ಅಂಕೋಲಾ ದುರಂತ | ಕಾರ್ಯಾಚರಣೆಗಾಗಿ ಶಿರೂರು ತಲುಪಿದ ಬೂಮ್ ಪೊಕ್ಲೇನ್ ಯಂತ್ರ

Date:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕ ಅರ್ಜುನ ಸೇರಿದಂತೆ ಇತರರಿಗಾಗಿ ಶೋಧ ಕಾರ್ಯಾಚರಣೆಯನ್ನು 9ನೇ ದಿನವೂ ಮುಂದುವರಿಸಲಾಗಿದೆ.

- Advertisement -

ಶಿರೂರು ಭೂಕುಸಿತದಲ್ಲಿ ಸಿಲುಕಿರುವವರ ಹುಡುಕಾಟಕ್ಕೆ ಬೂಮ್ ಎಕ್ಸ್‌ಕಾವೇಟರ್ ಅಥವಾ ಬೂಮ್ ಪೊಕ್ಲೇನ್ ಯಂತ್ರವನ್ನು ಬೆಳಗಾವಿಯಿಂದ ತರಿಸಲಾಗಿದ್ದು, ಜುಲೈ 24ರ ಮಧ್ಯಾಹ್ನ 12ರ ಹೊತ್ತಿಗೆ ಶಿರೂರಿಗೆ ತಲುಪಿದೆ. ಇದಕ್ಕೂ ಮೊದಲು ಬೂಮ್ ಅಗೆಯುವ ಯಂತ್ರವನ್ನು ಸಾಗಿಸುತ್ತಿದ್ದ ವಾಹನವು ಯಾಂತ್ರಿಕ ದೋಷದಿಂದ ಅಂಕೋಲಾದಲ್ಲಿ ಸ್ಥಗಿತಗೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈಗ ಶಿರೂರಿಗೆ ತಲುಪಿರುವ ಈ ಬೂಮ್ ಪೊಕ್ಲೇನ್ ಯಂತ್ರವು, ಸುಮಾರು 60 ಅಡಿ ಆಳದವರೆಗಿನ ಮಣ್ಣು ಎತ್ತಲು ನೆರವಾಗಲಿದೆ. ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರ ನೆರವಿನಿಂದ ಈ ಯಂತ್ರವನ್ನು ಶಿರೂರಿಗೆ ತರಲಾಗಿದೆ.

mla sathish sail

ಈ ಬಗ್ಗೆ ಘಟನಾ ಸ್ಥಳದಲ್ಲಿ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಶಾಸಕ ಸತೀಶ್ ಸೈಲ್, “ಈ ಯಂತ್ರವು ಸುಮಾರು 60 ಅಡಿ ಆಳದವರೆಗೆ ಕಾರ್ಯಾಚರಣೆ ನಡೆಸುವ ಸಾಮರ್ಥ್ಯ ಹೊಂದಿದೆ. ನಿರಂತರ ಮಳೆ ಹಾಗೂ ಹವಾಮಾನ ವೈಪರೀತ್ಯದ ಪರಿಣಾಮ ಡ್ರಿಜ್ಜಿಂಗ್ ಯಂತ್ರವನ್ನು ತರಿಸಲಾಗುತ್ತಿಲ್ಲ. ಆದ್ದರಿಂದ ಈ ಯಂತ್ರವನ್ನು ತರಿಸಿದ್ದೇವೆ. ನೆಲದ ಮೇಲೆ ಇಟ್ಟುಕೊಂಡು ಇದು ಕಾರ್ಯಾಚರಿಸಲಿದೆ” ಎಂದು ತಿಳಿಸಿದರು.

“ಇದು 60 ಅಡಿ ಆಳದವರೆಗೆ ಕೆಲಸ ಮಾಡುವುದರಿಂದ ಮೃತದೇಹ ಸಿಕ್ಕರೂ ಸಿಗಬಹುದು. ಒಂದು ವೇಳೆ ಸಿಕ್ಕರೆ ನಮ್ಮ ಕಾರ್ಯಾಚರಣೆ ಇಂದಿಗೆ ಮುಗಿಯಲಿದೆ. ನನ್ನ ಪ್ರಕಾರ ಪೂರ್ವ ಈಶಾನ್ಯ ಹಾಗೂ ಪೂರ್ವ ಆಗ್ನೇಯದಲ್ಲಿ ಸಿಗುವ ವಿಶ್ವಾಸ ಇದೆ. ಆಗುತ್ತದೆಂಬ ನಿರೀಕ್ಷೆ. ಈ ಕಾರ್ಯಾಚರಣೆ ಆದಷ್ಟು ಶೀಘ್ರವಾಗಿ ಮುಗಿಯಬೇಕೆಂಬುದು ನಮ್ಮ ಬಯಕೆ. ಎಲ್ಲರ ಪ್ರಾರ್ಥನೆ ಇರಲಿ” ಎಂದು ಶಾಸಕ ಸತೀಶ್ ಸೈಲ್ ತಿಳಿಸಿದರು.

ವರದಿ: ಜಿ ಎಂ ಪವಿತ್ರಾ, ಮುಸ್ತಫಾ ಕೊಪ್ಪಳ

ಶಿರೂರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...