ಉತ್ತರ ಕನ್ನಡ | ನಾಳೆ ಕೆಪಿಎಸ್‌ಸಿ ಪರೀಕ್ಷೆ; 4 ಕೇಂದ್ರಗಳಲ್ಲಿ 1,970 ಅಭ್ಯರ್ಥಿಗಳು ಭಾಗಿ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 15ರಂದು ನಡೆಯಲಿರುವ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪರೀಕ್ಷೆಯನ್ನು ಯಾವುದೇ ಅವ್ಯವಹಾರಗಳಿಗೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಬೊಯರ್ ತಿಳಿಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಸಿದ್ಧತೆಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1,970 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಜಾಮರ್ ಹಾಗೂ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳು ಕಂಡುಬರದಂತೆ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅವರಿಗೆ ಎರಡು ಹಂತಗಳಲ್ಲಿ ತರಬೇತಿ ನೀಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

“ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸಾರಿಗೆ ಸಮಸ್ಯೆಯಾಗದಂತೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡುವಂತೆ ಸಾರಿಗೆ ನಿಗಮದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪರೀಕ್ಷಾ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಹೆಸ್ಕಾಂ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಅಭ್ಯರ್ಥಿಗಳ ಆರೋಗ್ಯದಲ್ಲಿ ಏರುಪೇರಾದರೆ ತಕ್ಷಣ ಚಿಕಿತ್ಸೆ ನೀಡಲು ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ” ಎಂದು ತಿಳಿಸಿದರು.

ಪ್ರತಿ ಪರೀಕ್ಷಾ ಕೊಠಡಿಗೆ ಇಬ್ಬರು ಸಂವೀಕ್ಷಕರನ್ನು ಮತ್ತು ಪ್ರತಿ ಕೇಂದ್ರಕ್ಕೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷೆಯ ಸಂದರ್ಭದಲ್ಲಿ ಕೆಪಿಎಸ್‌ಸಿ ನಿಗದಿಪಡಿಸಿರುವ ಎಸ್‌ಒಪಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಅಭ್ಯರ್ಥಿಗಳು ಮತ್ತು ಪೋಷಕರು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆ ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇರಿಸಲಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, “ಪರೀಕ್ಷಾ ಕೇಂದ್ರಗಳಿಗೆ ಇನ್ಸ್‌ಪೆಕ್ಟರ್ ದರ್ಜೆಯ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಭ್ಯರ್ಥಿಗಳ ವಸ್ತ್ರಸಂಹಿತೆಯನ್ನು ಪರಿಶೀಲಿಸಲಾಗುವುದು. ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೊಠಡಿಗೆ ಕೊಂಡೊಯ್ಯಲು ಅವಕಾಶವಿರುವುದಿಲ್ಲ. ಕೇಂದ್ರಗಳ ಪ್ರವೇಶ ದ್ವಾರದಲ್ಲಿಯೇ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುವುದು” ಎಂದರು.

ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವುದರ ಜೊತೆಗೆ ಪ್ರಶ್ನೆಪತ್ರಿಕೆ ಮತ್ತು ಉತ್ತರಪತ್ರಿಕೆಗಳ ಸಾಗಾಟದ ಸಂದರ್ಭದಲ್ಲಿಯೂ ವಾಹನಗಳಿಗೆ ಪೊಲೀಸ್ ರಕ್ಷಣೆ ನೀಡಲಾಗುವುದು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೇಂದ್ರಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನೆಂದು ನಂಬಿಸಿ 70 ಬಾಲಕಿಯರಿಗೆ ವಂಚನೆ: ಭಾರತೀಯ ಮೂಲದ ಬ್ರಿಟನ್ ಯುವಕನಿಗೆ 30 ವರ್ಷ ಜೈಲು

ಬ್ರಿಟನ್‌ನಲ್ಲಿ ಕನಿಷ್ಠ 70 ಅಪ್ರಾಪ್ತ ಬಾಲಕಿಯರನ್ನು ಆನ್‌ಲೈನ್ ಮೂಲಕ ವಂಚಿಸಿ, ಲೈಂಗಿಕ...

ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆಗೆ ಹೊಸ ನಿಯಮ: 50,000 ಜನರಿಗೆ ಮಾತ್ರ ಅವಕಾಶ

ದೆಹಲಿ ಪೊಲೀಸರು ರಾಷ್ಟ್ರರಾಜಧಾನಿಯ ಪ್ರಸಿದ್ಧ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆಗಳು ಮತ್ತು...

ಯಲ್ಲಾಪುರ | ಪುರೋಹಿತರ ಮನೆಗೆ ಕನ್ನ; ₹83,500 ಮೌಲ್ಯದ ತಾಮ್ರ, ಹಿತ್ತಾಳೆ ಪಾತ್ರೆಗಳು ಕಳವು

ಯಲ್ಲಾಪುರ: ಮನೆಯ ಹಿಂದಿನ ಬಾಗಿಲಿನ ಚಿಲಕದ ಹುಕ್ಕನ್ನು ಮುರಿದು ಒಳನುಗ್ಗಿದ ಕಳ್ಳರು...

36 ಗಂಟೆಗಳ ಸ್ಥಗಿತದ ಬಳಿಕ ಯಥಾಸ್ಥಿತಿಗೆ ಮರಳಿದ ಮೈಕ್ರೋಸಾಫ್ಟ್: ಔಟ್‌ಲುಕ್, ಟೀಮ್ಸ್ ಸೇವೆಗಳ ಯಶಸ್ವಿ ಮರುಸ್ಥಾಪನೆ

ಜಗತ್ತಿನಾದ್ಯಂತ ಲಕ್ಷಾಂತರ ಗ್ರಾಹಕರು, ವಾಣಿಜ್ಯ ಸಂಸ್ಥೆಗಳು ಹಾಗೂ ಸರ್ಕಾರಿ ಇಲಾಖೆಗಳನ್ನು ತೀವ್ರವಾಗಿ...