ಹಿರಿಯ ನಟಿ ಹೇಮಾ ಚೌಧುರಿಗೆ ತೀವ್ರ ಅನಾರೋಗ್ಯ : ಐಸಿಯುನಲ್ಲಿ ಚಿಕಿತ್ಸೆ

Date:

ಹೆಸರಾಂತ ಹಿರಿಯ ನಟಿ ಹೇಮಾ ಚೌಧುರಿ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ.

ಹೇಮಾ ಚೌಧುರಿ ಅವರು 70 ದಶಕದಲ್ಲೇ ಚಿತ್ರರಂಗಕ್ಕೆ ಕಾಲಿಟ್ಟರು. ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೇ, ಅಮೃತವರ್ಷಿಣಿಧಾರಾವಾಹಿ ಸೇರಿದಂತೆ ಹಲವು ಧಾರಾವಾಹಿಗಳಲ್ಲೂ ಬಣ್ಣ ಹಚ್ಚಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಎರಡು ದಿನಗಳ ಹಿಂದೆ ಹೇಮಾ ಚೌಧುರಿಗೆ ಬ್ರೈನ್ ಹ್ಯಾಮರೇಜ್ಆಗಿತ್ತು. ಈ ಹಿನ್ನೆಲೆ, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೇಮಾ ಅವರ ಮಗ ಐರ್ಲೆಂಡ್ನಲ್ಲಿ ಇದ್ದು, ಅವರ ಬರುವಿಕೆಗಾಗಿ ಕಾಯಲಾಗುತ್ತಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನ : ರಾಘವೇಂದ್ರ ಶೆಟ್ಟಿಗಾರ್

ಇತ್ತೀಚೆಗೆ ನಟಿ ಲೀಲಾವತಿ ಅವರು ನಿಧನ ಹೊಂದಿದರು. ಲೀಲಾವತಿಯವರ 11ನೇ ದಿನದ ಕಾರ್ಯಕ್ಕೆ ಹೇಮಾ ಅವರು ಆಗಮಿಸಿದ್ದರು. ವಿನೋದ್ರಾಜ್ಗೆ ಸಾಂತ್ವನ ಹೇಳಿದ್ದರು. ಈಗ ಅವರಿಗೆ ಏಕಾಏಕಿ ರೀತಿ ಆಗಿದ್ದು ಆಘಾತ ಉಂಟುಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ...