ಕಾರವಾರಕ್ಕೆ ಆಗಮಿಸಿದ ವಂದೇ ಭಾರತ್ ಎಕ್ಸ್‌ಪ್ರೆಸ್: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಸ್ವಾಗತ

Date:

ಬೆಂಗಳೂರು–ಮಡಗಾಂವ್ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಶುಕ್ರವಾರದಿಂದ ಅಧಿಕೃತವಾಗಿ ಆರಂಭಗೊಂಡಿದ್ದು, ಶನಿವಾರ ಬೆಳಗಿನ ಜಾವ 2.30ಕ್ಕೆ ಕಾರವಾರ ರೈಲು ನಿಲ್ದಾಣಕ್ಕೆ ಆಗಮಿಸಿದ ರೈಲನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವಾಗತಿಸಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ, ಗೋಕರ್ಣ ಮತ್ತು ಕಾರವಾರದಲ್ಲಿ ನಿಲುಗಡೆ ಹೊಂದಿರುವುದು ಜಿಲ್ಲೆಯ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಜಿಲ್ಲೆಗೆ ಈ ರೈಲು ಸೇವೆ ಒದಗಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವರು ಹಾಗೂ ರೈಲ್ವೆ ಖಾತೆಯ ರಾಜ್ಯ ಸಚಿವರಿಗೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೇ ಜೈಲುಶಿಕ್ಷೆ ವಿಧಿಸಿ,...

ನ್ಯಾಯಮೂರ್ತಿಗಳ ವಿರುದ್ಧ ಜಾತಿ ತಾರತಮ್ಯದ ಆರೋಪ ಮಾಡಿ, ನ್ಯಾಯಾಂಗದೊಂದಿಗಿನ ಸಂಘರ್ಷ ನಡೆಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೇ ಐದು ವರ್ಷಗಳ ಶಿಕ್ಷೆಯ ಆದೇಶ ಹೊರಡಿಸಿ, ಕೊನೆಗೆ ತಾವೇ ಆರು ತಿಂಗಳ ಜೈಲುವಾಸ ಅನುಭವಿಸಿದ್ದವರು,...

ಡಿ.ಡಿ. ಕೋಸಾಂಬಿ | ಜ್ಞಾನದ ಹಲವು ಜಗತ್ತುಗಳನ್ನು ಶೋಧಿಸಿದ...

ಡಿ.ಡಿ. ಕೋಸಾಂಬಿಯವರ ಬದುಕು ಕೇವಲ ಯಶಸ್ಸಿನ ಕಥೆಯಷ್ಟೇ ಅಲ್ಲ; ಅದು ಅಸಾಧಾರಣ ಪ್ರತಿಭೆ ಹಾಗೂ ಮನುಷ್ಯ ಸಹಜ ಭಾವನೆಗಳ ನಡುವಿನ ಸುಂದರ ಪಯಣ. ತಮಿಳು ಇತಿಹಾಸಕಾರ ಎ.ಆರ್. ವೆಂಕಟಾಚಲಪತಿ ಅವರಂತಹ ವಿಮರ್ಶಕರು ಈ...

ಒಂದು ಬದಿ ಅಧಿಕಾರ ನಿರಾಕರಣೆ, ಮತ್ತೊಂದು ಬದಿ ಕರ್ತವ್ಯದ...

ಸೋನಿಯಾ ಗಾಂಧಿ ಅವರ ಈ ಆತ್ಮಕಥೆಯ ಆಯ್ದ ಭಾಗಗಳು ಕೇವಲ ರಾಜಕೀಯ ಇತಿಹಾಸದ ದಾಖಲೆಯಷ್ಟೇ ಅಲ್ಲ, ಬದಲಿಗೆ ಮನುಷ್ಯನ ಮನಸ್ಸಿನ ಆಳದ ಸಂವೇದನೆಗಳ ಕನ್ನಡಿ. ಅಧಿಕಾರ ಸಿಕ್ಕ ಕೂಡಲೇ ಅದನ್ನು ಬಾಚಿಕೊಳ್ಳಲು ಹಾತೊರೆಯುವ...

