ಯಲ್ಲಾಪುರ | ಪ್ರಜಾಸೇವಾ ಆಂದೋಲನಕ್ಕೆ ಜನರಿಂದ ಉತ್ತಮ ಸ್ಪಂದನೆ: ಲಕ್ಷ್ಮಣ ಸವದಿ

Date:

ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯುತ್ತಿದ್ದು, ಜನರಲ್ಲಿ ಕಾರ್ಯಕ್ರಮದ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿದೆ. ಜನರ ಬಳಿಗೆ ಆಡಳಿತವನ್ನು ಕೊಂಡೊಯ್ಯುವ ಉದ್ದೇಶದಿಂದ ಆರಂಭಿಸಿರುವ ಈ ಆಂದೋಲನ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

- Advertisement -

ಪಟ್ಟಣದ ಕಾರ್ಮಿಕ ಭವನದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌...

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಮನೆಯ ಪ್ರಮುಖ ಪದಾರ್ಥವಾದ ಸಾಂಬಾರ್ ಈರುಳ್ಳಿ (ಸಣ್ಣ ಈರುಳ್ಳಿ) ಬೆಲೆ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಚಿಲ್ಲರೆ...

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

“ಪ್ರಜಾಸೇವಾ ಸಭೆಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ. ಅವುಗಳಿಗೆ ಸಮರ್ಪಕ ಪರಿಹಾರ ದೊರೆಯುತ್ತಿರುವುದರಿಂದ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬಗ್ಗೆ ಜನರಲ್ಲಿ ಗೌರವ ಹೆಚ್ಚಾಗಿದೆ. ಈ ಕಾರ್ಯಕ್ರಮ ಕೇವಲ ಕಾಟಾಚಾರಕ್ಕೆ ನಡೆಯಬಾರದು. ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ಕನಿಷ್ಠ 15 ದಿನಗಳೊಳಗೆ ವಿಲೇವಾರಿ ಮಾಡಬೇಕು. ನಿಗದಿತ ಅವಧಿಯಲ್ಲಿ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಳಂಬಕ್ಕೆ ಸೂಕ್ತ ಕಾರಣ ತಿಳಿಸಬೇಕು. ಅನಗತ್ಯ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಜಿಲ್ಲೆಯಲ್ಲಿ ಈವರೆಗೆ ನಡೆದ ಪ್ರಜಾಸೇವಾ ಸಭೆಗಳಲ್ಲಿ ಒಟ್ಟು 6,014 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 5,421 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಯಲ್ಲಾಪುರ ತಾಲೂಕಿನಲ್ಲಿ ನಡೆದ ಆರು ಸಭೆಗಳಲ್ಲಿ 1,418 ಅರ್ಜಿಗಳು ಸಲ್ಲಿಕೆಯಾಗಿದ್ದು, 993 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ಮುಂದೆಯೂ ಇದೇ ಬದ್ಧತೆಯಿಂದ ಕೆಲಸ ಮಾಡಬೇಕು” ಎಂದು ಸೂಚಿಸಿದರು.

ಸಭೆಯಲ್ಲಿ 100ಕ್ಕೂ ಅಧಿಕ ಅಹವಾಲುಗಳು ಸಲ್ಲಿಕೆಯಾದವು. ಪಟ್ಟಣದಲ್ಲಿ ಫುಟ್‌ಪಾತ್ ಒತ್ತುವರಿ, ಸಾರ್ವಜನಿಕ ರಸ್ತೆಗಳ ಅತಿಕ್ರಮಣ, ಜೆಜೆಎಂ ಕಾಮಗಾರಿಗಳ ಅಸಮರ್ಪಕ ನಿರ್ವಹಣೆ, ಕೆರೆ ಒತ್ತುವರಿ, ಆನೆಗಳಿಂದ ರೈತರ ಬೆಳೆಗಳಿಗೆ ಆಗುತ್ತಿರುವ ಹಾನಿ, ವಸತಿ ಸೌಲಭ್ಯ ಹಾಗೂ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಸಾರ್ವಜನಿಕರು ಸಚಿವರ ಗಮನಕ್ಕೆ ತಂದರು. ಮೀನುಗಾರಿಕೆ ವೃತ್ತಿಯ ಮೊಗೇರ ಸಮುದಾಯದವರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಯಿತು.

ಶಾಸಕ ಶಿವರಾಮ ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಯಲ್ಲಾಪುರ ತಾಲೂಕಿನಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳಿಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಲಾಗುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.

ಜಿಲ್ಲಾಧಿಕಾರಿ ಹರ್ಷಲ್ ಬೊಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀಜ್, ಉಪವಿಭಾಗಾಧಿಕಾರಿ ಚಂದ್ರಶೇಖರ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎನ್.ಕೆ. ಭಟ್, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ಹಾಗೂ ತಾಲೂಕು ಅಧ್ಯಕ್ಷ ಉಲ್ಲಾಸ್ ಶಾನಭಾಗ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರ ಬಳಿಗೆ ಸರ್ಕಾರ: ಪ್ರಜಾಸೇವಾ ಅಭಿಯಾನದಲ್ಲಿ ಅಹವಾಲು ಸ್ವೀಕಾರ

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ...

ಬಸವಕಲ್ಯಾಣ | ಡಿಸೆಂಬರ್ 13ರಿಂದ ಮೂರು ಕುರ್‌ಆನ್ ಪ್ರವಚನ

ಬಸವಕಲ್ಯಾಣ ನಗರದಲ್ಲಿ ಡಿಸೆಂಬರ್ 13, 14 ಮತ್ತು 15ರಂದು ನಡೆಯಲಿರುವ 11ನೇ...

ಸಹಕಾರಿ ಸಂಘಗಳು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು: ಎಚ್.ಡಿ.ಕುಮಾರಸ್ವಾಮಿ

ಸಹಕಾರಿ ಸಂಘಗಳು ರೈತರ ಆರ್ಥಿಕ ಭದ್ರತೆ ಹಾಗೂ ಗ್ರಾಮೀಣ ಅಭಿವೃದ್ಧಿಯ ಪ್ರಮುಖ...

ಹವಾಮಾನ ವರದಿ: 11 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸದ್ಯ ಚಳಿ ಮತ್ತು ಒಣಹವೆ ಮುಂದುವರಿದಿದೆ. ಆದಾಗ್ಯೂ,...