ಉಡುಪಿ | ಫೇಸ್‌ಬುಕ್‌ನಲ್ಲಿ ಅವಾಚ್ಯ ಕಾಮೆಂಟ್‌ ಮಾಡಿದ ವ್ಯಕ್ತಿಯ ಬಂಧನ

Date:

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಾಚ್ಯವಾಗಿ ಕಾಮೆಂಟ್‌ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

- Advertisement -

ಕಳೆದ 2025ರ ಮಾರ್ಚ್ 4 ರಂದು ಫೇಸ್‌ಬುಕ್‌ನ ‘ವಾರ್ತಾ ಭಾರತಿ’ ಪೇಜ್‌ನಲ್ಲಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್‌ನಲ್ಲಿ ತರಕಾರಿ ವ್ಯಾಪಾರ ಮಾಡುವ ಮಹಮ್ಮದ್ ಅವರ ಸಂದರ್ಶನ ಪ್ರಕಟವಾಗಿತ್ತು. ಈ ಕುರಿತು “ರಂಜಾನ್ ಕಥೆಯ ಇಂದಿನ ಹೀರೋ ಮಂಗಳೂರಿನ ಮಹಮ್ಮದ್” ಎಂಬ ಶೀರ್ಷಿಕೆಯ ಪೋಸ್ಟ್‌ಗೆ ‘ಹೆಮ್ಮೆಯ ಕಾರ್ಯಕರ್ತ’ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಅವಾಚ್ಯವಾಗಿ ಕಾಮೆಂಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 353(2) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 66(ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ತನಿಖೆಯನ್ನು ಮುಂದುವರಿಸಿದ ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಹೆಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ, ಕುಂದಾಪುರ ಪೊಲೀಸ್ ಠಾಣಾ ನಿರೀಕ್ಷಕ ಜಯರಾಮ್ ಡಿ. ಗೌಡ ಅವರ ನೇತೃತ್ವದಲ್ಲಿ ಪಿಎಸ್‌ಐ ನಂಜಾನಾಯ್ಕ್ ಎನ್. (ಕಾ&ಸು), ಪಿಎಸ್‌ಐ ಶ್ರೀಮತಿ ಪುಷ್ಪ (ತನಿಖೆ) ಹಾಗೂ ಸಿಬ್ಬಂದಿಗಳಾದ ಸಂತೋಷ, ಮೋಹನ್, ಸಂತೋಷ ದೇವಾಡಿಗ, ಘನಶ್ಯಾಮ, ಅಣ್ಣಪ್ಪ, ಮಹಾಬಲ ಶೆಟ್ಟಿಗಾರ, ನಾಗಶ್ರೀ ಮತ್ತು ಗೌತಮ ಅವರ ತಂಡ ಕಾರ್ಯಾಚರಣೆ ನಡೆಸಿತು.

ಪ್ರಕರಣದ ಆರೋಪಿ ಪ್ರಕಾಶ್ ಎಸ್. (45), ತಂದೆ ಶಿವರಾಮ್ ಕೆ., ಮತ್ತಿಕೆರೆ, ಬೆಂಗಳೂರು ನಿವಾಸಿ ಇತನನ್ನು ಬಂಧಿಸಿ, ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...