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಪುರೋಹಿತರ ಮನೆಗೆ ಕನ್ನ; ₹83,500 ಮೌಲ್ಯದ ತಾಮ್ರ, ಹಿತ್ತಾಳೆ ಪಾತ್ರೆಗಳು ಕಳವು

ಕೊಂಕಣ ರೈಲ್ವೆಯ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೊಂಕಣ ರೈಲ್ವೆ ಸುಧಾರಣೆಗಾಗಿ ಸುಮಾರು ₹7,000 ಕೋಟಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಮುಂಬರುವ ದಿನಗಳಲ್ಲಿ ಈ ಅನುದಾನ ಅನುಷ್ಠಾನಗೊಂಡರೆ ಕೊಂಕಣ ರೈಲ್ವೆಗೆ ಸಂಬಂಧಿಸಿದ ಹಲವು ಮೂಲಸೌಕರ್ಯಗಳ ಅಭಿವೃದ್ಧಿ ಸಾಧ್ಯವಾಗಲಿದೆ. ಇದರಿಂದ ಪ್ರಯಾಣಿಕರಿಗೆ ಇನ್ನಷ್ಟು ಉತ್ತಮ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ ಎಂದರು.

ಈ ಸಂದರ್ಭದಲ್ಲಿ ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ನಗರಸಭೆ ದಿಢೀರ್ ದಾಳಿ 25ಕ್ಕೂ ಹೆಚ್ಚು ಅಂಗಡಿಗಳ ತಪಾಸಣೆ, ದಂಡ ವಿಧಿಸಿ ಎಚ್ಚರಿಕೆ

ನಗರದಾದ್ಯಂತ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ...

ಹಾವೇರಿ | ಎಸ್ಎಫ್ಐ, ಡಿವೈಎಫ್ಐ ಕಚೇರಿಯಲ್ಲಿ ಬಾಲ ಸಂಘಂ ಮಕ್ಕಳ ಗ್ರಂಥಾಲಯ ಉದ್ಘಾಟನೆ 

"ವೃತ್ತಿ ಜೀವನದ ಜೊತೆಗೆ ಓದುವ ಹವ್ಯಾಸ ಹೆಚ್ಚಿಸಿಕೊಳ್ಳಲು ಮನೆಗೊಂದು ಗ್ರಂಥಾಲಯ ಅತ್ಯಂತ...

ಬಿಸಿಯೂಟಕ್ಕೂ ಖಾಸಗೀಕರಣದ ಬಿಸಿ! ಕೆಲಸ ಕಸಿಯುವ ಹುನ್ನಾರ ವಿರೋಧಿಸಿ ಪ್ರತಿಭಟನೆ

ಬಿಸಿಯೂಟ ತಯಾರಕ ಮಹಿಳೆಯರನ್ನು ಕೆಲಸದಿಂದ ವಜಾಗೊಳಿಸಿ, ಎನ್‌ಜಿಓ ಖಾಸಗಿ ಸಂಘ ಸಂಸ್ಥೆಗಳಿಗೆ...

ಧಾರವಾಡ | ಮಹನೀಯರ ಆದರ್ಶಗಳನ್ನು ವಿದ್ಯಾರ್ಥಿಗಳು ಪಾಲಿಸಬೇಕು: ಡಾ. ಬಿ.ಎಸ್. ಮಾಳವಾಡ

"ಕೆಎಲ್ಇ ಸಂಸ್ಥೆಯನ್ನು ಕಟ್ಟಿ ಬೆಳೆಸಲು ಅನೇಕ ಮಹನೀಯರು ಶ್ರಮಿಸಿದ್ದಾರೆ. ಅಂತಹ ಮಹನೀಯರ...