ಉತ್ತರ ಕನ್ನಡ | 65,330 ಮತದಾರರಿಗೆ ನೋಟಿಸ್ ಜಾರಿ ಪ್ರಕ್ರಿಯೆ ಆರಂಭ

Date:

ಉತ್ತರ ಕನ್ನಡ: ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನೋ ಮ್ಯಾಪಿಂಗ್ ಆಗಿರುವ ಹಾಗೂ ತಾರ್ಕಿಕ ವ್ಯತ್ಯಾಸ ಕಂಡುಬಂದಿರುವ 65,330 ಮತದಾರರಿಗೆ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ತಿಳಿಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯ ಮೊದಲ ಹಂತದ ಪ್ರಕ್ರಿಯೆಯಲ್ಲಿ ಒಟ್ಟು 12,30,037 ಮತದಾರರ ಪೈಕಿ ಶೇ.91.3ರಷ್ಟು ಎನ್ಯೂಮರೇಷನ್ ಫಾರ್ಮ್‌ಗಳನ್ನು ಸಂಗ್ರಹಿಸಿ ಡಿಜಿಟಲೀಕರಣಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗೈರುಹಾಜರಿ, ಸ್ಥಳಾಂತರ ಹಾಗೂ ಮರಣ ಹೊಂದಿರುವ 1,07,015 ಮತದಾರರನ್ನು ಹೊರತುಪಡಿಸಿ, ಉಳಿದ ಮತದಾರರ ಹೆಸರುಗಳನ್ನು ಒಳಗೊಂಡ ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಇದೀಗ ನೋ ಮ್ಯಾಪಿಂಗ್ ಹಾಗೂ ತಾರ್ಕಿಕ ವ್ಯತ್ಯಾಸ ಕಂಡುಬಂದಿರುವ 65,330 ಮತದಾರರಿಗೆ ನೋಟಿಸ್ ಸೃಜಿಸುವ ಕಾರ್ಯ ಆರಂಭಗೊಂಡಿದ್ದು, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮತದಾರರ ಮನೆ ಬಾಗಿಲಿಗೆ ತೆರಳಿ ನೋಟಿಸ್ ವಿತರಿಸಲಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹೊನ್ನಾವರ | ₹1.31 ಕೋಟಿ ವೆಚ್ಚದ 8 ರಸ್ತೆ ಕಾಮಗಾರಿಗಳಿಗೆ ಶಾಸಕ ದಿನಕರ ಶೆಟ್ಟಿ ಚಾಲನೆ

ನೋಟಿಸ್ ಪಡೆದ ಮತದಾರರು ಸೂಚಿಸಿರುವ ದಿನಾಂಕ, ಸಮಯ ಮತ್ತು ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗುವುದು ಕಡ್ಡಾಯವಾಗಿದೆ. ಮೊದಲ ನೋಟಿಸ್‌ನಲ್ಲಿ ಸೂಚಿಸಿರುವ ದಿನಾಂಕದಂದು ಹಾಜರಾಗಲು ಸಾಧ್ಯವಾಗದವರಿಗೆ ಮತ್ತೊಂದು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಅಲ್ಲದೆ, ಹೊಸ ಮತದಾರರ ನೋಂದಣಿ ಹಾಗೂ ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಅಥವಾ ಸ್ಥಳಾಂತರಕ್ಕೆ ಅವಕಾಶವಿದ್ದು, ಈ ಸಂಬಂಧ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 23ರವರೆಗೆ ಕಾಲಾವಕಾಶ ನೀಡಲಾಗಿದೆ. ನೋ ಮ್ಯಾಪಿಂಗ್ ಹಾಗೂ ತಾರ್ಕಿಕ ವ್ಯತ್ಯಾಸ ಕಂಡುಬಂದಿರುವ ಮತದಾರರು ನೋಟಿಸ್ ವಿಚಾರಣೆ ಸಂದರ್ಭದಲ್ಲಿ ಸಲ್ಲಿಸುವ ದಾಖಲೆಗಳನ್ನು ಪರಿಶೀಲಿಸುವ ಕಾರ್ಯಕ್ಕಾಗಿ 145 ಹೆಚ್ಚುವರಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಸಂಪೂರ್ಣ ಪ್ರಕ್ರಿಯೆಯನ್ನು ಅತ್ಯಂತ ಎಚ್ಚರಿಕೆಯಿಂದ ನಡೆಸಲಾಗುತ್ತಿದ್ದು, ಜಿಲ್ಲೆಯ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಮತದಾರರ ಪಟ್ಟಿಯ ಅಂತಿಮ ಪರಿಷ್ಕೃತ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಹಾಗೂ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...