ವಿ.ಬಿ.ಜಿ ರಾಮ್​ ಜಿ ಯೋಜನೆ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರ ಪಾಲಿಗೆ ಮರಣ ಶಾಸನ : ಡಾ.ಅನಿಲ್ ಕುಮಾರ್

Date:

ಬಾಗೇಪಲ್ಲಿ: ನೂತನವಾಗಿ ಜಾರಿಗೆ ತಂದಿರುವ ವಿ.ಬಿ ಜಿ ರಾಮ್​ ಜಿ ಕಾಯ್ದೆಯನ್ನು ಹಿಂಪಡೆದು ಹಿಂದಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಹಾಗೂ ಸಿಪಿಐಎಂ ಪಕ್ಷದ ನೇತೃತ್ವದಲ್ಲಿ ಕಾರ್ಮಿಕರು ಶುಕ್ರವಾರ ಪಟ್ಟಣದ ಡಾ.ಅಂಬೇಡ್ಕರ್ ಪುಥಳಿ ಮುಂದೆ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಉಪವಾಸ ಸತ್ಯಾಗ್ರಹ ನಡೆಸಿದರು.

- Advertisement -

ಕೇಂದ್ರ ಸರ್ಕಾರಿ ಜಾರಿಗೆ ತಂದಿರುವ ವಿ.ವಿ ಜಿ ರಾಮ್​ ಜಿ ಯೋಜನೆ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರ ಪಾಲಿಗೆ ಮರಣ ಶಾಸನವಾಗಿದೆ. ಇದು ವಲಸೆಯನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಸಿಪಿಐಎಂ ರಾಜ್ಯ ಸಮಿತಿ ಸದಸ್ಯ ಹಾಗೂ ಪ್ರಜಾ ವೈದ್ಯಾ ಡಾ.ಅನಿಲ್ ಕುಮಾರ್ ಅವುಲಪ್ಪ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಹಿಂದೆ 2025ರಲ್ಲಿ ಕೃಷಿ ಕೂಲಿಕಾರರಿಗೆ ಉದ್ಯೋಗ ಹಕ್ಕಿಗಾಗಿ ಕಾಯ್ದೆಯನ್ನು ಅನುಷ್ಠಾನ ಮಾಡಲಾಗಿತ್ತು. ಗ್ರಾಮೀಣ ಪ್ರದೇಶದಿಂದ ನಗರದತ್ತ ಕೃಷಿ ಕೂಲಿ ಕಾರ್ಮಿಕರ ವಲಸೆ ತಡೆಯುವುದು ಸಮಾನ ಕೂಲಿ ಆರ್ಥಿಕ ಚೈತನ್ಯದಿಂದ ಗ್ರಾಮ ಸ್ವರಾಜ್ಯವನ್ನು ಕಾಣಲು ಸಾಧ್ಯವಾಗುತ್ತಿತ್ತು ಸಾವಿರಾರು ಕೆರೆ ಕಟ್ಟೆಗಳು ಕಾಲುವೆಗಳು ಅಭಿವೃದ್ಧಿಯಾಗಿದ್ದವು, ಕೃಷಿ ಚಟುವಟಿಕೆಗಳಿಗೂ ಕಾಯ್ದೆ ಅನುಕೂಲವಾಗಿತ್ತು. ಒಟ್ಟಾರೆ ಗ್ರಾಮೀಣಾಭಿವೃದ್ಧಿಯಲ್ಲಿ ನರೇಗಾ ಪ್ರಮುಖ ಪಾತ್ರ ವಹಿಸಿತ್ತು.
ಆದರೆ ಇದೀಗ ಜಾರಿಯಾಗುತ್ತಿರುವ ವಿ.ಬಿ. ಜಿ ರಾಮ್​ ಜಿ ಯೋಜನೆ ಎಂ.ಜಿ.ಎನ್​.ಆರ್​.ಇ.ಜಿ.ಎ ಆಶಯಗಳಿಗೆ ತದ್ವಿರುದ್ಧವಾಗಿದೆ. ಗುರ್ತಿಸಿದ ಪ್ರದೇಶಗಳಿಗಷ್ಟೇ ಅನುದಾನ ಮತ್ತು ಕೆಲಸ ದೊರೆಯುತ್ತಿದೆ ಇದರಿಂದ ಕೆಲಸ ಕೇಳುವ ಹಕ್ಕು ಮತ್ತು ಬೇಡಿಕೆ ಸಂಪೂರ್ಣ ನಾಶವಾಗಲಿದೆ.

