ಶಿಡ್ಲಘಟ್ಟ | ಮಾಜಿ ಸಚಿವ ವಿ.ಮುನಿಯಪ್ಪ ಹುಟ್ಟುಹಬ್ಬ ಆಚರಣೆ

Date:

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕಾಂಗ್ರೆಸ್ ಪಕ್ಷದಲ್ಲಿ ಸಂಘಟನಾ ಚತುರ ಎಂದು ಖ್ಯಾತಿ ಹೊಂದಿರುವ ಮಾಜಿ ಸಚಿವ ಹಾಗೂ ಮಾಜಿ ಶಾಸಕ ವಿ.ಮುನಿಯಪ್ಪ ಅವರಿಗೆ 78ರ ಹುಟ್ಟು ಹಬ್ಬದ ಸಂಭ್ರಮದ ಹಿನ್ನೆಲೆ ಬೆಳಗ್ಗೆಯಿಂದಲೇ ಅವರ ನಿವಾಸ ಸ್ಥಳ ಹಂಡಿಗ್ನಾಳ ಗ್ರಾಮಕ್ಕೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಮತ್ತು ಅಭಿಮಾನಿಗಳು ಮೈಸೂರು ಪೇಟ ತೊಡಿಸಿ ಹೂಮಾಲೆ ಹಾಕಿ, ಕೇಕ್‌ ಕತ್ತರಿಸುವ ಮೂಲಕ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

- Advertisement -

ಕರ್ನಾಟಕ ರಾಜ್ಯದ ರೇಷ್ಮೆ, ಇಂಧನ ಮತ್ತು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವರಾಗಿ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿದ ಮಾಜಿ ಸಚಿವ ವಿ ಮುನಿಯಪ್ಪ ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಈಗಲೂ ಶಾಶ್ವತವಾಗಿ ನಿಂತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತ ಕೇಂದ್ರ ತಾಲೂಕ ಕಚೇರಿ, ಸಾಮರ್ಥ್ಯ ಸೌಧ, ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜೋಡಿ ರಸ್ತೆ, ಪ್ರವಾಸಿ ಮಂದಿರ ನವೀಕರಣ, ಶಿಡ್ಲಘಟ್ಟ ನಗರ ಸಭೆಗೆ ಆದಾಯವನ್ನು ಹೆಚ್ಚಿಸಲು ವಾಣಿಜ್ಯ ಮಳಿಗೆಗಳ ನಿರ್ಮಾಣ ಮತ್ತು ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ನೆಹರು ಕ್ರೀಡಾಂಗಣವನ್ನು ನಿರ್ಮಿಸಿ, ಸರ್ಕಾರಿ ಶಾಲೆಗಳ ಮತ್ತು ಅಂಗನವಾಡಿ ಕೇಂದ್ರಗಳ ನಿರ್ಮಾಣದ ಜೊತೆಗೆ ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹೊಸದಾಗಿ ನಿರ್ಮಾಣ ಮಾಡಿ ಅಭಿವೃದ್ಧಿಯ ಹರಿಕಾರ ಎಂದು ಹೆಸರು ಮಾಡಿದ್ದ ಮಾಜಿ ಸಚಿವರ ಕಾರ್ಯವೈಖರಿಯನ್ನು ಈಗಲೂ ಸಹ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತದೆ.

ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಹುಟ್ಟುಹಬ್ಬ ಆಚರಿಸಿದಕ್ಕಾಗಿ ಸಂತಸ ವ್ಯಕ್ತಪಡಿಸಿದ ಮಾಜಿ ಸಚಿವರು, ತಮ್ಮ ಅಭಿಮಾನ ಪ್ರೀತಿಗೆ ನಾನು ಸದಾ ಚಿರಋಣಿಯಾಗಿರುತ್ತೇನೆ ತಮ್ಮೆಲ್ಲರ ಸಹಕಾರ ಮತ್ತು ಬೆಂಬಲದಿಂದ ಕ್ಷೇತ್ರದ ಶಾಸಕನಾಗಿ ಮತ್ತು ಮಂತ್ರಿಯಾಗಿ ಕೈಲಾದಷ್ಟು ಸೇವೆ ಮಾಡಿದ್ದೇನೆ ಈ ಕ್ಷೇತ್ರ ಇಡೀ ಕರ್ನಾಟಕದಲ್ಲಿ ಮಾದರಿಯಾಗಿ ಅಭಿವೃದ್ಧಿ ಹೊಂದಬೇಕು ಅದೇ ನನ್ನ ಕನಸು ಅದನ್ನು ನನಸು ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್. ಮುನಿಯಪ್ಪ,ಕೋಲಾರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವಿ.ಸುಬ್ರಮಣಿ, ಕಾಂಗ್ರೆಸ್ ಮುಖಂಡ ಆಂಜಿನಪ್ಪ ಪುಟ್ಟು, ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಆನಂದ್, ಕೆಎಂಎಫ್ ನಿರ್ದೇಶಕ ಶ್ರೀನಿವಾಸ್ ರಾಮಯ್ಯ, ಹಾಪ್ ಕಾಮ್ಸ್ ಮಾಜಿ ಅಧ್ಯಕ್ಷ ಮುತ್ತೂರು ಚಂದ್ರೇಗೌಡ, ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಭೀಮೇಶ್, ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ಸುಗಟೂರು ನಾಗೇಶ್, ದಾಮೋದರ್, ಮುರಳಿ, ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...