ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಬಿಗ್‌ಬಾಸ್’ ರಿಯಾಲಿಟಿ ಶೋ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಗ್‌ಬಾಸ್ ಮನೆಯಿಂದಲೇ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಕಲರ್ಸ್ ಕನ್ನಡ ವಾಹಿನಿ ಈ ಬಗ್ಗೆ ಇನ್ನೂ ಮಾಹಿತಿ ಪ್ರಕಟಿಸಿಲ್ಲ.
ರಾಮೋಹಳ್ಳಿ ಅರಣ್ಯಾಧಿಕಾರಿಗಳು ಬಿಡದಿಯ ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿರುವ ಬಿಗ್‌ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಸಂತೋಷ್ ಧರಿಸಿದ್ದ ಚೈನ್‌ನಲ್ಲಿ ಹುಲಿ ಉಗುರು ಕಾಣಿಸಿಕೊಂಡಿದ್ದು, ಆ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.
ವರ್ತೂರು ಸಂತೋಷ್ ಅವರು ಬಿಗ್ಬಾಸ್ಗೆ ಬರುವ ಸಮಯದಲ್ಲಿ ಕುತ್ತಿಗೆಗೆ ಚಿನ್ನದ ಚೈನ್ ಧರಿಸಿದ್ದರು. ಅದರಲ್ಲಿದ್ದ ಪೆಂಡೆಂಟ್‌ನಲ್ಲಿ ಹುಲಿ ಉಗುರು ಕಾಣಿಸಿತ್ತು. ಹೀಗಾಗಿ, ವನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.