ಮನರೇಗಾ ಬದಲಿಗೆ ವಿಬಿ ಜಿ ರಾಮ್‌ ಜಿ ಮಸೂದೆ: ಬೆಳಗಾವಿಯಲ್ಲಿ ರಾಜ್ಯ ಕಾಂಗ್ರೆಸ್ ಶಾಸಕರ ಪ್ರತಿಭಟನೆ

Date:

"ಮನರೇಗಾ ಹೆಸರು ಬದಲಾವಣೆ ವಿಷಯವನ್ನು ಕರ್ನಾಟಕ ವಿಧಾನಸಭೆಯ ಚಳಿಗಾಲ ಅಧಿವೇಶನದಲ್ಲೂ ಎತ್ತಿ ಚರ್ಚಿಸಲಾಗುವುದು. ಅಲ್ಲದೆ ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುವುದು"

ನ್ಯಾಷನಲ್ ಹೆರಾಲ್ಡ್ ಪ್ರಕರಣ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮನರೇಗಾ)ವನ್ನು ವಿಬಿ ಜಿ ರಾಮ್‌ ಜಿ ಎಂದು ಮರುನಾಮಕರಣ ಮಾಡುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಬೆಳಗಾವಿಯ ಸುವರ್ಣ ಸೌಧದಲ್ಲಿರುವ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದರು.

- Advertisement -

“ಮನರೇಗಾ ಕಾಯಿದೆಯ ಮರುನಾಮಕರಣ ಮಾಡಿರುವ ಬಿಜೆಪಿ ನೇತೃತ್ವದ ಸರ್ಕಾರವು ಮಹಾತ್ಮ ಗಾಂಧಿಯವರ ಪರಂಪರೆಯನ್ನು ದುರ್ಬಲಗೊಳಿಸುತ್ತಿರುವುದರ ಜತೆಗೆ ಒಂದು ಮಹತ್ವದ ಕಲ್ಯಾಣ ಕಾಯಿದೆಯನ್ನೇ ಬುಡಮೇಲು ಮಾಡಲು ಹೊರಟಿದೆ” ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಚಿವ ಎಂ ಬಿ ಪಾಟೀಲ್ ಮಾತನಾಡಿ, “ಮಹಾತ್ಮ ಗಾಂಧಿ ರಾಷ್ಟ್ರಪಿತ. ಮನರೇಗಾ ಗ್ರಾಮೀಣ ಪ್ರದೇಶಗಳಗಳನ್ನೊಳಗೊಂಡ ದೇಶವಾಗಿರುವ ಭಾರತದಾದ್ಯಂತ ಸ್ಥಳೀಯ ಉದ್ಯೋಗವನ್ನು ಸೃಷ್ಟಿಸುವ ಯಶಸ್ವಿ ಕಾರ್ಯಕ್ರಮ. ಇದು ಮನಮೋಹನ್ ಸಿಂಗ್, ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಪ್ರಾರಂಭಿಸಲಾಗಿದ್ದು, ಸ್ಥಳೀಯವಾಗಿ ಉದ್ಯೋಗ ಒದಗಿಸುವ ಯಶಸ್ವಿ ಕಾರ್ಯಕ್ರಮವಾಗಿತ್ತು. ಇದನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹಾಗಾಗಿ ಅದರ ಹೆಸರನ್ನು ಬದಲಾಯಿಸಿದೆ” ಎಂದು ಕಿಡಿಕಾರಿದರು.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, “ನ್ಯಾಷನಲ್ ಹೆರಾಲ್ಡ್ ಭಾರತದ ಸ್ವಾತಂತ್ರ್ಯ ಚಳವಳಿಗೆ ನಿಕಟ ಸಂಬಂಧ ಹೊಂದಿದೆ. ನ್ಯಾಷನಲ್ ಹೆರಾಲ್ಡ್ ದೇಶದ ಹೆಮ್ಮೆ. ಇದನ್ನು ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಜವಾಹರಲಾಲ್ ನೆಹರು ಸ್ಥಾಪಿಸಿದರು” ಎಂದು ಹೇಳಿದ ಅವರು, ಪ್ರಕರಣದಲ್ಲಿ ಕೇಂದ್ರ ಸಂಸ್ಥೆಗಳ ಕ್ರಮಗಳನ್ನು ಪ್ರಶ್ನಿಸಿದರು.

“ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜವಾಹರಲಾಲ್ ನೆಹರೂ ಅವರು 1937ರಲ್ಲಿ ಸ್ಥಾಪಿಸಿದ ಪತ್ರಿಕೆಯನ್ನು ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷದ ಆಸ್ತಿಯನ್ನಾಗಿ ಮಾಡಿ, ಸೋನಿಯಾ ಗಾಂಧೀ ಮತ್ತು ರಾಹುಲ್ ಗಾಂಧೀ ಅವರನ್ನು ತೊಂದರೆಗೆ ಒಳಪಡಿಸುವುದು ದ್ವೇಷದ ರಾಜಕಾರಣ. ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಇ ಡಿ ಕೇಸ್ ತಿರಸ್ಕರಿಸಿರುವುದು, ಬಿಜೆಪಿಗೆ ಮುಖಭಂಗವಾಗಿದೆ” ಎಂದು ಡಿ ಕೆ ಶಿವಕುಮಾರ್ ಹೇಳಿದರು.

“ನಾನು ಒಂದೇ ಒಂದು ಪ್ರಶ್ನೆಯನ್ನು ಕೇಳುತ್ತೇನೆ: ಅವರು ಇನ್ನೂ ಎಫ್‌ಐಆರ್ ಪ್ರತಿಯನ್ನು ಏಕೆ ನೀಡಿಲ್ಲ. ಇಂತಹ ಕ್ರಮಗಳಿಂದಾಗಿ ಜಾರಿ ನಿರ್ದೇಶನಾಲಯದ ಪ್ರತಿಷ್ಠೆ ಕಳಂಕಿತವಾಗಿದೆ” ಎಂದು ಶಿವಕುಮಾರ್ ತಿಳಿಸಿದರು.

ಇದನ್ನೂ ಓದಿದ್ದೀರಾ? ಹಾವೇರಿ | ಮನರೇಗಾ ಬದಲಾಗಿ, ವಿಬಿ ಜಿಆರಎಎಂ ಮಸೂದೆ ಮಂಡಿಸಲು ಮುಂದಾದ ಕೇಂದ್ರ ಸರಕಾರದ ನಡೆ ಖಂಡನೀಯ: ಬಸವರಾಜ್ ಪೂಜಾರ

“ಮನರೇಗಾ ಹೆಸರು ಬದಲಾವಣೆ ವಿಷಯವನ್ನು ಕರ್ನಾಟಕ ವಿಧಾನಸಭೆಯ ಚಳಿಗಾಲ ಅಧಿವೇಶನದಲ್ಲೂ ಎತ್ತಿ ಚರ್ಚಿಸಲಾಗುವುದು. ಅಲ್ಲದೆ ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುವುದು” ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಶಾಸಕರು ಪ್ಲೇಕಾರ್ಡ್‌ಗಳನ್ನು ಹಿಡಿದು ಘೋಷಣೆ ಕೂಗಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಎಲ್ಲ ಶಾಸಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...