ಶೇ.60:40 ಅನುಪಾತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುದಾನ ನೀಡಬೇಕು ಎಂಬ ನಿಯಮವನ್ನು ಸೇರಿಸಲಾಗಿದೆ ಆರ್ಥಿಕ ಹಿನ್ನಡೆಯಲ್ಲಿರುವ ರಾಜ್ಯಗಳ ಬಳಿ ಶೇ.40 ರಷ್ಟು ಅನುದಾನವಿಲ್ಲದೆ ಕೂಲಿ ಕಾರ್ಮಿಕರಿಗೆ ಕೆಲಸವೇ ಇಲ್ಲದಂತಾಗುತ್ತದೆ ಗ್ರಾಮೀಣಾಭಿವೃದ್ಧಿಯೂ ಕುಂಠಿತವಾಗಲಿದೆ ಲಿಂಗ ಸಮಾನತೆ ಮತ್ತು ಸಮಾನ ಕೂಲಿಗೆ ದೊಡ್ಡ ಪೆಟ್ಟು ಬೀಳಲಿದೆ ಗುತ್ತಿಗೆದಾರರಿಗೆ ನರೇಗಾ ಯೋಜನೆಯಲ್ಲಿ ನಿಷೇಧಿಸಲಾಗಿತ್ತು. ಆದರೆ ಈಗ ಗುತ್ತಿಗೆದಾರರಿಗೆ ಅವಕಾಶ ಮಾಡಿಕೊಡಲಾಗಿದ್ದು ಉಳ್ಳವರಿಗೆ ಅನುಕೂಲ ಮಾಡುವ ಯೋಜನೆ ಇದಾಗಿದೆ ಎಂದರು.

ಜಿ ರಾಮ್​ ಜಿ ಮತ್ತೊಂದು ದುರ್ಬಳಕೆಯ ಯೋಜನೆಯಾಗಿದೆ ಸ್ವರಾಜ್ಯದ ಕಸನನ್ನು ಕಂಡ ಮಹಾತ್ಮ ಗಾಂಧಿಯನ್ನು ಮರೆ ಮಾಚಲಾಗಿದೆ. ಈ ಹಿನ್ನೆಲೆಯಲ್ಲಿ ನೂತನ ಯೋಜನೆಯನ್ನು ಹಿಂಪಡೆಯಬೇಕು ಹಿಂದಿನ ನರೇಗಾ ಯೋಜನೆಯನ್ನು ಉಳಿಸಬೇಕು ಎಂದು ಹೇಳಿದರು.

