಂಕ್ರುಬಾಗ್ ಘಾಟ್ ವಿಭಾಗದ ಮೂಲಕ ಹೆದ್ದಾರಿಯ ಒಂದು ಕ್ಯಾರೇಜ್‌ವೇಯಲ್ಲಿ ಮಳೆಗಾಲ ಮುಗಿಯುವವರೆಗೆ ಸಂಚಾರ ನಿಷೇಧಿಸಿದೆ. ಮಳೆಗಾಲದ ಆರಂಭದಲ್ಲಿಯೇ ಹೊನ್ನಾವರ ಪಟ್ಟಣದ ರಾಮತೀರ್ಥ ಕ್ರಾಸ್ ಬಳಿ ಕುಸಿತ ಸಂಭವಿಸಿದ್ದು, ಅರ್ಬೈಲ್ ಮತ್ತು ದೇವಿಮನೆ ಘಾಟ್ ವಿಭಾಗಗಳಲ್ಲೂ ಭೂಕುಸಿತದ ಸ್ಥಿತಿ ಬಂದೊದಗಿದೆ.

ಉತ್ತರ ಕನ್ನಡ ಜಿಲ್ಲೆಯ 29% ಗುಡ್ಡಗಾಡು ಪ್ರದೇಶ ಭೂಕುಸಿತಕ್ಕೆ ಗುರಿಯಾಗುವ ಸಾಧ್ಯತೆಯಿದೆ ಎಂದು ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸಂಶೋಧನಾ ವರದಿ ತಿಳಿಸಿದೆ. ಇದರಲ್ಲಿ ಬಹುತೇಕ ಸ್ಥಳಗಳು ರಾಷ್ಟ್ರೀಯ ಹೆದ್ದಾರಿಯಲ್ಲಿವೆ. ಶಿರೂರು ದುರಂತದ ನಂತರ ಜಿಎಸ್‌ಐ ತಜ್ಞರು ಎಂಟು ದುರ್ಬಲ ರಾಷ್ಟ್ರೀಯ ಹೆದ್ದಾರಿ ಪ್ರದೇಶಗಳನ್ನು ಗುರುತಿಸಿದ್ದಾರೆ. ಶಿರೂರು ಹೊರತುಪಡಿಸಿ ಉಳಿದೆಡೆ ಯಾವುದೇ ರಕ್ಷಣಾ ಕ್ರಮಗಳನ್ನು ಜಾರಿಗೆ ತರಲಾಗಿಲ್ಲ ಎಂದು ಸ್ಥಳೀಯರು ಜಿಲ್ಲಾಡಳಿತವನ್ನು ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು...

ಗ್ಯಾನೇಶ್ ಕುಮಾರ್, ಮೋದಿ ಇಬ್ಬರೂ ಮನೆಗೆ ಹೋದ ಬಳಿಕ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಹುದ್ದೆಯಿಂದ ನಿರ್ಗಮಿಸಲಿದ್ದಾರೆ, ಪ್ರಧಾನಿ...