ಉತ್ತರ ಕನ್ನಡ | ಕರಾವಳಿ ಭದ್ರತೆಗೆ ‘ಸೀ ವಿಜಿಲ್-2026’ ಸಮರಾಭ್ಯಾಸ

Date:

ಕರಾವಳಿ ಪ್ರದೇಶದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತೀಯ ನೌಕಾಪಡೆಯು ‘ಸೀ ವಿಜಿಲ್-2026’ ರಾಷ್ಟ್ರೀಯ ಕರಾವಳಿ ರಕ್ಷಣಾ ಸಮರಾಭ್ಯಾಸದಲ್ಲಿ ಪಾಲ್ಗೊಂಡಿತು.

- Advertisement -

ಭಾರತೀಯ ನೌಕಾಪಡೆ, ಭಾರತೀಯ ಕರಾವಳಿ ಕಾವಲು ಪಡೆ, ಕಸ್ಟಮ್ಸ್ ಇಲಾಖೆ, ಕರಾವಳಿ ಪೊಲೀಸ್, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ಬಂದರು ಪ್ರಾಧಿಕಾರಗಳು ಹಾಗೂ ಇತರ ಸಮುದ್ರ ಭದ್ರತಾ ಸಂಸ್ಥೆಗಳ ಸಹಯೋಗದಲ್ಲಿ ಈ ಕವಾಯತು ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ವಿವಿಧ ಭದ್ರತಾ ಸಂಸ್ಥೆಗಳ ನಡುವೆ ಉತ್ತಮ ಸಮನ್ವಯ, ಪರಸ್ಪರ ತಿಳುವಳಿಕೆ ಮತ್ತು ಸಹಕಾರ ಬೆಳೆಸುವುದು ಈ ಕವಾಯತಿನ ಪ್ರಮುಖ ಉದ್ದೇಶವಾಗಿದೆ. ಕಡಲ ವಲಯದ ಭದ್ರತೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸುವುದರ ಜತೆಗೆ, ತುರ್ತು ಸಂದರ್ಭಗಳಲ್ಲಿ ಎಲ್ಲ ಸಂಸ್ಥೆಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಹೆಚ್ಚಿಸಲು ಈ ಅಭ್ಯಾಸ ಸಹಕಾರಿಯಾಗಿದೆ.

2018ರಲ್ಲಿ ಆರಂಭವಾದ ‘ಸೀ ವಿಜಿಲ್’ ಕವಾಯತು ಎರಡು ವರ್ಷಕ್ಕೊಮ್ಮೆ ನಡೆಯುವ ರಾಷ್ಟ್ರೀಯ ಮಟ್ಟದ ಪ್ರಮುಖ ಕರಾವಳಿ ಭದ್ರತಾ ಕಾರ್ಯಕ್ರಮವಾಗಿದೆ. 2026ರ ಆವೃತ್ತಿಯು ಈ ಕವಾಯತಿನ ಐದನೇ ಆವೃತ್ತಿಯಾಗಿದೆ.

ಈ ಕವಾಯತಿನ ವೇಳೆ ಈಗಾಗಲೇ ಜಾರಿಯಲ್ಲಿರುವ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು ಪರಿಶೀಲಿಸುವುದು, ಭದ್ರತಾ ಸಿದ್ಧತೆಯನ್ನು ಮೌಲ್ಯಮಾಪನ ಮಾಡುವುದು, ಸಂವಹನ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಕಡಲ ಭದ್ರತೆಗೆ ಎದುರಾಗುವ ಸವಾಲುಗಳನ್ನು ಎದುರಿಸಲು ವಿವಿಧ ಇಲಾಖೆಗಳ ಸಾಮೂಹಿಕ ಪ್ರತಿಕ್ರಿಯಾ ಸಾಮರ್ಥ್ಯವನ್ನು ಪರೀಕ್ಷಿಸುವ ಕಾರ್ಯವೂ ಇದರ ಭಾಗವಾಗಿತ್ತು.

ಸ್ಥಳೀಯ ಮೀನುಗಾರ ಸಮುದಾಯದೊಂದಿಗೆ ಸಂವಾದ ನಡೆಸುವುದಕ್ಕೂ ಕವಾಯತಿನಲ್ಲಿ ಆದ್ಯತೆ ನೀಡಲಾಗಿದೆ. ಕರಾವಳಿ ಭದ್ರತೆಯಲ್ಲಿ ಮೀನುಗಾರರು ಪ್ರಮುಖ ಪಾಲುದಾರರಾಗಿರುವುದರಿಂದ, ಅವರಲ್ಲಿ ಭದ್ರತೆಯ ಕುರಿತು ಅರಿವು ಮೂಡಿಸುವುದು ಹಾಗೂ ಕರಾವಳಿ ಪ್ರದೇಶದ ಸುರಕ್ಷತೆಯಲ್ಲಿ ಅವರ ಸಹಭಾಗಿತ್ವವನ್ನು ಹೆಚ್ಚಿಸುವುದು ಇದರ ಉದ್ದೇಶವಾಗಿದೆ.

ಕರ್ನಾಟಕ ನೌಕಾ ವಲಯವು ಸುಭದ್ರ ಮತ್ತು ಸಮಗ್ರ ಕರಾವಳಿ ಭದ್ರತಾ ವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಎಲ್ಲಾ ಕರಾವಳಿ ಭದ್ರತಾ ಸಂಸ್ಥೆಗಳೊಂದಿಗೆ ನಿಕಟ ಸಮನ್ವಯದಿಂದ ಕಾರ್ಯನಿರ್ವಹಿಸಲು ಬದ್ಧವಾಗಿದೆ ಎಂದು ನೌಕಾಪಡೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ 94 ಕೋಟಿ ರೂ. ಅನುದಾನ

ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್...

ಶ್ರೀಕೃಷ್ಣನಿಗೆ ಅವಮಾನ: ಬಾಬಾ ಬಾಗೇಶ್ವರ ವಿರುದ್ಧ ತೀವ್ರಗೊಂಡ ಯಾದವರ ಪ್ರತಿಭಟನೆ!

ಶ್ರೀರಾಮ ಮತ್ತು ಶ್ರೀಕೃಷ್ಣನ ನಡುವೆ ತುಲನೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ...

ಈ ದಿನ ಸಂಪಾದಕೀಯ | ಪ್ರಶ್ನೆ ಕೇಳುವ ಪತ್ರಕರ್ತರಿಗೆ ವೀಸಾ ರದ್ದು; ಮೋದಿ ಸರ್ಕಾರಕ್ಕೆ ಇಷ್ಟೊಂದು ಭಯವೇಕೆ?

ಪ್ರಜಾಪ್ರಭುತ್ವದ ಹಿರಿಮೆ ಕೇವಲ ಭಾಷಣಗಳಲ್ಲಿಲ್ಲ. ವಿಮರ್ಶೆ ಮತ್ತು ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡುವುದರಲ್ಲಿದೆ....

ಪಿಂಚಣಿ ಸರ್ಕಾರದ ಕೃಪೆಯಲ್ಲ, ನಿವೃತ್ತ ನೌಕರರ ಕಾನೂನುಬದ್ಧ ಹಕ್ಕು: ಕರ್ನಾಟಕ ಹೈಕೋರ್ಟ್

ಪಿಂಚಣಿ ಎನ್ನುವುದು ಸರ್ಕಾರ ಅಥವಾ ಆಡಳಿತ ಮಂಡಳಿಗಳು ನೌಕರರಿಗೆ ನೀಡುವ ಯಾವುದೇ...