ಸಿಪಿಐಎಂ ಪಕ್ಷದ ತಾಲ್ಲೂಕು ಕಾರ್ಯದರ್ಶಿ ಎಂ.ಎನ್.ರಘುರಾಮ ರೆಡ್ಡಿ ಮಾತನಾಡಿ ದೇಶದ ಲಕ್ಷಾಂತರ ಬಡ ಕುಟುಂಬಗಳಿಗೆ ವರ್ಷವಿಡೀ ಉದ್ಯೋಗ ಒದಗಿಸುತ್ತಾ, ಅವರ ಜೀವನ ನಿರ್ವಹಣೆಗೆ ಆಧಾರವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರದ್ದು ಮಾಡಿ, ಕೇಂದ್ರ ಸರ್ಕಾರ ಬಯಸಿದಾಗಷ್ಟೇ ಉದ್ಯೋಗ ನೀಡುವ ‘ವಿಬಿ ಗ್ರಾಮ್ ಜಿ’ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ. ಇದು ಮಹಾತ್ಮ ಗಾಂಧಿಯವರ ಚಿಂತನೆ ಮತ್ತು ಅವರ ಗ್ರಾಮ ಸ್ವರಾಜ್ಯದ ಆಶಯದ ಮೇಲಿನ ಗದಾಪ್ರಹಾರ. ಕೇಂದ್ರ ಸರ್ಕಾರವು ಈ ಜನವಿರೋಧಿ ಕಾಯ್ದೆಯನ್ನು ಹಿಂಪಡೆದು, ಮನರೇಗಾ ಮರು ಜಾರಿ ಮಾಡುವ ವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.

ಸಿಪಿಐಎಂ ಪಕ್ಷದ ಮುಖಂಡ ಚನ್ನರಾಯಪ್ಪ ಮಾತನಾಡಿ ಮನರೇಗಾ ಪುನರ್ಸ್ಥಾಪನೆಯಾಗುವವರೆಗೂ ಹೋರಾಟ
ಇಂತಹ ಜನವಿರೋಧಿ ಕಾಯ್ದೆ ತರಲು ಕೇಂದ್ರಕ್ಕೆ ಆರ್ ಎಸ್ ಎಸ್ ಪ್ರೇರಣೆ ನೀಡಿದ್ದು ಬಡಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗಬಾರದು ಎಂಬುದು ಬಿಜೆಪಿ ಆರ್ ಎಸ್ ಎಸ್ ನ ದುರುದ್ದೇಶ. ಆದ್ದರಿಂದ ಕೇಂದ್ರದ ಈ ಕಾಯ್ದೆಯನ್ನು ರದ್ದುಗೊಳಿಸಿ ಮನರೇಗಾ ಹೋರಾಟವನ್ನುಪುನರ್ಸ್ಥಾಪಿಸಬೇಕೆಂದು ಹೋರಾಟ ನಡೆಸಲಾಗುತ್ತಿದೆ ಈ ಸಂಬಂಧ ಗ್ರಾಮ ತಾಲ್ಲುಕು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಫೆಬ್ರವರಿ 12 ಎಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಇದನ್ನು ಓದಿದ್ದೀರಾ..? ಕೋಲಾರ | ತಂಗಿಯನ್ನು ನಿಂದಿಸಿದ್ದಕ್ಕೆ 5 ಬಾರಿ ದೂರು ಕೊಟ್ಟರೂ ಪೊಲೀಸರು ಕ್ಯಾರೇ ಅನ್ನಲಿಲ್ಲ, ಅದಕ್ಕೆ ನಾನೇ ಕೊಂದೆ!

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ನಾಗರಾಜ್ ಮಸಣ ಕಾರ್ಮಿಕ ಸಂಘಟನೆಯ ಜಿಲ್ಲಾ ಸಂಚಾಲಕ ಮುನಿಯಪ್ಪ ಕೆ ದಲಿತ ಹಕ್ಕುಗಳ ಸಮಿತಿ ರಾಜ್ಯ ಕಾರ್ಯದರ್ಶಿ ಜಿ ಕೃಷ್ಣಪ್ಪ ಸಿಐಟಿಯು ಮುಖಂಡ ಮುಸ್ತಾಫ,ತಾಲ್ಲೂಕು ಸಮಿತಿ ಸದಸ್ಯರು. ರಫಿಕ್,ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಕಾರ್ಯದರ್ಶಿ ಡಿ.ಟಿ ಮುನಿಸ್ವಾಮಿ ,ಅಶ್ವತ್ಥಪ್ಪಕೃಷ್ಣಪ್ಪ, ರಾಮಾಂಜಿ ಹಾಗೂ ಕಾರ್ಮಿಕರು ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...