ಉತ್ತರ ಕನ್ನಡ | ಪೌರ ಕಾರ್ಮಿಕರ ಸೇವೆಯನ್ನೂ ಗೌರವಿಸಿ: ಚಂದ್ರಕಲಾ

Date:

ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ನ್ಯಾಯಯುತವಾಗಿ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರ ಸೇವೆಗೆ ಗೌರವ ನೀಡುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ ತಿಳಿಸಿದರು.

- Advertisement -

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರ ಕುಂದುಕೊರತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಕಾರ್ಮಿಕ ಇಲಾಖೆಯಿಂದ ನಿಗಧಿಪಡಿಸಿರುವ ವೇತನವನ್ನು ನೀಡಬೇಕು. ಗುತ್ತಿಗೆದಾರರು ಇ.ಎಸ್.ಐ ಹಾಗೂ ಪಿ.ಎಫ್. ಕಡಿತ ಮಾಡುತ್ತಿರುವುದನ್ನು ಅಧಿಕಾರಿಗಳು ಪರಿಶೀಲಿಸಬೇಕು. ಕೆಲಸದ ಅವಧಿಯಲ್ಲಿ ಸೂಕ್ತ ಸುರಕ್ಷತಾ ಉಪಕರಣಗಳನ್ನು ಒದಗಿಸಬೇಕು. ಉತ್ತಮ ಗುಣಮಟ್ಟದ ಬೆಳಗಿನ ಉಪಹಾರ ನೀಡಬೇಕು. ಕೆಲಸದ ನಂತರ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಸೌಲಭ್ಯ ಕಲ್ಪಿಸಬೇಕು. ನಿಯಮಿತ ಆರೋಗ್ಯ ತಪಾಸಣೆ ಹಾಗೂ ಮಾಸ್ಟರ್ ಹೆಲ್ತ್ ಚೆಕ್‌ಅಪ್‌ಗಳನ್ನು ನಡೆಸಬೇಕು ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜಿಲ್ಲೆಯ ಸಫಾಯಿ ಕರ್ಮಚಾರಿಗಳಿಗೆ ಗೃಹಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಿಸುವ ಕೆಲಸವನ್ನು ಆದ್ಯತೆಯಲ್ಲಿ ಕೈಗೊಳ್ಳಬೇಕು. ಈಗಾಗಲೇ ನಿರ್ಮಾಣ ಪೂರ್ಣಗೊಂಡ ಮನೆಗಳನ್ನು ತಕ್ಷಣ ಹಸ್ತಾಂತರಿಸಬೇಕು. ಜಿಲ್ಲೆಯ ಯಾವ ಭಾಗದಲ್ಲೂ ಮ್ಯಾನ್ಯುಯಲ್ ಸ್ಕಾವೆಂಜಿಂಗ್ ಪದ್ಧತಿ ನಡೆಯದಂತೆ ಎಚ್ಚರವಹಿಸಬೇಕು. ಈ ಅನಿಷ್ಠ ಪದ್ಧತಿ ಕುರಿತು ಹೆಚ್ಚು ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಡ್ಡಾಯವಾಗಿ ಸಕ್ಕಿಂಗ್ ಯಂತ್ರಗಳ ಮೂಲಕವೇ ಶೌಚಗುಂಡಿಗಳ ಸ್ವಚ್ಛತೆ ಮಾಡಿಸಬೇಕು ಎಂದು ಸೂಚಿಸಿದರು.

ಸಫಾಯಿ ಕರ್ಮಚಾರಿಗಳ ಮೇಲೆ ಗುತ್ತಿಗೆದಾರರಿಂದ ಯಾವುದೇ ರೀತಿಯ ಶೋಷಣೆ ನಡೆಯದಂತೆ ಅಧಿಕಾರಿಗಳು ನಿಗಾವಹಿಸಬೇಕು. ವಾರದ ರಜೆ ಸೇರಿದಂತೆ ಅಗತ್ಯ ರಜೆಯನ್ನು ಅವರಿಗೆ ನೀಡಬೇಕು ಹಾಗೂ ರಜಾ ಅವಧಿಯಲ್ಲಿ ವೇತನವನ್ನು ಕಡಿತಗೊಳಿಸಬಾರದು. ಪ್ರತೀ ತಿಂಗಳು ಅವರಿಗೆ ವೇತನ ಚೀಟಿಯನ್ನು ವಿತರಿಸಬೇಕು ಎಂದು ಅವರು ಹೇಳಿದರು.ಇದೇ ಸಂದರ್ಭದಲ್ಲಿ, ಮೋರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಸಫಾಯಿ ಕರ್ಮಚಾರಿಗಳ ಮಕ್ಕಳ ದಾಖಲಾತಿಗೆ ವಿಶೇಷ ಮೀಸಲಾತಿ ಸೌಲಭ್ಯವಿದ್ದು, ಮಕ್ಕಳನ್ನು ಇಂತಹ ಶಾಲೆಗಳಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಅಧಿಕಾರಿಗಳು ಪೋಷಕರಿಗೆ ಮಾಹಿತಿ ನೀಡಬೇಕು. ಇದರಿಂದ ಮಕ್ಕಳಿಗೆ ಅತ್ಯುತ್ತಮ ಶೈಕ್ಷಣಿಕ ಸೌಲಭ್ಯ ದೊರಕುತ್ತದೆ ಎಂದು ಆಯೋಗದ ಸಂಶೋಧನಾ ಅಧಿಕಾರಿ ಮಹಾದೇವ ಸ್ವಾಮಿ ಹೇಳಿದರು.

ಈ‌ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅಕ್ರಮ ಬಡ್ಡಿ ದಂಧೆ ನಿಯಂತ್ರಣ, ಬ್ಯಾಂಕ್‌ಗಳಲ್ಲಿ ಭದ್ರತೆ ಹೆಚ್ಚಿಸಲು ಎಸ್‌ಪಿ ಸೂಚನೆ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ನಗರಸಭೆ ಪೌರಾಯುಕ್ತ ಜಗದೀಶ್ ಹುಲಿಗೆಜ್ಜಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಮೇಶ್ ಸೇರಿದಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ...

ಕಾರವಾರ | ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲು ಉಪಲೋಕಾಯುಕ್ತರ ಸೂಚನೆ

ಕಾರವಾರ: ನಗರಸಭಾ ವ್ಯಾಪ್ತಿಯಲ್ಲಿದ್ದರೂ ಅಗತ್ಯ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಗುಡ್ಡಳ್ಳಿ ಗ್ರಾಮದ...

ಶಿರಸಿ | ನಾಳೆ ‘ಮನಸಿರಿ’ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ

ಶಿರಸಿ: ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಹಾಗೂ ಈ ಬಗ್ಗೆ...

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ ಮೆರಗು

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ...