ಉತ್ತರ ಕನ್ನಡ | 11 ಕಿ.ಮೀಗೂ ಹೆಚ್ಚು ಕರಾವಳಿ ತೀರ ಕಡಲೊಡಲಿಗೆ

Date:

ಕರಾವಳಿ ಜಿಲ್ಲೆಗಳಲ್ಲಿ ನೈರುತ್ಯ ಮಾನ್ಸೂನ್ ಮುಂಗಾರಿನ ಅಬ್ಬರ ಜೋರಾಗಿದ್ದು, ಉತ್ತರ ಕನ್ನಡದ ಸಮುದ್ರ ತೀರದ ಜನರ ಬದುಕು ಕಡಲ ಕೊರೆತಕ್ಕೆ ಸಿಲುಕಿ ತತ್ತರಿಸಿದೆ. ಸಮುದ್ರ ತಟದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನರು ಮನೆ ತೊರೆದಿದ್ದು, ಸುಮಾರು 15 ಹಳ್ಳಿಗಳು ಕಡಲಾವೃತವಾಗಿವೆ.

- Advertisement -

ಅಂಕೋಲಾ ತಾಲೂಕಿನ ಹರವಾಡ ಗ್ರಾಮದಲ್ಲಿ 2.2 ಕಿ.ಮೀ ವಸತಿ ಪ್ರದೇಶವನ್ನು ಸಮುದ್ರದ ಅಲೆಗಳು ಆಪೋಷಿಸಿವೆ. ಅಧಿಕೃತ ದತ್ತಾಂಶದ ಪ್ರಕಾರ 11.3 ಕಿ.ಮೀ ಕರಾವಳಿ ತೀರ ಪ್ರದೇಶ ಕಡಲ ಕೊರೆತಕ್ಕೆ ಒಳಗಾಗಿದೆ. ಹಲವು ಮನೆಗಳು ಪೂರ್ತಿಯಾಗಿ ಹಾನಿಗೊಳಗಾದರೆ, ಕೆಲವು ಭಾಗಶಃ ಕುಸಿದು ಬಿದ್ದಿವೆ. ಅಂಕೋಲದ ಬೆಳಂಬಾರ ಗ್ರಾಮದಲ್ಲಿ 60ಕ್ಕೂ ಹೆಚ್ಚು ಮನೆಗಳು ಕುಸಿಯುವ ಸ್ಥಿತಿಯಲ್ಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಿಲ್ಲಾಡಳಿತವು ರಾಜ್ಯ ಕಂದಾಯ ಇಲಾಖೆಗೆ ಸಲ್ಲಿಸಿದ 2025ರ ವರದಿಯ ಪ್ರಕಾರ, ಮಾಜಾಳಿ ಮತ್ತು ದೇವಬಾಗ್ (ಕಾರವಾರ ತಾಲೂಕು) ಸೇರಿವೆ; ಹರವಾಡ, ಬೆಳಂಬಾರ ಮತ್ತು ಗೋಕರ್ಣದ ಭಾಗಗಳು (ಅಂಕೋಲಾ ತಾಲೂಕು); ಬೇಲಿಕಾನ, ಅಳ್ವೆಕೋಡಿ, ದಾರೇಶ್ವರ, ರಾಮನಗಿಂಡಿ ಮತ್ತು ಕಡ್ಲೆ (ಕುಮಟಾ ತಾಲೂಕು); ತೊಪ್ಪಲಕೇರಿ (ಹೊನ್ನಾವರ ತಾಲೂಕು) ಮತ್ತು ಮುರುಡೇಶ್ವರ, ಬೆಳಕೆ, ಶಾಂಬವಿ, ಮಾವಳ್ಳಿ, ತೂದಳ್ಳಿ ಮತ್ತು ಬೆದ್ರಕೇರಿ (ಭಟ್ಕಳ ತಾಲೂಕು) ಗ್ರಾಮಗಳು ತೀವ್ರ ಹಾನಿಗೆ ಒಳಗಾಗಿವೆ.

ಜಿಲ್ಲಾಡಳಿತ ಕ್ರಿಯಾ ಯೋಜನೆ ಸಿದ್ಧಪಡಿಸಿ ಜಾರಿಗೆ ತರದೆ ಸುಮ್ಮನಾಗಿದ್ದು, ಜಿಲ್ಲಾಡಳಿತದ ತಡೆಗೋಡೆ ನಿರ್ಮಾಣದ ಭರವಸೆ, ಭರವಸೆಯಾಗಿಯೇ ಉಳಿದಿದೆ.

ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಮಾಧ್ಯಮದವರೊಂದಿಗೆ ಮಾತನಾಡಿ, “ಪ್ರಸ್ತಾವಿತ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ 70 ಕೋಟಿ ರೂ.ಗಳನ್ನು ನೀಡುವುದಾಗಿ ಭರವಸೆ ನೀಡಿದೆ. ಹಣ ಬಿಡುಗಡೆ ಮಾಡುವವರೆಗೆ ಸವೆತವನ್ನು ತಡೆಯಲು ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಬಂದರು ಇಲಾಖೆಗೆ ನಿರ್ದೇಶನ ನೀಡಿದ್ದೇವೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...