ಬೀದರ್‌ | ಕನ್ನಡ ಭಾಷೆಯನ್ನು ದೇವ ಭಾಷೆಯನ್ನಾಗಿ ಮಾಡಿದ್ದು ವಚನಕಾರರು

Date:

ಜಗತ್ತಿನಲ್ಲಿ ಕನ್ನಡ ಭಾಷೆ, ಸರ್ವ ಶ್ರೇಷ್ಠ ಭಾಷೆಯಾಗಿದೆ. ಕನ್ನಡ ಭಾಷೆಯನ್ನು ದೇವಭಾಷೆಯನ್ನಾಗಿ ಮಾಡಿದ ಕೀರ್ತಿ ಶರಣ ಸಂಕುಲಕ್ಕೆ ಸಲ್ಲುತ್ತದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಣ ಪಡೆದರೆ ಉತ್ತಮ ಜೀವನವನ್ನು ನಡೆಸಲು ಸಾಧ್ಯವಿದೆ ಎಂದು ಚಿಂತಕ ಶಿವಶಂಕರ ತರನ್ನಳ್ಳಿ ಹೇಳಿದರು.

ಚಿಟಗುಪ್ಪ ತಾಲೂಕಿನ ಕಂದಗೂಳ ಗ್ರಾಮದ ಡಾ.ಚನ್ನಬಸವ ಪಟ್ಟದ್ದೇವರು ಗುರುಕುಲ ಪ್ರೌಢ ಶಾಲೆಯಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ಜಾನಪದ ಪರಿಷತ್ತು ಆಯೋಜಿಸಿದ್ದ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನ ಮತ್ತು ಸಂಸ್ಥಾಪಕ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ ಜನ್ಮದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಶರಣರು ಕನ್ನಡ ಭಾಷೆಗೆ ಆದ್ಯತೆ ನೀಡಿದ್ದರು ಅನಕ್ಷರಸ್ಥ ಶರಣರನ್ನು ಅಕ್ಷರಸ್ಥರನ್ನಾಗಿ ಮಾಡಿದ ಪರಿಣಾಮದಿಂದಲೇ ಇಷ್ಟೊಂದು ವಚನಗಳು ನಮಗೆ ದೊರೆಯುತ್ತವೆ. ಪ್ರತಿಯೊಬ್ಬ ಶರಣ ಶರಣೆಯರಿಗೂ ಕನ್ನಡದಲ್ಲಿ ವಚನಗಳನ್ನು ರಚಿಸುವಂತೆ ಪ್ರೇರೇಪಿಸಿದರು ಎಂಬುದು ಸಮಾಜ ಯಾವತ್ತು ಮರೆಯಬಾರದು. ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಶರಣರ ವಿಚಾರಧಾರೆಯನ್ನ ಮನ, ಮನೆ, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ತಿಳಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಗತಿಪರ ಚಿಂತಕಿ ಇಂದುಮತಿ ಗಾರಂಪಳ್ಳಿ ಮಾತನಾಡಿ, “ಪ್ರತಿಯೊಬ್ಬರ ಒಳಗೂ ಬಸವಾದಿ ಶರಣರ ಚಿಂತನೆಗಳಿವೆ. ಅದನ್ನು ಅರಿತುಕೊಳ್ಳಬೇಕು. ಅರಿವೇ ಗುರು ಎಂದು ತಿಳಿದು ಸಾಗಬೇಕು. ಶರಣರು ನುಡಿದಂತೆ ನಡೆದು ತೋರಿಸಿದ್ದಾರೆ. ಶರಣರ ಸೂಳ್ನುಡಿಗಳನ್ನು ಯಾವಾಗಲೂ ನೆನಪಿಸಿಕೊಳ್ಳಬೇಕು. ವಚನ ಸಾಹಿತ್ಯ ಬದುಕಿನ ಸಂದೇಶ ಕೊಡುತ್ತದೆ. ವಚನ ಸಾಹಿತ್ಯ ಇಂದಿನ ಸಮಾಜಕ್ಕೆ ದಾರಿದೀಪವಾಗಿದೆ” ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಬಸವರಾಜ ಕಾಳಪ್ಪ ಮಾತನಾಡಿ, ವಿಶ್ವ ಸಾಹಿತ್ಯಕ್ಕೆ ಪ್ರಜಾಪ್ರಭುತ್ವ ಆಶಯಗಳನ್ನು ಹೊತ್ತ ವಚನ ಸಾಹಿತ್ಯವನ್ನು ಶರಣರು ವಿಶೇಷ ಕೊಡುಗೆಯಾಗಿ ನೀಡಿದ್ದಾರೆ. ಆಡುಭಾಷೆಯಲ್ಲಿ ಸರಳವಾಗಿ ವಚನಗಳನ್ನು ರಚಿಸಿ, ಜೀವನಾಭುವ ಸಂದೇಶ ಸಾರಿದ್ದಾರೆ” ಎಂದು ನುಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕಿಯರು ಸಾವು

ಸಾಹಿತಿ ಗುಂಡಪ್ಪ ಸಂಗಮಕರ್, ಚಂದ್ರಶೇಖರ ತಂಗಾ ಮುಸ್ತರಿ, ಪ್ರಾಚಾರ್ಯ ರೇಖಾ ಮಂಜುನಾಥ್ ಮಾತನಾಡಿದರು. ಹಿರಿಯ ಚಿಂತಕ ಶರಣ ಬಂಡೆಪ್ಪ ಮೂಲಗೆ ಕಾರ್ಯಕ್ರಮದ ಆಧ್ಯಕ್ಷತೆವಹಿಸಿ ಮಾತನಾಡಿದರು. ಪರಿಷತ್ತಿನ ಅಧ್ಯಕ್ಷ ಸಂಗಮೇಶ ಎನ್ ಜವಾದಿ ಗಣ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಶರಣ ಮಾಹಾದೇವ ಶೆಟಗಾರ ನಿರೂಪಿಸಿದರು.ಶರಣ ರಾಜು ದೇವಣಿ ಸರ್ವರನ್ನು ವಂದಿಸಿದರು. ಕಾರ್ಯಕ್ರಮದಲ್ಲಿ ರಾಘವೇಂದ್ರ ಕುಲಕುರ್ಣೀ,ರಮೇಶ ಗೌಡಗಾಂವೆ, ಶರಣ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು, ಶಾಲಾ ಸಿಬ್ಬಂದಿ, ಮಕ್ಕಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ...