- ಎಕ್ಸ್‌ಪ್ರೆಸ್ ರೈಲಿನ ಸೇವೆಗೆ ಅನುಕೂಲವಾಗುವಂತೆ ರೈಲ್ವೆ ಕಾಮಗಾರಿ
- ವಂದೇ ಭಾರತ್ ಎಕ್ಸ್‌ಪ್ರೆಸ್ ಜನಶತಾಬ್ದಿ ಎಕ್ಸ್‌ಪ್ರೆಸ್‌ಗಿಂತ ವೇಗವಾಗಿರುತ್ತದೆ
ಹುಬ್ಬಳ್ಳಿ-ಧಾರವಾಡದಿಂದ ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ಶೀಘ್ರದಲ್ಲೇ ಸಂಚಾರ ಆರಂಭಿಸಲಿದೆ ಎಂದು ತಿಳಿದುಬಂದಿದೆ.
ಸೆಮಿ-ಹೈ-ಸ್ಪೀಡ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಚಾಲನೆ ಆರಂಭವಾಗಿದ್ದು, ಪ್ರಸ್ತುತ ಚಾಲನೆಯಲ್ಲಿರುವ ಜನಶತಾಬ್ದಿ ಎಕ್ಸ್‌ಪ್ರೆಸ್‌ಗಿಂತ ವೇಗವಾಗಿರುತ್ತದೆ ಎಂದು ವರದಿಯಾಗಿದೆ.
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ನಂತರವೇ ವಂದೇ ಭಾರತ್ ಸಂಚಾರ ಕಾರ್ಯಾಚರಣೆ ಪ್ರಾರಂಭವಾಗುವ ನಿರೀಕ್ಷೆಯಿದೆ. ರೈಲ್ವೆ ಅಧಿಕಾರಿಗಳು ಇನ್ನೂ ಚಾಲನೆಯ ದಿನಾಂಕವನ್ನು ಅಂತಿಮಗೊಳಿಸಿಲ್ಲ.
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಗೆ ಅನುಕೂಲವಾಗುವಂತೆ ರೈಲ್ವೇ ಮಾರ್ಗವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ನಡೆಯುತ್ತಿದೆ. ವಿದ್ಯುದ್ದೀಕರಣ, ಹಳಿಗಳ ಬಲವರ್ಧನೆ, ಸಿಗ್ನಲ್ ವರ್ಧನೆ ಮತ್ತಿತರ ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಬ್ಯಾಂಕ್ ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ
ಈ ಮಾರ್ಗದ ವಂದೇ ಭಾರತ್ ರೈಲಿನ ಟಿಕೆಟ್ ದರಗಳು, ಸಮಯ ಮತ್ತು ಕಾರ್ಯಾಚರಣೆಯ ವೇಗದ ಬಗ್ಗೆ ರೈಲ್ವೆ ಅಧಿಕಾರಿಗಳು ಇನ್ನೂ ಮಾಹಿತಿ ನೀಡಿಲ್ಲ. ಇತ್ತೀಚೆಗೆ ಪ್ರಾರಂಭವಾಗಿರುವ ಚೆನ್ನೈ-ಕೊಯಮತ್ತೂರು ವಂದೇ ಭಾರತ್ ಮಾರ್ಗದಂತೆಯೇ, ಈ ಮಾರ್ಗವು ಎಂಟು ಕಾರ್ ಫ್ಲೀಟ್ ಹೊಂದಿರಬಹುದೆಂದು ಹೇಳಲಾಗುತ್ತಿದೆ.