ಉತ್ತರ ಕನ್ನಡ | ಭಾರತ-ಪಾಕ್‌ ಪಂದ್ಯದ ವೇಳೆ ‘ಶರಾವತಿ ಉಳಿಸಿ’ ಪೋಸ್ಟರ್: ಹೋರಾಟಕ್ಕೆ ಮತ್ತಷ್ಟು ಬಲ

Date:

ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸಿ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೂವರು ಯುವಕರು ‘ಶರಾವತಿ ಉಳಿಸಿ’ ಎಂಬ ಪೋಸ್ಟರ್ ಪ್ರದರ್ಶಿಸಿದ್ದಾರೆ. ಇದು ಯೋಜನಾ ವಿರೋಧಿ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ.

- Advertisement -

ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಏಷ್ಯಾ ಕಪ್ ಸೂಪರ್ 4 ವಿಭಾಗದ ಪಂದ್ಯದ ವೇಳೆ, ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಈ ಯುವಕರು ‘ಶರಾವತಿ ಉಳಿಸಿ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡ’ ಎಂಬ ಬರಹವಿರುವ ಫಲಕವನ್ನು ಪ್ರದರ್ಶಿಸಿದ್ದಾರೆ. ಈ ದೃಶ್ಯವು ನೇರಪ್ರಸಾರದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋಗಳು ವೈರಲ್ ಆಗಿವೆ. ಯುವಕರ ಗುರುತು ಇನ್ನೂ ತಿಳಿದುಬಂದಿಲ್ಲ.ಈ ಪೋಸ್ಟರ್ ಪ್ರದರ್ಶನವು ಹೋರಾಟಗಾರರಲ್ಲಿ ಹೊಸ ಭರವಸೆ ಮೂಡಿಸಿದ್ದು, ‘ಶರಾವತಿ ಉಳಿಸಿ ಹೋರಾಟ ಸಮಿತಿ’ಯ ಪ್ರಮುಖರು ಇದನ್ನು ಸ್ವಾಗತಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಯುವಜನರು ಜಾಗೃತರಾಗುತ್ತಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಯೋಜನೆಯ ವಿರುದ್ಧ ಧ್ವನಿ ಎತ್ತುತ್ತಿರುವುದು ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ” ಎಂದು ಹೋರಾಟ ಸಮಿತಿಯ ಮುಖಂಡರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ ತಾಲೂಕಿನಲ್ಲಿ ಮತ್ತೆ ಅಕ್ರಮ ಬಡ್ಡಿದಂಧೆ: ಸಂತ್ರಸ್ತನ ದೂರಿನ ಅನ್ವಯ ಪ್ರಕರಣ ದಾಖಲು https://eedina.com/karnataka/uttara-kannada-decades-of-struggle-for-land-forest-dwellers-await-a-roof/2025-09-12/

ಶೀಘ್ರದಲ್ಲೇ ‘ಎಕ್ಸ್‌’ ಅಭಿಯಾನಕ್ಕೆ ಸಿದ್ಧತೆ

ಶರವಾತಿ ಪಂಪ್ಡ್ ಸ್ಟೋರೇಜ್ ಯೋಜನೆಯ ವಿರುದ್ಧ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯಲು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಭಾಗದ ಯುವಕರು ಟ್ವಿಟರ್ (ಈಗ ಎಕ್ಸ್) ಅಭಿಯಾನ ಪ್ರಾರಂಭಿಸಲು ಮುಂದಾಗಿದ್ದಾರೆ. ‘ಸ್ಟಾಪ್ ಶರಾವತಿ ಪಂಪ್ಡ್ ಸ್ಟೋರೇಜ್’ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಈ ಅಭಿಯಾನ ನಡೆಸುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಕರೆ ನೀಡಲಾಗಿದ್ದು, ಇದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕಾರವಾರ | ₹26 ಲಕ್ಷ ಪಾವತಿಸಿದರೂ ಬಡ್ಡಿ ಕಿರುಕುಳ: ಗುಂಡಿಕ್ಕುವುದಾಗಿ ಬೆದರಿಕೆ, ಮೂವರ ವಿರುದ್ಧ FIR

ಕಾರವಾರ: ಪಡೆದ ಸಾಲಕ್ಕಿಂತ ದುಪ್ಪಟ್ಟು ಹಣವನ್ನು ಮರುಪಾವತಿಸಿದರೂ ಇನ್ನೂ ಬಡ್ಡಿ ಹಣ...

ಗಣಪತಿ ವಿಸರ್ಜನೆಗೆ ಮೀಸಲಿಟ್ಟ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ: ಬೇರೆ ಕೆರೆ ಗುರುತಿಗೆ ಸ್ಥಳೀಯರ ಆಗ್ರಹ

ಉತ್ತರ ಕನ್ನಡ ಜಿಲ್ಲಾಡಳಿತದಿಂದ ಗಣಪತಿ ವಿಸರ್ಜನೆಗೆ ಮೀಸಲಿಟ್ಟ ಕೆರೆಯಲ್ಲಿ ಬೃಹತ್ ಮೊಸಳೆ...

ಕುಮಟಾ | ನಕಲಿ ಫೋನ್‌ಪೇ ಪಾವತಿ ಸಂದೇಶ ತೋರಿಸಿ ₹16,700 ಮೌಲ್ಯದ ಮೊಬೈಲ್ ವಂಚನೆ

ಕುಮಟಾದಲ್ಲಿ ಪೋನ್ ಪೇ ಮೂಲಕ ಆನ್‌ಲೈನ್‌ ಮಾಡಿದಂತೆ ನಕಲಿ ಮೆಸೇಜ್ ಹಾಗೂ...