ಶಿವಮೊಗ್ಗ | ಬಾಲಕಿ ಸಾವು ಪ್ರಕರಣ; ಮಂಜಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Date:

Advertisements

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿರುವ ವನಶ್ರೀ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯ ಅನುಮಾನಾಸ್ಪದ ಸಾವು ಹಾಗೂ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ವಸತಿ ನಿಲಯದ ಮುಖ್ಯಸ್ಥ ಎಚ್ ಪಿ ಮಂಜಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಶನಿವಾರ ತನಿಖೆಗಾಗಿ ವಶಕ್ಕೆ ಪಡೆದಿದ್ದ ಪೊಲೀಸರು ಮೃತ ಬಾಲಕಿಯ ಪೋಷಕರು ಮತ್ತು ವಸತಿ ನಿಲಯದ ಇತರ ಬಾಲಕಿಯರು ನೀಡಿದ ದೂರು, ಹೇಳಿಕೆಯನ್ನು ಆಧರಿಸಿ ಪೋಕ್ಸೋ ಕಾಯಿದೆ ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

ಜೂನ್‌ ಮೊದಲ ವಾರದಲ್ಲಿ ವಸತಿ ಶಾಲೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ತೇಜಸ್ವಿನಿ ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದಳು. ಆಕೆಗೆ ಭಾರೀ ಪ್ರಮಾಣದಲ್ಲಿ ನೀರು ಕುಡಿಸಲಾಗಿತ್ತು ಎಂದು ಪ್ರತ್ಯಕ್ಷದರ್ಶಿ ಬಾಲಕಿಯ ಸಹಪಾಠಿಗಳು ಆರೋಪಿಸಿದ್ದರು. ಶನಿವಾರ ಬಾಲಕಿಯ ಪೋಷಕರು ವಸತಿ ನಿಲಯದ ಎದುರು ಪ್ರತಿಭಟನೆ ನಡೆಸಿದ್ದರು.

Advertisements

ವನಶ್ರೀ ಮಂಜಪ್ಪ ಎಂದೇ ಹೆಸರಾಗಿರುವ ಎಚ್ ಪಿ ಮಂಜಪ್ಪ ಆರ್‌ಎಸ್‌ಎಸ್‌ ನಂಟು ಹೊಂದಿದ್ದು, ಬಹಳ ವರ್ಷಗಳಿಂದಲೂ ಮಕ್ಕಳನ್ನು ಮತ್ತು ವಸತಿ ಶಾಲೆಯಲ್ಲಿ ಕೆಲಸಕ್ಕೆ ಸೇರುವ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿತ್ತು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಹಾವು ಕಡಿದು ರೈತ ಸಾವು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X