ಧರ್ಮಸ್ಥಳ ದೇವಸ್ಥಾನದ ಮಾಹಿತಿ ನೀಡಲು ವೀರೇಂದ್ರ ಹೆಗ್ಗಡೆ ನಿರಾಕರಣೆ

Date:

ಧರ್ಮಸ್ಥಳ ಕ್ಷೇತ್ರದಲ್ಲಿರುವ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು ದೇವಸ್ಥಾನಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀಡಲು ನಿರಾಕರಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರರು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ತಿಳಿಸಿದ್ದಾರೆ. ಈ ವರದಿಯ ಪ್ರತಿಯನ್ನು ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಸೋಮನಾಥ ನಾಯಕ್‌ ಅವರಿಗೆ ಕಳಿಸಿದ್ದಾರೆ.

- Advertisement -

ಯಾವುದೇ ಮಾಹಿತಿಯನ್ನು ನೀಡಲು ನಿರಾಕರಿಸಿರುವ ಕಾರಣದಿಂದಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನವನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಮತ್ತು ನಿಯಮ 2002ರ ಸೆಕ್ಷನ್ 53ರಂತೆ ನೋಂದಣಿ ಮಾಡಲು ಪ್ರಸ್ಥಾವನೆ ಸಲ್ಲಿಸಲು ಅಸಾಧ್ಯವಾಗಿದೆ ಎಂದು ತಹಶೀಲ್ದಾರರು ಹೇಳಿದ್ದಾರೆ. ಇದಾದ ಬೆನ್ನಲ್ಲೇ ಮಾಹಿತಿ ಯಾಕೆ ನೀಡಿಲ್ಲ ಎಂದು ಪ್ರಶ್ನಿಸಿರುವ ಸತ್ಯಮೇವ ಜಯತೇ ಸಂಘಟನೆಗಳ ಒಕ್ಕೂಟ, ನಾಗರಿಕ ಸೇವಾ ಟ್ರಸ್ಟ್‌ ಅನುಮಾನವನ್ನು ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಇದನ್ನು ಓದಿದ್ದೀರಾ? ಸೌಜನ್ಯ ಪ್ರಕರಣ: ಓದುಗರಿಗೆ ದ್ರೋಹ ಬಗೆದ ‘ಹೆಗ್ಗಡೆವಾಣಿ’ಗೆ ನಾಗರಿಕ ಸೇವಾ ಟ್ರಸ್ಟ್ ಪತ್ರ

ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು ದೇವಸ್ಥಾನದ ಹೆಸರು & ವಿಳಾಸ, ದೇವಾಲಯದ ಮೂಲ ಮತ್ತು ಇತಿಹಾಸ, ದೇವಸ್ಥಾನದ ಭೂಮಿ, ಕಟ್ಟಡ, ಠೇವಣಿಗಳ ಮತ್ತು ಚಿನ್ನಾಭರಣಾದಿ ಸಕಲ ಚರ ಸೊತ್ತುಗಳ ವಿವರ, ವಾರ್ಷಿಕ ಆದಾಯ ಮತ್ತು ಖರ್ಚಿನ ವಿವರ ( ಆಡಿಟ್ ಆದ ಲೆಕ್ಕಪತ್ರದ ಪ್ರತಿಸಹಿತ) ನೀಡಬೇಕು. ಆದರೆ ಈ ಮಾಹಿತಿಯನ್ನು ನೀಡಲು ಧರ್ಮಾಧಿಕಾರಿಗಳು ನಿರಾಕರಿಸಿದ್ದಾರೆ.

ವೀರೇಂದ್ರ ಹೆಗ್ಗಡೆ
ಧರ್ಮಸ್ಥಳ1

ಇದಾದ ಬೆನ್ನಲ್ಲೇ ಈ ಮಾಹಿತಿಗಳನ್ನು ಗುಟ್ಟಾಗಿಟ್ಟಿದ್ದಾರೆ ಎಂದರೆ ಸಂಶಯ ಬರುತ್ತಿದೆ ಎಂದು ನಾಗರಿಕ ಸೇವಾ ಟ್ರಸ್ಟ್‌ ಹೇಳಿದೆ. “ಪ್ರತಿವರ್ಷ ಲೆಕ್ಕಪತ್ರ ನೀಡಬೇಕು. ಸಾರ್ವಜನಿಕರಿಂದ ನಗದು ಕಾಣಿಕೆ & ದೇಣಿಗೆ, ವಸ್ತುರೂಪದ ದೇಣಿಗೆ ಪಡೆಯುವ ದೇವಾಲಯ ಅದರ ಲೆಕ್ಕಪತ್ರವನ್ನು ಸಾರ್ವಜನಿಕರ ಮುಂದೆ ಇಡಬೇಕು. ಆದರೆ ಮುಚ್ಚಿಡಲಾಗುತ್ತಿದೆ. ಈ ಮಾಹಿತಿಯನ್ನು ಗುಟ್ಟಾಗಿಟ್ಟಿದ್ದಾರೆ ಎಂದರೆ ಸಂಶಯ ಬರುವುದಿಲ್ಲವೇ” ಎಂದು ಪ್ರಶ್ನಿಸಿದೆ.

“ದೇವಳದ ಸಾವಿರಾರು ರೂಪಾಯಿ ಕೋಟಿ ಮೌಲ್ಯದ ಆಸ್ತಿ & ಹಣ ಏನಾಗಿದೆ ಮತ್ತು ಏನಾಗುತ್ತಿದೆ. 1050ಕ್ಕೂ ಅಧಿಕ ಎಕರೆ ದೇವಾಲಯದ ಭೂಮಿಯನ್ನು ಹೆಗ್ಗಡೆ ಕುಟುಂಬ ಕಬಳಿಸಿದ್ದಕ್ಕೆ ದಾಖಲೆ ಇದೆ. ದೇವಳದ ಆದಾಯ ಬಳಕೆ ಬಗ್ಗೆಯೂ ಮಾಹಿತಿ & ಸಾಕ್ಷಿಗಳಿವೆ” ಎಂದು ಸತ್ಯಮೇವ ಜಯತೇ ಸಂಘಟನೆಗಳ ಒಕ್ಕೂಟ, ನಾಗರಿಕ ಸೇವಾ ಟ್ರಸ್ಟ್ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...