ಬೆಂಗಳೂರು ಗ್ರಾಮಾಂತರ | ಬೆಟ್ಟ- ಗುಡ್ಡಗಳಲ್ಲಿ ಗಿಡ ಮರಗಳನ್ನು ನೆಟ್ಟು ಭೂಕುಸಿತ ತಡೆಗಟ್ಟಿ : ಸಚಿವ ಮುನಿಯಪ್ಪ

Date:

ಬೆಟ್ಟ-ಗುಡ್ಡ ಪ್ರದೇಶಗಳಲ್ಲಿ ಗಿಡ ಮರಗಳನ್ನು ಬೆಳೆಸುವುದರಿಂದ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುವುದನ್ನು ತಡೆಗಟ್ಟಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಅಭಿಪ್ರಾಯಪಟ್ಟರು.

- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ‘ವನ ಮಹೋತ್ಸವ-2024’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರಕೃತಿ ವಿಕೋಪಗಳನ್ನು ತಪ್ಪಿಸಲು ಪ್ರಕೃತಿಯ ಸಮತೋಲನ ಕಾಪಾಡಲು ಗಿಡ-ಮರಗಳನ್ನು ಬೆಳೆಸಲು ನಾವೆಲ್ಲರು ಅಣಿಯಾದಾಗ ಮಾತ್ರ ಸರಿಯಾದ ಸಮಯಕ್ಕೆ ಮಳೆ, ಬೆಳೆ, ಪರಿಸರ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ರೈತರು ತಮ್ಮ ಜಮೀನುಗಳಲ್ಲಿ ಮೂರನೇ ಒಂದು ಭಾಗ ಮಾವು, ತೆಂಗು, ಹಲಸು, ನೇರಳೆ ಮುಂತಾದ ಆದಾಯದ ಗಿಡ-ಮರಗಳನ್ನು ಬೆಳೆಸಿದರೆ ಆದಾಯದ ಜೊತೆಗೆ ಪರಿಸರ ಸಮತೋಲನ ನಿರ್ಮಾಣವಾಗುತ್ತದೆ. ಜಿಲ್ಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಸ್ತೆಗಳ ಎರಡು ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ಮರಗಳನ್ನು ನೆಡಲಾಗುತ್ತಿದೆ. ಪ್ರತಿಯೊಬ್ಬರೂ ಮನೆಗಳ ಸುತ್ತಮುತ್ತ ಗಿಡ ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು. ಇದರಿಂದ ವಾತಾವರಣದ ಮಾಲಿನ್ಯವನ್ನು ನಿಯಂತ್ರಿಸಲು ಸಹಕಾರಿಯಾಗಲಿದೆ ಎಂದು ಸಚಿವರು ಹೇಳಿದರು.

1001189833

ಬೆಂಗಳೂರು ಗ್ರಾಮಾಂತರ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ ಸಿಕ್ಕಲಿಗಾರ್ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯು 2,298 ಕಿ.ಮೀ ವ್ಯಾಪ್ತಿ ಹೊಂದಿದ್ದು 22,800 ಹೆಕ್ಟೇರ್ ಭೂ ವಿಸ್ತೀರ್ಣ ಹೊಂದಿದೆ. 203.89 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದೆ. ಒಟ್ಟು ಭೂ ಪ್ರದೇಶದಲ್ಲಿ ಶೇಕಡ 8.8 ರಷ್ಟು ಅರಣ್ಯ ಭೂಮಿ ಆವೃತ್ತಿಯಾಗಿದೆ. ಈ ನಿಟ್ಟಿನಲ್ಲಿ ಪರಿಸರ ಸಮತೋಲನ ಕಾಪಾಡುವ ದೃಷ್ಟಿಯಿಂದ ಅರಣ್ಯೀಕರಣ, ವನ್ಯಜೀವಿ ಸಂರಕ್ಷಣೆ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿದೆ ಎಂದರು.

ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಕಳೆದ ಐದು ವರ್ಷಗಳಲ್ಲಿ 2400 ಹೆಕ್ಟೇರ್ ನೆಡುತೋಪು ನಿರ್ಮಿಸಲಾಗಿದೆ. 383 ರೈತ ಫಲಾನುಭವಿಗಳಿಗೆ 16 ಲಕ್ಷ ಸಸಿಗಳನ್ನು ವಿತರಿಸಲಾಗಿದ್ದು, ಗಿಡಗಳನ್ನು ಬೆಳೆಸಿ ಪೋಷಿಸಲು ಇದುವರೆಗೆ 74 ಲಕ್ಷ ರೂ.ಗಳ ಹಣ ರೈತ ಫಲಾನುಭವಿಗಳಿಗೆ ನೀಡಲಾಗಿದೆ.ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯಡಿ 3065 ಫಲಾನುಭವಿಗಳಿಗೆ ಸಸಿ ವಿತರಿಸಿ ವಿವಿಧ ಸೌಲಭ್ಯ ಕಲ್ಪಿಸಲಾಗಿದೆ. 2024 ನೇ ಸಾಲಿನಲ್ಲಿ 251 ಲಕ್ಷ ರೂ.ಗಳ ಯೋಜನಾ ವೆಚ್ಚ ರೂಪಿಸಲಾಗಿದ್ದು, 165 ಕಿಲೋ ಮೀಟರ್ ನೆಡುತೋಪು ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಪ್ರಾದೇಶಿಕ ಅರಣ್ಯ ಮತ್ತು ಸಾಮಾಜಿಕ ಅರಣ್ಯ ವಲಯದಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ ಸಚಿವರು ಪ್ರಶಂಸಾ ಪತ್ರ ವಿತರಿಸಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರಾಜಣ್ಣ, ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧಾ, ಉಪವಿಭಾಗಾಧಿಕಾರಿ ದುರ್ಗಶ್ರೀ ಎನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ್. ಪಿ.ಎನ್, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಬಾಲಕೃಷ್ಣ, ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಕುಂದಾಣ ಗ್ರಾ.ಪಂ ಅಧ್ಯಕ್ಷೆ ನೇತ್ರಾವತಿ ಎ.ಆರ್, ಉಪಾಧ್ಯಕ್ಷೆ ನೀಲಮ್ಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಅರಣ್ಯ ಇಲಾಖೆ ಸಿಬ್ಬಂದಿ, ಸ್ಥಳೀಯ ಜನಪ್ರತಿನಿಧಿಗಳು, ಕುಂದಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...