ಉತ್ತರ ಕನ್ನಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ 2026-27ನೇ ಸಾಲಿಗೆ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಕ್ಕಾಗಿ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
ಪ್ರವರ್ಗ-1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ರೂ.2.50 ಲಕ್ಷದೊಳಗೆ ಇರಬೇಕು. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರ ವರ್ಗಗಳ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ರೂ.1 ಲಕ್ಷದೊಳಗೆ ಇರಬೇಕು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | 65,330 ಮತದಾರರಿಗೆ ನೋಟಿಸ್ ಜಾರಿ ಪ್ರಕ್ರಿಯೆ ಆರಂಭ
ಅರ್ಹ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್ಸೈಟ್ ಮೂಲಕ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ, ವಿದ್ಯಾರ್ಥಿನಿಲಯ ಪ್ರವೇಶದ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಇಲಾಖೆ ತಿಳಿಸಿದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ಪ್ರವೇಶಕ್ಕೆ ಅಗತ್ಯವಿರುವ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಸರ್ಕಾರದ ಆದೇಶದ ವಿವರಗಳಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ www.bcwd.karnataka.gov.in ವೆಬ್ಸೈಟ್ ವೀಕ್ಷಿಸಬಹುದಾಗಿದೆ.
ಆನ್ಲೈನ್ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಎದುರಾದಲ್ಲಿ [email protected] ಇ-ಮೇಲ್ ಮೂಲಕ ಅಥವಾ ಸಂಬಂಧಪಟ್ಟ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ 08382-226588, 08382-226589 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




