ಉತ್ತರ ಕನ್ನಡ | ಪಿಕ್‌ನಿಕ್‌ ಹೋದ ಒಂದೇ ಕುಟುಂಬದ ಐವರು ನೀರುಪಾಲು

Date:

ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ಐವರು ನೀರುಪಾಲಾದ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಭೈರುಂಬೆ ಸಮೀಪದ ಶಾಲ್ಮಲಾ ನದಿಯ ಭೂತನಗುಂಡಿ ಪ್ರದೇಶದಲ್ಲಿ ಭಾನುವಾರ(ಡಿ.17) ಸಂಜೆ ನಡೆದಿದೆ.

ಶಿರಸಿ ನಗರದ ರಾಮನಬೈಲ್‌ನ ನಿವಾಸಿ ಮುಹಮ್ಮದ್ ಸಲೀಂ (44), ಉಮರ್ ಸಿದ್ದೀಕ್ (14), ನಾಬಿಲ್ (22), ನಾದಿಯಾ ಶೇಖ್ (22) ಹಾಗೂ ಕಸ್ತೂರಬಾ ನಗರದ ಮಿಸಬಾ (21) ಮೃತಪಟ್ಟ ದುರ್ದೈವಿಗಳು ಎಂದು ತಿಳಿದುಬಂದಿದೆ.

ಕುಟುಂಬದ 20 ಮಂದಿ ಸದಸ್ಯರು ಸೇರಿ ಪಿಕ್‌ನಿಕ್‌ಗಾಗಿ ಶಾಲ್ಮಲಾ ನದಿ ಪಾತ್ರದ ಭೂತನಗುಂಡಿ ಎಂಬ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ನಾದಿಯಾ ಶೇಖ್ ಹಾಗೂ ನಾಬಿಲ್ ಎಂಬುವವರು ಆಕಸ್ಮಿಕವಾಗಿ ನೀರಲ್ಲಿ ಬಿದ್ದ ಸಂದರ್ಭದಲ್ಲಿ ಅವರನ್ನು ಉಳಿಸಲು ಸಮೀಪವಿದ್ದ ಸಲೀಂ, ಉಮರ್ ಹಾಗೂ ಮಿಸಬಾ ನೀರಿನ ಗುಂಡಿಗೆ ಧಾವಿಸಿದ್ದರು. ಯಾರಿಗೂ ಈಜು ಬಾರದ ಕಾರಣ ರಕ್ಷಣೆಗೆ ತೆರಳಿದವರೂ ಗುಂಡಿಯ ಆಳಕ್ಕೆ ಹೋಗಿದ್ದಾರೆಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಗದಗ | ಡಿ.28ಕ್ಕೆ ದೇವದಾಸಿ ಮಹಿಳೆಯರ ಬೇಡಿಕೆ ಈಡೇರಿಕೆಗಾಗಿ ‘ಬೆಂಗಳೂರು ಚಲೋ’

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಹಾಗೂ ಪೊಲೀಸರು ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಡಿವೈಎಸ್‌ಪಿ ಗಣೇಶ ಕೆ ಎಲ್, ಸಿಪಿಐ ಪಿ. ಸೀತಾರಾಮ, ಪಿಎಸ್ಐ ಪ್ರತಾಪ, ಅಗ್ನಿ ಶಾಮಕದಳದ ಸಿಬ್ಬಂದಿ, ಗೋಪಾಲ ಗೌಡ ನೇತೃತ್ವದ ಲೈಫ್ ಗಾರ್ಡ್ ತಂಡ, ಸ್ಥಳೀಯ ಈಜುಗಾರರು ಆಗಮಿಸಿದ್ದು, ಕಾಣೆಯಾದವರ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ 15 ಬ್ಯಾಂಕ್‌ಗಳಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಮಾಡಿದ ದಂಪತಿ

ನಕಲಿ ದಾಖಲೆ ಸೃಷ್ಟಿ ಮಾಡಿ ದಂಪತಿಯೊಬ್ಬರು ರಾಷ್ಟ್ರೀಕೃತ ಬ್ಯಾಂಕ್‌ಗಳು, ಪ್ರಾದೇಶಿಕ ಸಹಕಾರಿ...

ವಿಜಯಪುರ | 29ರಂದು ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಜಾಗೃತಿ ಸಭೆ

ವಿಜಯಪುರ ಜಿಲ್ಲೆಯ ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಫೆಬ್ರವರಿ 29ರಂದು ಜಾಗೃತಿ...

ಬಾಗಲಕೋಟೆ | ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ...

ಕುಡಿಯುವ ನೀರು ಕೊಡದೆ ಯಾವ ಬ್ರ್ಯಾಂಡ್ ಬೆಂಗಳೂರು ಮಾಡ್ತೀರಾ; ಮೋಹನ್ ದಾಸರಿ ಪ್ರಶ್ನೆ

ಟ್ಯಾಂಕರ್ ಮಾಫಿಯಾದಲ್ಲಿ ಕಾರ್ಪೊರೇಟರ್‌ಗಳು, ಮಾಜಿ ಕಾರ್ಪೊರೇಟರ್‌ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ...