ಉಡುಪಿ | ಫೇಸ್‌ ಬುಕ್‌ ನಲ್ಲಿ ಕೋಮು ಪ್ರಚೋದನಾ ಪೋಸ್ಟ್, ವಸಂತ್ ಗಿಳಿಯಾರ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

Date:

ಕಲ್ಲಡ್ಕ ಪ್ರಭಾಕರ್ ಭಟ್ ಎನ್ನುವ ಶಕ್ತಿಯನ್ನು ಕೆಣಕಿ ಉಳಿದ ಸರ್ಕಾರವಿಲ್ಲ! ಭಟ್ಟರ ಬಂಧನಕ್ಕೆ ಒತ್ತಡವಿದೆ ಎನ್ನುವ ಮಾತು ಕೇಳಿಸಿಕೊಂಡೆ. ಕರಾವಳಿ ಕಿಡಿ ಕಿಡಿಯಾದೀತು. ಪ್ರಭಾಕರ ಭಟ್ಟರ ಪ್ರಭಾವ ಏನೂ ಎನ್ನುವುದನ್ನು ಪ್ರದರ್ಶನ ಮಾಡುವ ರಿಕ್ಸಿಗೆ ಯಾರೂ ಕೈ ಹಾಕದೇ ಇರೋದು ಸೇಫ್ ! ಕರಾವಳಿ ಕರ್ನಾಟಕ ಶಾಂತಿಯಲ್ಲಿರಲಿ ಎನ್ನುವುದು ಸಲಹೆ ” ಎಂಬ ಒಕ್ಕಣೆ ಇರುವ ಬರಹವೊಂದನ್ನು ವಸಂತ್ ಗಿಳಿಯಾರ್ ತನ್ನ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದರು.

- Advertisement -

ಇದರಿಂದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟುವಲ್ಲಿ ಪ್ರಚೋದನೆ ನೀಡಿದ ಆರೋಪದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಸಂಜೆ ಪೊಲೀಸರಿಗೆ ಮನವಿ ನೀಡಿದ್ದು, ಕೋಮು ಪ್ರಚೋದನೆ ನಡೆಸಿ ಕರಾವಳಿಯಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ವಸಂತ್ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಈ ಸಂದರ್ಭಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಕುಂದಾಪುರ ವಿಧಾನಸಭಾ ಯುವ ಕಾಂಗ್ರೆಸ್‌ ಉಪಾಧ್ಯಕ್ಷ ಶಮಂತ್ ಕುಂದಾಪುರ, ಕಾಳವಾರ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕೆ. ಡಿ. ಪಿ ಸದಸ್ಯ ರಮೇಶ್ ಶೆಟ್ಟಿ ವಕ್ವಾಡಿ, ಕಾಂಗ್ರೆಸ್ ಮುಖಂಡ ಸುನಿಲ್ ಪೂಜಾರಿ ಕೋಡಿ, ಕುಂದಾಪುರ ವಲಯ ಸಹಬಾಳ್ವೆ ಸಂಚಾಲಕ ರಾಮಕೃಷ್ಣ ಹೇರ್ಳೆ, ಕುಂದಾಪುರ ಪುರಸಭೆ ನಾಮ ನಿರ್ದೇಶಿತ ಸದಸ್ಯ ಅಶೋಕ್‌ ಸುವರ್ಣ, ಕುಂದಾಪುರ ಪುರಸಭೆ ಮಾಜಿ ಸದಸ್ಯ ಕೇಶವ ಭಟ್, ಕುಮಾರ್ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತ ಶ್ರೀನಿವಾಸ ಎ. ಕೊಳ್ಳೇಗಾಲ ನಿಧನ

ಕಿರಿಯ ವಯಸ್ಸಿನಲ್ಲೇ ಹೃದಯಾಘಾತದಿಂದ ಪತ್ರಕರ್ತ ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ...

ಶಿಕಾರಿಪುರದಲ್ಲಿ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ

ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಿಂದ ‘ಭಾರತ್ ಜೋಡೋ...

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...