ಮುಂಡಗೋಡ | ಮನೆಯಲ್ಲಿ ಕಾಡು ಹಂದಿ ಮಾಂಸ ಪತ್ತೆ: ಓರ್ವ ಅರೆಸ್ಟ್, ಮತ್ತೊಬ್ಬ ಪರಾರಿ!

Date:

ಬಾಡಿಗೆ ಮನೆಯಲ್ಲಿ ಅಕ್ರಮವಾಗಿ ಕಾಡು ಹಂದಿ ಮಾಂಸವನ್ನು ಪಾಲು ಮಾಡಿ ಅಡುಗೆ ತಯಾರಿಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ 35 ಕೆ.ಜಿ ಕಾಡು ಹಂದಿ ಮಾಂಸವನ್ನು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ಶನಿವಾರ ನಡೆದಿದೆ.

- Advertisement -

ಬಂಧಿತನನ್ನು ಬೆಂಗಳೂರಿನ ಮೂಲದ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪರಾರಿಯಾದ ಮತ್ತೊಬ್ಬ ಆರೋಪಿಯನ್ನು ಮುಂಡಗೋಡ ಪಟ್ಟಣದ ಗಾಂಧಿನಗರ ನಿವಾಸಿ ಸುರೇಶ ಕೊರವರ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌...

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಮನೆಯ ಪ್ರಮುಖ ಪದಾರ್ಥವಾದ ಸಾಂಬಾರ್ ಈರುಳ್ಳಿ (ಸಣ್ಣ ಈರುಳ್ಳಿ) ಬೆಲೆ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಚಿಲ್ಲರೆ...

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಗಾಂಧಿನಗರದ ಸುರೇಶ ಕೊರವರ ಅವರ ಬಾಡಿಗೆ ಮನೆಯಲ್ಲಿ ಇಬ್ಬರೂ ಸೇರಿಕೊಂಡು ಕಾಡು ಹಂದಿ ಮಾಂಸವನ್ನು ಪಾಲು ಮಾಡಿ ಅಡುಗೆ ತಯಾರಿಸುತ್ತಿದ್ದರು ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದಾಗ ಓರ್ವ ಆರೋಪಿ ಪರಾರಿಯಾಗಿದ್ದು, ಮತ್ತೋರ್ವನನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿದ್ದ 35 ಕೆ.ಜಿ ಕಾಡು ಹಂದಿ ಮಾಂಸವನ್ನೂ ಜಪ್ತಿ ಮಾಡಲಾಗಿದೆ.

ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಅರಣ್ಯ ಮೊಕದ್ದಮೆ ದಾಖಲಿಸಿ ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪರಾರಿಯಾದ ಆರೋಪಿಯ ಪತ್ತೆಗಾಗಿ ಅರಣ್ಯ ಇಲಾಖೆ ಶೋಧ ಕಾರ್ಯ ಮುಂದುವರಿಸಿದೆ.

ಕಾರ್ಯಾಚರಣೆಯಲ್ಲಿ ಮುಂಡಗೋಡ ಆರ್‌ಎಫ್‌ಒ ಅಪ್ಪಾರಾವ್ ಕಲಶೆಟ್ಟಿ, ಉಪ ವಲಯ ಅರಣ್ಯಾಧಿಕಾರಿಗಳಾದ ಅರ್ಜುನ ಮೊರಬ, ಸುನಿತಾ ಬಿ.ಎಂ., ಗಸ್ತು ಅರಣ್ಯ ಪಾಲಕರಾದ ಮುಸ್ತಾಕ್ ಅಲಿ ಒಂಟಿ, ಮುತ್ತುರಾಜ ಹಳ್ಳಿ, ಸಂತೋಷ ಜಲ್ಲೇರ, ರಾಘವೇಂದ್ರ ಅಮ್ಮಿನಬಾವಿ ಸೇರಿದಂತೆ ಅರಣ್ಯ ಸಿಬ್ಬಂದಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ ನ್ಯಾಯಾಲಯಗಳಲ್ಲಿ 1,712 ಬಾಲ್ಯವಿವಾಹ ಪ್ರಕರಣಗಳು ಬಾಕಿ; ನ್ಯಾಯಮೂರ್ತಿ‌ ಕಳವಳ

ಬಾಲ್ಯವಿವಾಹ ತಡೆಗೆ ರಾಜ್ಯ ಸರ್ಕಾರ ಮತ್ತು ವಿವಿಧ ಇಲಾಖೆಗಳು ಹಲವು ಕ್ರಮಗಳನ್ನು...

ರಾಯಚೂರು | ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರುದ್ರಪ್ಪ ಅಂಗಡಿ ನೇಮಕ

ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ರುದ್ರಪ್ಪ ಅಂಗಡಿ ಅವರನ್ನು ನೇಮಕ...

ಟೀಮ್ ಇಂಡಿಯಾದ ಲೆಗ್-ಸ್ಪಿನ್ನರ್ ಯುಜುವೇಂದ್ರ ಚಾಹಲ್ BJPಗೆ ಸೇರ್ಪಡೆ!

ಭಾರತೀಯ ಕ್ರಿಕೆಟ್ ತಂಡದ ಖ್ಯಾತ ಲೆಗ್-ಸ್ಪಿನ್ನರ್ ಯುಜುವೇಂದ್ರ ಚಾಹಲ್ ಅವರು ರಾಜಕೀಯಕ್ಕೆ...

ಜನರ ಬಳಿಗೆ ಸರ್ಕಾರ: ಪ್ರಜಾಸೇವಾ ಅಭಿಯಾನದಲ್ಲಿ ಅಹವಾಲು ಸ್ವೀಕಾರ

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ...